ಬ್ರೇಕಿಂಗ್ ನ್ಯೂಸ್
26-04-21 04:30 pm Headline Karnataka News Network ದೇಶ - ವಿದೇಶ
Photo credits : yosuccess
ವಾಷಿಂಗ್ಟನ್, ಏ.26: ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗಿರುವ ಭಾರತದಲ್ಲಿನ ಪರಿಸ್ಥಿತಿ ಕುರಿತು ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ ಟ್ವೀಟ್ ಮಾಡಿದ ಬೆನ್ನಲ್ಲೇ ಗೂಗಲ್ ಸಿಇಒ ಭಾರತ ಮೂಲದ ಸುಂದರ್ ಪಿಚೈ ಅವರೂ ಕೂಡ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಂದರ್ ಪಿಚೈ ಅವರು, ಭಾರತದಲ್ಲಿನ ಕೋವಿಡ್-19 ಸಾಂಕ್ರಾಮಿಕದ ಪರಿಸ್ಥಿತಿ ನೋಡಿ ಮನಸ್ಸು ಛಿದ್ರವಾಗಿದೆ. ಗೂಗಲ್ ಈ ಕೂಡಲೇ ಭಾರತಕ್ಕೆ ವೈದ್ಯಕೀಯ ಸರಬರಾಜು, ಹೆಚ್ಚಿನ ಅಪಾಯದಲ್ಲಿರುವ ಸಮುದಾಯಗಳನ್ನು ಬೆಂಬಲಿಸುವ ಉದ್ದೇಶದಿಂದ ಮತ್ತು ನಿರ್ಣಾಯಕ ಮಾಹಿತಿಯನ್ನು ಹರಡಲು ಸಹಾಯ ಮಾಡುವ ಉದ್ದೇಶದಿಂದ 135 ಕೋಟಿ ರೂ ಅನುದಾನ ನೀಡಲಿದೆ ಎಂದು ಟ್ವೀಟ್ ಮಾಡಿದ್ದಾರೆ.
Devastated to see the worsening Covid crisis in India. Google & Googlers are providing Rs 135 Crore in funding to @GiveIndia, @UNICEF for medical supplies, orgs supporting high-risk communities, and grants to help spread critical information.https://t.co/OHJ79iEzZH
— Sundar Pichai (@sundarpichai) April 26, 2021
ಇದಕ್ಕೂ ಮೊದಲು ಇದೇ ವಿಚಾರವಾಗಿ ಟ್ವೀಟ್ ಮಾಡಿದ್ದ ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ, 'ಭಾರತದ ಪ್ರಸ್ತುತ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ. ಈ ಸಂಕಷ್ಟದ ಪರಿಸ್ಥಿಯಿಲ್ಲಿ ಅಮೆರಿಕ ಸರ್ಕಾರವು ಭಾರತಕ್ಕೆ ನೆರವು ನೀಡಲು ಮುಂದಾಗಿದೆ. ಇದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ. ಅಂತೆಯೇ ಮೈಕ್ರೋಸಾಫ್ಟ್ ಸಂಸ್ಥೆ ತನ್ನ ಧ್ವನಿ, ಸಂಪನ್ಮೂಲ, ಮತ್ತು ತಂತ್ರಜ್ಞಾನವನ್ನು ಭಾರತದಲ್ಲಿನ ಪ್ರಸ್ತುತ ಪರಿಸ್ಥಿತಿಯಲ್ಲಿ ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ಮತ್ತು ನಿರ್ಣಾಯಕ ಆಮ್ಲಜನಕ ಸಾಂದ್ರತೆಯ ಸಾಧನಗಳ ಖರೀದಿಯನ್ನು ಬೆಂಬಲಿಸಲು ಬಳಸುವುದನ್ನು ಮುಂದುವರಿಸುತ್ತದೆ ಎಂದು ಭರವಸೆ ನೀಡಿದ್ದರು.
ಇನ್ನು ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಪ್ರತಿನಿತ್ಯ 3.50ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ. ದೇಶಾದ್ಯಂತ ಚಿಕಿತ್ಸೆಗಾಗಿ ಸೋಂಕಿತರು ಪರದಾಡುತ್ತಿದ್ದು, ಆಸ್ಪತ್ರೆಗಳ ಬೆಡ್ ಗಳು ಸಂಪೂರ್ಣ ಭರ್ತಿಯಾಗಿದ್ದು, ಬೆಡ್ ಗಳಿಲ್ಲದೆ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡುತ್ತಿದ್ದಾರೆ. ಅಂತೆಯೇ ಇತ್ತ ಅಸ್ಪತ್ರೆಗೆ ದಾಖಲಾದ ಸೋಂಕಿತರೂ ಕೂಡ ಆಕ್ಸಿಜನ್ ಕೊರತೆಯಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದು, ಸಾಕಷ್ಟು ರೋಗಿಗಳು ಆಕ್ಸಿಜನ್ ಇಲ್ಲದೇ ಸಾವನ್ನಪ್ಪುತ್ತಿದ್ದಾರೆ. ಅಂತೆಯೇ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಕೂಡ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಶವಸಂಸ್ಕಾರಕ್ಕಾಗಿ ಶವಾಗಾರಗಳ ಮುಂದೆ ಮೃತರ ಸಂಬಂಧಿಕರು ಗಂಟೆಗಟ್ಟಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
Google and Alphabet CEO Sundar Pichai has pledged support in India's battle against the second wave of Covid-19, which Prime Minister Narendra Modi had referred to as a 'toofan' (storm) while addressing his radio program 'Mann Ki Baat' on Sunday.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm