ದೇಶದಲ್ಲಿ ಕೊರೋನಾ ಚೇತರಿಕೆ ಪ್ರಮಾಣದಲ್ಲಿ ಭಾರಿ ಏರಿಕೆ!!

28-08-20 01:05 pm       Dhruthi Anchan - Correspondant   ದೇಶ - ವಿದೇಶ

ಕೊರೋನಾದಿಂದ ಇದುವರೆಗೂ 25,23,771 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೋಂಕಿತರ ಪೈಕಿ ಮರಣ ಪ್ರಮಾಣ ಕಡಿಮೆಯಾಗುತ್ತಿದೆ ಎಂಬುದು ಸಮಾಧಾನಕರ ಸಂಗತಿ. 

ಆಗಸ್ಟ್ 28: ಕೊರೋನಾದಿಂದ ಇದುವರೆಗೂ 25,23,771 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೋಂಕಿತರ ಪೈಕಿ ಮರಣ ಪ್ರಮಾಣ ಕಡಿಮೆಯಾಗುತ್ತಿದೆ ಎಂಬುದು ಸಮಾಧಾನಕರ ಸಂಗತಿ. 

ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ ಸಾವಿನ ಪ್ರಮಾಣ ಶೇ. 1.82% ನಷ್ಟು ಇಳಿದಿದ್ದಲ್ಲದೇ, ಭಾರತದಲ್ಲಿ ಚೇತರಿಕೆ ಪ್ರಮಾಣವು ಶೇ. 76.28 ನಷ್ಟು ಕಡಿಮೆ ಆಗಿದೆ. 

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 75,760 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದೆ. ಸದ್ಯಕ್ಕೆ ಮಹಾರಾಷ್ಟ್ರದಲ್ಲಿ 1.5 ಲಕ್ಷಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು ನಂತರದ ಸ್ಥಾನದಲ್ಲಿ ತಮಿಳುನಾಡು,  ದೆಹಲಿ,  ಕನಾ೯ಟಕ, ಗುಜರಾತ್ ಮತ್ತು ಪಶ್ಚಿಮ ಬಂಗಾಳಗಳಿವೆ. ಈ ಆರು ರಾಜ್ಯಗಳು ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿವೆ.ಮತ್ತೊಂದೆಡೆ  ಕರೋನಾದ ಸಕ್ರಿಯ ಪ್ರಕರಣಗಳಲ್ಲಿ, ಭಾರತ ಈಗ ಬ್ರೆಜಿಲ್ ಮತ್ತು ಅಮೇರಿಕವನ್ನು  ಮೀರಿಸಿದೆ. 

ಅದೇನೆ ಇರಲಿ ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಚೇತರಿಕೆ ಪ್ರಮಾಣವು ನಿರಂತರವಾಗಿ ಹೆಚ್ಚುತ್ತಿದ್ದು, ಜನರಲ್ಲಿ ಮನಸ್ಸಲ್ಲಿ ಒಂದಿಷ್ಟು ಭಯ ಕಡಿಮೆಯಾಗುವಂತೆ ಮಾಡಿದೆ ಎಂದರೆ ತಪ್ಪಾಗಲಾರದು.