ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ; 4 ರೋಗಿಗಳ ಸಾವು

28-04-21 10:15 am       Headline Karnataka News Network   ದೇಶ - ವಿದೇಶ

ಮುಂಬ್ರಾದ ಕೌಸಾದಲ್ಲಿನ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ 3.40ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

Photo credits : Indiatoday

ಮುಂಬೈ, ಏ. 28: ಮಹಾರಾಷ್ಟ್ರದ ಥಾಣೆಯಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ರೋಗಿಗಳು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮುಂಬ್ರಾದ ಕೌಸಾದಲ್ಲಿನ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ 3.40ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಘಟನೆ ನಡೆಯುತ್ತಿದ್ದಂತೆ ಮೂರು ಫೈರ್ ಇಂಜಿನ್ ಹಾಗೂ ಐದು ಆಂಬುಲೆನ್ಸ್‌ಗಳು ಸ್ಥಳಕ್ಕೆ ಆಗಮಿಸಿವೆ. ಸ್ವಲ್ಪ ಸಮಯದಲ್ಲೇ ಬೆಂಕಿಯನ್ನು ನಂದಿಸಲಾಗಿದೆ. ಐಸಿಯುನಲ್ಲಿದ್ದ ಆರು ಮಂದಿ ಸೇರಿದಂತೆ ಇಪ್ಪತ್ತು ರೋಗಿಗಳನ್ನು ರಕ್ಷಿಸಲಾಗಿದೆ. ಆದರೆ ಆಸ್ಪತ್ರೆಯಿಂದ ಸಾಗಿಸುವ ಸಂದರ್ಭ ನಾಲ್ಕು ರೋಗಿಗಳು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಶಾಸಕ ಹಾಗೂ ಮಹಾರಾಷ್ಟ್ರ ಸಚಿವ ಜಿತೇಂದರ್ ಅಹ್ವಾದ್ ತಿಳಿಸಿದ್ದಾರೆ. ಬೆಂಕಿಯಿಂದ ಆಸ್ಪತ್ರೆಯ ಮೊದಲ ಅಂತಸ್ತು ಸಂಪೂರ್ಣ ಸುಟ್ಟು ಕರಕಲಾಗಿದೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ಈ ಘಟನೆಗೆ ಸಂತಾಪ ಸೂಚಿಸಿದ್ದು, ಮೃತಪಟ್ಟವರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಕುರಿತು ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸುವುದಾಗಿ ತಿಳಿಸಿದ್ದಾರೆ.

ಥಾಣೆ ಮುನಿಸಿಪಾಲ್ ಕಾರ್ಪೊರೇಷನ್, ಪೊಲೀಸರು ಹಾಗೂ ವೈದ್ಯಕೀಯ ಅಧಿಕಾರಿಗಳನ್ನು ಸಮಿತಿ ಒಳಗೊಂಡಿದೆ. ಈಚೆಗಸ್ಟೆ ವಿರಾರ್‌ನಲ್ಲಿನ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ ಸಂಭವಿಸಿ 15 ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು.

Four patients died after a fire broke out at a private hospital near Thane, Maharashtra, on Wednesday morning.