ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧ ಮೇ 31ರವರೆಗೆ ವಿಸ್ತರಣೆ

30-04-21 02:22 pm       Headline Karnataka News Network   ದೇಶ - ವಿದೇಶ

ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧವನ್ನು ಮೇ 31ರವರೆಗೆ ವಿಸ್ತರಣೆ ಮಾಡಿರುವುದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.

Photo credits : Shutterstock

ನವದೆಹಲಿ, ಏಪ್ರಿಲ್ 30: ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧವನ್ನು ಮೇ 31ರವರೆಗೆ ವಿಸ್ತರಣೆ ಮಾಡಿರುವುದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.

ಭಾರತದಿಂದ ಹೊರಹೋಗುವ ಇಲ್ಲವೇ ಒಳಬರುವ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಯನ್ನು ಮೇ 31ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಿಜಿಸಿಎ ಹೇಳಿದೆ.

ವಂದೇ ಭಾರತ್ ಯೋಜನೆಯಲ್ಲಿ ಸಂಚರಿಸುವ ವಿಮಾನಗಳಿಗೆ ಯಾವುದೇ ರೀತಿಯ ನಿರ್ಬಂಧಗಳಿಲ್ಲ. ಈ ಆದೇಶ ಸರಕು ವಿಮಾನ ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ. ದೇಶದಲ್ಲಿ ಇಂದು 3,86,452 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 3498 ಮಂದಿ ಸಾವನ್ನಪ್ಪಿದ್ದಾರೆ, 2,87,540 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಒಟ್ಟು 1,87,62,976 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೂ 1,53,84,418 ಮಂದಿ ಗುಣಮುಖರಾಗಿದ್ದಾರೆ. 2,08,330 ಮಂದಿ ಮೃತಪಟ್ಟಿದ್ದಾರೆ, 31,70,228 ಸಕ್ರಿಯ ಪ್ರಕರಣಗಳಿವೆ, ಇದುವರೆಗೂ ಒಟ್ಟು 15,22,45,179 ಲಸಿಕೆ ವಿತರಿಸಲಾಗಿದೆ. ಒಟ್ಟು 28,63,92,086 ಮಾದರಿಗಳನ್ನು ಏಪ್ರಿಲ್ 29ರವರೆಗೆ ಪರೀಕ್ಷಿಸಲಾಗಿದೆ. ಏಪ್ರಿಲ್ 29ರಂದು ಒಂದೇ ದಿನ, 19,20,107 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

India has extended the suspension of scheduled international flights till May 31, 2021. The restriction shall not apply to international all-cargo operations and flights specifically approved by DGCA.