12ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತು 2 ದಿನದಲ್ಲಿ ತೀರ್ಮಾನ ; ಕೇಂದ್ರ

31-05-21 04:40 pm       Headline Karnataka News Network   ದೇಶ - ವಿದೇಶ

ಕೋವಿಡ್-19 ಸೋಂಕಿನ ಮಧ್ಯೆ 12ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಬೇಕೆ, ಬೇಡವೇ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ನವದೆಹಲಿ, ಮೇ 31: ಕೋವಿಡ್-19 ಸೋಂಕಿನ ಮಧ್ಯೆ 12ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಬೇಕೆ, ಬೇಡವೇ ಎಂದು ಇನ್ನೆರಡು ದಿನಗಳೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕಳೆದ ವರ್ಷ ಜುಲೈ 1 ರಿಂದ 15 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವ ಸಿಬಿಎಸ್‌ಇ ಮತ್ತು ಸಿಐಎಸ್‌ಸಿಇ ಯೋಜನೆಗಳನ್ನು 2020 ರ ಜೂನ್ 26 ರಂದು ಸುಪ್ರೀಂ ಕೋರ್ಟ್ ಅನುಮೋದಿಸಿತ್ತು ಮತ್ತು ಪರೀಕ್ಷಕರ ಮೌಲ್ಯಮಾಪನಕ್ಕಾಗಿ ಮಂಡಳಿಯ ಸೂತ್ರವನ್ನು ಅನುಮೋದಿಸಿತು.

ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ಉತ್ತರಿಸಿದ ಅಟೊರ್ನಿ ಜನರಲ್ ಕೆ ಕೆ ವೇಣುಗೋಪಾಲ್, ಇನ್ನೆರಡು ದಿನಗಳಲ್ಲಿ ಸರ್ಕಾರ ನಿರ್ಧಾರಕ್ಕೆ ಬರಲಿದೆ. ಗುರುವಾರದವರೆಗೆ ನ್ಯಾಯಾಲಯ ನಮಗೆ ಸಮಯಾವಕಾಶ ನೀಡುತ್ತದೆ ಎಂದು ಭಾವಿಸುತ್ತೇವೆ. ಆಗ ಸರ್ಕಾರ ಅಂತಿಮ ನಿರ್ಧಾರಕ್ಕೆ ಬರುತ್ತದೆ ಎಂದರು.

ಸುಪ್ರೀಂ ಕೋರ್ಟ್ ನ್ಯಾಯಪೀಠ ವಿಚಾರಣೆಯನ್ನು ಜೂನ್ 3ಕ್ಕೆ ಮುಂದೂಡಿದೆ. ಮಮತಾ ಶರ್ಮಾ ಎಂಬುವವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿ, 12 ನೇ ತರಗತಿಯ ಫಲಿತಾಂಶವನ್ನು ನಿರ್ಧಿಷ್ಟ ಸಮಯದೊಳಗೆ ಘೋಷಿಸಲು ವಸ್ತುನಿಷ್ಠ ವಿಧಾನವನ್ನು ರೂಪಿಸಲು ನಿರ್ದೇಶನ ನೀಡಬೇಕೆಂದು ಕೋರಿದ್ದರು.

ಇದಕ್ಕೆ ನ್ಯಾಯಪೀಠವು ನೀವು ನಿರ್ಧಾರ ತೆಗೆದುಕೊಳ್ಳಿ. ಅದಕ್ಕೆ ನೀವು ಅರ್ಹದಾರರು, ಕಳೆದ ವರ್ಷದ ನೀತಿಯನ್ನು ಬಿಡುವುದಿದ್ದರೆ ಅದಕ್ಕೆ ಸರಿಯಾದ ಕಾರಣ ನೀಡಬೇಕು ಎಂದು ನ್ಯಾಯಪೀಠ ಅಟೊರ್ನಿ ಜನರಲ್ ಅವರಿಗೆ ಹೇಳಿತು.

CBSE Class 12 Board Exam 2021 and ICSE Board exam case in the Supreme Court have been adjourned. In the CBSE Supreme Court hearing today, the Attorney General appearing for Centre has informed the Supreme Court that the Government will take a decision on Class 12 board exams in two days saying, "Give us time till Thursday and Government will come with a final decision." The bench considered the petition seeking a directive to cancel Class 12 Board exams amid the COVID-19 pandemic. "You are free to take whatever decision.