BJP ನಾಯಕ ಅಣ್ಣಾಮಲೈ ವಿರುದ್ಧ ಕೇಸ್ ದಾಖಲು

28-08-20 09:03 pm       Dhruthi Anchan - Correspondant   ದೇಶ - ವಿದೇಶ

ಇದೇ ಗುರುವಾರ ಬಿಜೆಪಿ ಸೇರ್ಪಡೆಗೊಂಡ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಕಾನೂನುಬಾಹಿರ ಸಭೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಕೊಯಮತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೊಯಮತ್ತೂರು, ಆಗಸ್ಟ್ 28: ಇದೇ ಗುರುವಾರ ಬಿಜೆಪಿ ಸೇರ್ಪಡೆಗೊಂಡ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಕಾನೂನುಬಾಹಿರ ಸಭೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಕೊಯಮತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಗುರುವಾರ ಕೆ. ಅಣ್ಣಾಮಲೈ ಸಭೆ ನಡೆಸಿದ್ದಾರೆ ಎಂಬುದು ಆರೋಪ. ಕೊಯಮತ್ತೂರು ನಗರ ಠಾಣೆ ಪೊಲೀಸರು ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. 

ಅಣ್ಣಾಮಲೈ ಬಿಜೆಪಿ ಸೇರಿದ ಬಳಿಕ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಭೇಟಿ ನೀಡಿದ್ದರು. ಬಹಳಷ್ಟು ಕಾರ್ಯಕರ್ತರು ಕಚೇರಿಯಲ್ಲಿ ಸೇರಿ ಅವರನ್ನು ಸ್ವಾಗತಿಸಿದ್ದರು. 

 'ಸಿಂಗಂ' ಅಣ್ಣಾಮಲೈ ಕೋವಿಡ್ 19 ಹರಡದಂತೆ ಇರುವ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಕಚೇರಿಯಲ್ಲಿ ಬಹಳಷ್ಟು ಜನರು ಸೇರುವುದರ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಅಣ್ಣಾಮಲೈ ವಾಹನದಿಂದಲೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು. 

ಸಬ್ ಇನ್ಸ್‌ಪೆಕ್ಟರ್ ಸುಗನ್ಯಾ ಅವರು ಈ ಕುರಿತು ದೂರು ನೀಡಿದ್ದರು. ಕೆ. ಅಣ್ಣಾಮಲೈ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ನಂದಕುಮಾರ್, ಬಿಜೆಪಿ ನಾಯಕರಾದ ಜಿಕೆಎಸ್ ಸೆಲ್ವಕುಮಾರ್ ಮುಂತಾದವರ ವಿರುದ್ಧ ಪ್ರಕರಣ ದಾಖಲಾಗಿದೆ.