ಬ್ರೇಕಿಂಗ್ ನ್ಯೂಸ್
12-05-21 03:09 pm Headline Karnataka News Network ದೇಶ - ವಿದೇಶ
Photo credits : indiatv
ಥಾಣೆ, ಮೇ 12: ಅಪಾಯಕಾರಿಯಾಗಿ ಪರಿಣಮಿಸಿರುವ ಬ್ಲಾಕ್ ಫಂಗಸ್ ರೋಗಕ್ಕೆ ತುತ್ತಾಗಿ ಇಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ರೋಗಕ್ಕೆ ತುತ್ತಾಗಿ ಆರು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ, ಥಾಣೆ ಗ್ರಾಮೀಣ ಪ್ರದೇಶದಲ್ಲಿ 38 ವರ್ಷದ ಕೋವಿಡ್ ಸೋಂಕಿತ ಮತ್ತು ಡೊಂಬಿವಿಲಿಯಲ್ಲಿ ಮತ್ತೊಬ್ಬ ರೋಗಿ ಬ್ಲಾಗ್ ಫಂಗಸ್ ಕಾರಣದಿಂದ ಸಾವನ್ನಪ್ಪಿದ್ದಾನೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಅಶ್ವಿನಿ ಪಾಟೀಲ್ ತಿಳಿಸಿದ್ದಾರೆ.
ಈ ನಡುವೆ, ಮಹಾರಾಷ್ಟ್ರದಲ್ಲಿ ಸುಮಾರು 2 ಸಾವಿರದಷ್ಟು ಬ್ಲಾಕ್ ಫಂಗಸ್ ರೋಗಿಗಳು ಇರುವ ಸಾಧ್ಯತೆಯಿದೆ. ಕೋವಿಡ್ ಸೋಂಕಿತರು ಹೆಚ್ಚಾದಂತೆ ಬ್ಲಾಕ್ ಫಂಗಸ್ ರೋಗಿಗಳ ಸಂಖ್ಯೆಯೂ ಹೆಚ್ಚಲಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.
ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಜೊತೆ ಸೇರ್ಪಡೆಯಾಗಿರುವ ಚಿಕಿತ್ಸಾ ಕೇಂದ್ರಗಳನ್ನು ಬ್ಲಾಕ್ ಫಂಗಸ್ ಚಿಕಿತ್ಸಾ ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ಆರೋಗ್ಯ ಸಚಿವ ತಿಳಿಸಿದ್ದಾರೆ.
ಸಾಮಾನ್ಯವಾಗಿ ಸಕ್ಕರೆ ಕಾಯಿಲೆ ಇರುವ ಕೋವಿಡ್ ಸೋಂಕಿತರಲ್ಲಿ ಬ್ಲಾಕ್ ಫಂಗಸ್ ಕಾಯಿಲೆ ಕಂಡುಬರುತ್ತಿದೆ. ಕೋವಿಡ್ ಸೋಂಕಿತರು ಬ್ಲಾಕ್ ಫಂಗಸ್ ಬಗ್ಗೆ ಹೆದರಿಕೊಳ್ಳುವ ಅಗತ್ಯವಿಲ್ಲ. ಮಧುಮೇಹಿಗಳು ತಮ್ಮಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಎಂದು ಅಶ್ವಿನಿ ಪಾಟೀಲ್ ತಿಳಿಸಿದ್ದಾರೆ.
ಸಾಮಾನ್ಯವಾಗಿ ಬ್ಲಾಕ್ ಫಂಗಸ್ ಸೋಂಕು ಕಂಡುಬಂದವರಲ್ಲಿ ತಲೆನೋವು, ಜ್ವರ, ಕಣ್ಣಿನ ಕೆಳಭಾಗದಲ್ಲಿ ನೋವು, ಮೂಗು ಕಟ್ಟಿಕೊಳ್ಳುವುದು ಹಾಗೂ ದೃಷ್ಟಿ ಅಸ್ಪಷ್ಟವಾಗುವುದು ಕಂಡುಬರುತ್ತದೆ ಎಂದು ಅಶ್ವಿನಿ ಹೇಳಿದ್ದಾರೆ.
Describing the current COVID-19 crisis as the biggest India has ever faced, an eminent Indian-American philanthropist and venture capitalist from Silicon Valley has urged the diaspora community to help support the Indian people.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm