ಬ್ರೇಕಿಂಗ್ ನ್ಯೂಸ್
25-05-21 01:07 pm Headline Karnataka News Network ದೇಶ - ವಿದೇಶ
ನವದೆಹಲಿ: ಕೋವಿಡ್ ಮುಂದಿನ ಅಲೆಯು ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ ಎಂದು ಸರ್ಕಾರದ ಪ್ರಮುಖ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಭಾರತದಲ್ಲಿ ಕೋವಿಡ್–19 ಮೂರನೇ ಅಲೆಯು ಮಕ್ಕಳ ಮೇಲೆ ಬೀರಬಹುದಾದ ಪರಿಣಾಮಗಳ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ, ಮಕ್ಕಳ ಮೇಲೆ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಪರಿಣಾಮ ಬೀರುವುದು ಅಥವಾ ಕೋವಿಡ್–19 ಮುಂದಿನ ಅಲೆಯಲ್ಲಿ ಮಕ್ಕಳಲ್ಲಿ ಸೋಂಕು ಪ್ರಕರಣಗಳು ಏರಿಕೆಯಾಗಲಿವೆ ಎಂಬುದಕ್ಕೆ ಯಾವುದೇ ಪುರಾವೆಗಳಲ್ಲಿ ಎಂದಿದ್ದಾರೆ.
ಕೋವಿಡ್ ಮೊದಲ ಮತ್ತು ಎರಡನೇ ಅಲೆಗಳ ದತ್ತಾಂಶಗಳ ಪ್ರಕಾರ, ಸಾಮಾನ್ಯವಾಗಿ ಮಕ್ಕಳು ಕೊರೊನಾ ವೈರಸ್ ಸೋಂಕು ತಗುಲುವುದರಿಂದ ರಕ್ಷಣೆ ಪಡೆದಿದ್ದಾರೆ. ಅಕಸ್ಮಾತ್ ಮಕ್ಕಳಿಗೆ ಕೋವಿಡ್ ದೃಢಪಟ್ಟರೂ ಅವರಲ್ಲಿ ಅಲ್ಪ ಪ್ರಮಾಣದ ಸೋಂಕು ಮಾತ್ರ ಇರುವುದನ್ನು ಗಮನಿಸಲಾಗಿದೆ' ಎಂದು ಗುಲೇರಿಯಾ ಹೇಳಿದ್ದಾರೆ.
ಆದರೆ, ಸಾಂಕ್ರಾಮಿಕ ಸಂದರ್ಭದಲ್ಲಿ ಮಕ್ಕಳು ಬೇರೆ ರೀತಿಯ ಪರಿಣಾಮಗಳಿಗೆ ಒಳಗಾಗಿದ್ದಾರೆ. ಅಧಿಕ ಒತ್ತಡ ಮತ್ತು ಮಾನಸಿಕ ಸಮಸ್ಯೆಗಳು, ಸ್ಮಾರ್ಟ್‌ಫೋನ್‌ಗಳ ಮೇಲೆ ಅತಿಯಾದ ಅವಲಂಬನೆ, ಶಿಕ್ಷಣ ಮತ್ತು ಕಲಿಕೆಯ ಅವಕಾಶಗಳ ಕೊರತೆ ಎದುರಾಗಿದೆ. ಗ್ರಾಮೀಣ ಭಾಗಗಳಲ್ಲಿ ಶಾಲಾ ಮಕ್ಕಳ ಶಿಕ್ಷಣಕ್ಕೆ ತೀವ್ರ ಹೊಡೆತ ಬಿದ್ದಿದೆ ಎಂದು ವಿವರಿಸಿದ್ದಾರೆ.
ಕೊರೊನಾ ವೈರಸ್ ಸೋಂಕು ದೇಹದೊಳಗೆ ಎಸಿಇ ಎನ್‌ಜೈಮ್‌ಗಳ (ಕಿಣ್ವ) ಸಹಕಾರದಿಂದ ಹರಡುತ್ತಿರುವುದಾಗಿ ಊಹಿಸಲಾಗಿದೆ. ಆದರೆ, ವೈರಸ್ ವೃದ್ಧಿಸಲು ಸಹಕಾರ ನೀಡುವ ಎಸಿಇ ಎನ್‌ಜೈಮ್‌ಗಳು ವಯಸ್ಕರಿಗಿಂತ ಮಕ್ಕಳಲ್ಲಿ ಕಡಿಮೆ ಪ್ರಮಾಣದಲ್ಲಿರುತ್ತವೆ. ಹಾಗಾಗಿ, ಮಕ್ಕಳಲ್ಲಿ ಸೋಂಕು ತಗುಲುವ ಸಾಧ್ಯತೆಗಳು ಕಡಿಮೆ ಎಂದು ಕಲ್ಪಿಸಿಕೊಳ್ಳಲಾಗಿದೆ ಎಂದು ಗುಲೇರಿಯಾ ತಿಳಿಸಿದ್ದಾರೆ.
ಈ ಸಿದ್ಧಾಂತವನ್ನು ಹರಿಯಬಿಟ್ಟಿರುವವರ ಪ್ರಕಾರ, ಈವರೆಗೂ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮಗಳು ಆಗಿಲ್ಲ. ಹಾಗಾಗಿ, ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಸೋಂಕು ತಗುಲುವ ಸಾಧ್ಯತೆ ಇದೆ. ಆದರೆ, ಮಕ್ಕಳಲ್ಲಿ ಸೋಂಕು ತೀವ್ರವಾಗಲಿದೆ ಎಂಬುದಕ್ಕೆ ಯಾವುದೇ ಪುರಾವೆಗಳು ಈವರೆಗೂ ಕಂಡು ಬಂದಿಲ್ಲ,..' ಎಂದಿದ್ದಾರೆ.
ಕೋವಿಡ್–19 ಮೂರನೇ ಅಲೆಯು ದೇಶದಲ್ಲಿ ಅಪ್ಪಳಿಸಬಹುದು ಎಂದು ಅಂದಾಜಿಸಿರುವುದನ್ನು ಪ್ರಸ್ತಾಪಿಸಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಕೇಂದ್ರ ಹಾಗೂ ರಾಜ್ಯಗಳು ಮಕ್ಕಳು ಮತ್ತು ಶಿಶುಗಳ ರಕ್ಷಣೆಗೆ ಅಗತ್ಯವಿರುವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದೆ. ಈ ಸಂಬಂಧ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮುಖ್ಯಸ್ಥರಾದ ಪ್ರಿಯಾಂಕ್ ಕಾನೂಂಗೊ ಕೇಂದ್ರ ಆರೋಗ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
Dr. Randeep Guleria on Monday pointed out that though it has been said children will be infected the most during the third Covid-19 wave, the pediatrics association has stated that this is not based on facts. It might not impact children and so people should not fear, he added.
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
24-04-25 09:00 pm
HK News Desk
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm