ಬ್ರೇಕಿಂಗ್ ನ್ಯೂಸ್
03-05-21 10:07 am Headline Karnataka News Network ದೇಶ - ವಿದೇಶ
Photo credits : Indianexpress
ಬೆಂಗಳೂರು, ಮೇ 3: ಪಂಚ ರಾಜ್ಯಗಳ ಚುನಾವಣೆ ಮತ್ತು ರಾಜ್ಯದಲ್ಲಿ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಮತಾ ಬ್ಯಾನರ್ಜಿ ಗಟ್ಟಿತನ ನಮಗೆ ಮಾದರಿ, ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ ಎಂದಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಮನದಾಳ ಹೇಳಿಕೊಂಡಿರುವ ಕುಮಾರಸ್ವಾಮಿ, ಬಸವಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ. ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರು, ಮುಖಂಡರ ಪರವಾಗಿ ನಾನು ಇರಲಿದ್ದೇನೆ. ಅಪಪ್ರಚಾರ, ಹಣಬಲ ನಮ್ಮ ಗೆಲುವು ಕಸಿದಿರಬಹುದು. ನಮ್ಮ ಅಸ್ತಿತ್ವವನ್ನಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಣಸಲು ನಾವು ಶಕ್ತರೆಂಬ ಸಂದೇಶ ರವಾನಿಸಿದ ಕಾರ್ಯಕರ್ತರಿಗೆ ನಾನು ಋಣಿ ಎಂದಿದ್ದಾರೆ.

ಕರ್ನಾಟಕದ ಉಪ ಚುನಾವಣೆ ಫಲಿತಾಂಶದ ಜೊತೆಗೇ, 5 ರಾಜ್ಯಗಳ ಚುನಾವಣೆಗಳ ಫಲಿತಾಂಶಗಳೂ ಬಂದಿವೆ. ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎಂಬ ಸಂದೇಶ ಹೊರಬಿದ್ದಿದೆ. ಸಾಂದರ್ಭಿಕ ಕಾರಣಗಳಿಗಾಗಿ ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ.
"ಅಧಿಕಾರ, ಹಣ, ಒತ್ತಡ, ಬಲ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಗಟ್ಟಿತನ ನಮಗೆ ಮಾದರಿ. ಜೆಡಿಎಸ್‌ನಂತೆಯೇ ದಶಕಗಳ ಕಾಲ ರಾಜಕೀಯ ವನವಾಸ ಅನುಭವಿಸಿದ, ಸಂಕಷ್ಟ ಅನುಭವಿಸಿದ, ಕಠಿಣ ಸಂದರ್ಭದಲ್ಲೂ ಮುಂದಡಿ ಇಡುತ್ತಲೇ ಮುಂದೆ ಸಾಗಿದ ಡಿಎಂಕೆ ಮತ್ತು ಅದರ ನಾಯಕರ ತಾಳ್ಮೆ ನಮಗೆ ಪಾಠವಾಗಲಿದೆ.

ಅಧಿಕಾರ ದುರ್ಬಳಕೆಯ, ಅಪಪ್ರಚಾರದ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಹೊರಹೊಮ್ಮಿದ್ದಾರೆ. ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತು ಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿ ಹಾಕಲಾರವು. ಜನಮನಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ತಾಜಾ ನಿದರ್ಶನ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ತನ್ನ ಸಾಮರ್ಥ್ಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ ಎಂದೂ ಅವರು ಹೇಳಿದ್ದಾರೆ.
I want to repeat that the toughness of Mamata Banerjee who rose against the immoral experiments of power is going to be our model and the patience of DMK leaders who managed to move forward despite adverse political situation will be a lesson for us.
— H D Kumaraswamy (@hd_kumaraswamy) May 2, 2021
10/12
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm