ಬ್ರೇಕಿಂಗ್ ನ್ಯೂಸ್
30-04-21 01:50 pm Headline Karnataka News Network ದೇಶ - ವಿದೇಶ
ಇಸ್ರೇಲ್, ಎ 30: ಯಹೂದಿಯರ ಧಾರ್ಮಿಕ ಸ್ಥಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 44 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಉತ್ತರ ಇಸ್ರೇಲ್ ನಲ್ಲಿ ನಡೆದಿದ್ದು, ಭಾರೀ ಜನಸ್ತೋಮದಿಂದಾಗಿ ಗಾಯಗೊಂಡವರನ್ನು ರಕ್ಷಿಸಲು ರಕ್ಷಣಾ ತಂಡಗಳು ಹರಸಾಹಸಪಡುತ್ತಿರುವುದಾಗಿ ವರದಿ ತಿಳಿಸಿದೆ.
ಎರಡನೇ ಶತಮಾನದ ಟಾಲ್ಮುಡಿಕ್ ಸಂತ ರಬ್ಬಿ ಶಿಮೊನ್ ಬಾರ್ ಯೋಚೈ ಅವರ ಸಮಾಧಿ ಸ್ಥಳವಾದ ಮೆರಾನ್ನಲ್ಲಿ ಸಂಪ್ರದಾಯವಾದಿ ಯಹೂದಿಗಳ ಜನಸ್ತೋಮ ಸೇರಿದ ವೇಳೆ ಈ ಕಾಲ್ತುಳಿತ ಸಂಭವಿಸಿದೆ ಎಂದು ವರದಿ ವಿವರಿಸಿದೆ.


ಕಳೆದ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಿದ್ದರಿಂದ ಸಾಮೂಹಿಕ ಧಾರ್ಮಿಕ ಕಾರ್ಯಕ್ರಮ ನಡೆದಿರಲಿಲ್ಲವಾಗಿತ್ತು. ಈ ವರ್ಷ ಯಾತ್ರಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಸಂಭ್ರಮಾಚರಣೆಯನ್ನು ಯಶಸ್ವಿಗೊಳಿಸಲು ಶ್ರಮಿಸಿದ ಸಂದರ್ಭದಲ್ಲಿ ಈ ದುರಂತ ನಡೆದಿದೆ ಎಂದು ವರದಿ ತಿಳಿಸಿದೆ.
ಈ ಬಾರಿಯೂ ಕೋವಿಡ್ ಭೀತಿಯ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಯಹೂದಿಗಳು ಸೇರಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಗ್ಯ ಅಧಿಕಾರಿಗಳು ವಿಧಿಸಿದ್ದ ಕೋವಿಡ್ ನಿಯಮ ಉಲ್ಲಂಘಿಸಿ ಜನಸಮೂಹ ನೆರೆದಿದ್ದು, ಈ ವೇಳೆ ಕುಳಿತುಕೊಳ್ಳಲು ನಿರ್ಮಿಸಿದ್ದ ಸ್ಟೇಡಿಯಂ ಕುಸಿದು ಬಿದ್ದಿದ್ದರಿಂದ ಗಾಬರಿಗೊಂಡ ಜನರು ದಿಕ್ಕಾಪಾಲಾಗಿ ಓಡಲು ಆರಂಭಿಸಿದ್ದು, ಕಾಲ್ತುಳಿತ ಸಂಭವಿಸಲು ಕಾರಣವಾಗಿದೆ ಎಂದು ಹೇಳಿದೆ.
ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು, 'ಭೀಕರ ದುರಂತ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
A massive stampede at a densely packed Jewish pilgrimage site killed at least 44 people in northern Israel on Friday, with rescue workers facing chaotic crowds while trying to evacuate the injured.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm