ಬ್ರೇಕಿಂಗ್ ನ್ಯೂಸ್
01-05-21 11:57 am Headline Karnataka News Network ದೇಶ - ವಿದೇಶ
Photo credits : webmd
ನವದೆಹಲಿ, ಮೇ.01: ಭಾರತದಲ್ಲಿ ಕೊರೋನಾ ಆರ್ಭಟ ಭಾರೀ ಆತಂಕಕಾರಿ ಏರಿಕೆಯಾಗುತ್ತಿದ್ದು, ಶುಕ್ರವಾರ ಸೋಂಕು ಮತ್ತೊಂದು ದಾಖಲೆ ಸೃಷ್ಟಿಸಿದೆ. ಶುಕ್ರವಾರ ತಡರಾತ್ರಿಯವರೆಗೆ ಒಂದೇ ದಿನ 4 ಲಕ್ಷ ಸೋಂಕು ಪ್ರಕರಣಗಳು ದಾಖಲಾಗಿವೆ.
ಶುಕ್ರವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದಾಖಲೆಯ 3,86,452 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಇದೇ ವೇಳೆ 3,498 ಸಾವು ಸಂಭವಿಸಿದ್ದವು. ಬಳಿಕ ತಡರಾತ್ರಿವರೆಗೆ 4 ಲಕ್ಷ ಪ್ರಕರಣಗಳು ವರದಿಯಾಗಿದೆ ಎಂದು ‘ಎಡೆಲ್ವೀಸ್’ ಸಂಸ್ಥೆ ವರದಿ ಮಾಡಿದೆ.

ಶುಕ್ರವಾರ ಬೆಳಗ್ಗಿನವರೆಗಿನ ಅಂಕಿ ಅಂಶದ ಪ್ರಕಾರ, ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 31.70 ಲಕ್ಷಕ್ಕೆ ತಲುಪಿದೆ. ಚೇತರಿಕೆ ಪ್ರಮಾಣ ಶೇ.81.99ಕ್ಕೆ ಕುಸಿತ ಕಂಡಿದೆ. ಒಟ್ಟು ಸೋಂಕಿತರ ಸಂಖ್ಯೆ 1.87 ಕೋಟಿಗೆ ತಲುಪಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 2,08,330ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 1.53 ಕೋಟಿ ಮಂದಿ ಗುಣಮುಖರಾಗಿದ್ದಾರೆ.

73% ಸೋಂಕು 10 ರಾಜ್ಯಗಳಲ್ಲಿ:
ಶುಕ್ರವಾರ ಬೆಳಗ್ಗಿನವರೆಗೆ ಪತ್ತೆಯಾಗಿರುವ ಹೊಸ ಸೋಂಕಿನ ಪೈಕಿ ಶೇ.73.05ರಷ್ಟುಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಕೇವಲ 10 ರಾಜ್ಯಗಳಲ್ಲಿ ದೃಢಪಟ್ಟಿದೆ. ಉತ್ತರ ಪ್ರದೇಶ, ದೆಹಲಿ, ಕೇರಳ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ರಾಜಸ್ಥಾನ ಉಳಿದ ರಾಜ್ಯಗಳು. ಇನ್ನು ದೇಶದ ಸಕ್ರಿಯ ಕೇಸುಗಳ ಪೈಕಿ ಶೇ.78.18ರಷ್ಟುಕೇವಲ 11 ರಾಜ್ಯಗಳಲ್ಲಿ ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಹಾಗೆಯೇ ಶುಕ್ರವಾರ ಸೋಂಕಿಗೆ ಬಲಿಯಾದವರ ಪೈಕಿ ಶೇ.77.44ರಷ್ಟುಸಾವು 10 ರಾಜ್ಯಗಳಲ್ಲಿ ಸಂಭವಿಸಿದೆ. ಮಹಾರಾಷ್ಟ್ರವೊಂದರಲ್ಲಿಯೇ 771 ಮೃತಪಟ್ಟಿದ್ದಾರೆ. ಉಳಿದಂತೆ ದೆಹಲಿಯಲ್ಲಿ 395, ಉತ್ತರ ಪ್ರದೇಶದಲ್ಲಿ 270, ಕರ್ನಾಟಕದಲ್ಲಿ 270, ಛತ್ತೀಸ್‌ಗಢದಲ್ಲಿ 251, ಗುಜರಾತ್‌ನಲ್ಲಿ 180, ರಾಜಸ್ಥಾನದಲ್ಲಿ 158ಮಂದಿ ಅಸುನೀಗಿದ್ದಾರೆ.
India's coronavirus cases hit a grim global record with 4,01,993 fresh infections in the last 24 hours. 3,523 deaths were reported. The third phase of the world's largest vaccination drive has started today even as several states flag shortage.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm