ಬ್ರೇಕಿಂಗ್ ನ್ಯೂಸ್
18-05-21 10:58 am Headline Karnataka News Network ದೇಶ - ವಿದೇಶ
Photo credits : Public TV
ನವದೆಹಲಿ, ಮೇ 18: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ವೈದ್ಯಕೀಯ ಸಂಘದ(ಐಎಂಎ) ಮಾಜಿ ರಾಷ್ಟ್ರೀಯ ಅಧ್ಯಕ್ಷ ಡಾ.ಕೆ.ಕೆ ಅಗರ್ವಾಲ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ 11.30ಕ್ಕೆ ಡಾ.ಕೆ.ಕೆ ಅಗರ್ವಾಲ್ ಕೊನೆಯುಸಿರೆಳೆದಿದ್ದಾರೆ.
ಕೊರೊನಾ ಪಾಸಿಟಿವ್ ಆಗಿದ್ದ ಡಾ.ಕೆ.ಕೆ ಅಗರ್ವಾಲ್(62) ಕಳೆದ ಕೆಲವು ದಿನಗಳಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸೋಮವಾರ ರಾತ್ರಿ ನಿಧನರಾಗಿದ್ದಾರೆ.
ಡಾ.ಕೆ.ಕೆ ಅಗರ್ವಾಲ್ ವೈದ್ಯರಾಗಿದ್ದಾಗಿನಿಂದಲೂ ತಮ್ಮ ಜೀವನವನ್ನು ಸಾರ್ವಜನಿಕರ ಹಿತಕ್ಕಾಗಿ ಮೀಸಲಿಟ್ಟಿದ್ದರು. ಸಾಮಾನ್ಯ ಜನರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಜನ ಸಾಮಾನ್ಯರಿಗೆ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದರು. ಇದಕ್ಕಾಗಿ ಹಲವಾರು ವೀಡಿಯೋ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರು. ಜಾಲತಾಣದ ಮೂಲಕ 100 ಮಿಲಿಯನ್ ಜನರನ್ನು ತಲುಪಿದ್ದಲ್ಲದೆ, ತಮ್ಮ ಹೆಸರನ್ನು ಭಾರತ ಮಾತ್ರವಲ್ಲದೆ ಜಗದಗಲ ವ್ಯಾಪಿಸಿದ್ದರು.
ಖ್ಯಾತ ಹೃದಯ ತಜ್ಞರಾಗಿದ್ದ ಅಗರ್ವಾಲ್ ಹಾರ್ಟ್ ಕೇರ್ ಫೌಂಡೇಶನ್ ಅಧ್ಯಕ್ಷರಾಗಿದ್ದರು. 2010 ರಲ್ಲಿ ಅಗರ್ವಾಲ್ ಅವರನ್ನು ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಲಾಗಿತ್ತು.
KK Aggarwal, a former president of the Indian Medical Association and a prominent face of the medical fraternity in the country, died last night of Covid. The Padma Shri award winner had been on ventilator support at Delhi's AIIMS hospital for the past few days, according to his family.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm