ಬ್ರೇಕಿಂಗ್ ನ್ಯೂಸ್
29-08-20 12:44 pm Headline Karnataka News Network ದೇಶ - ವಿದೇಶ
ಶ್ರೀನಗರ, ಆಗಸ್ಟ್ 29: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಇದೇ ವೇಳೆ, ಒಬ್ಬ ಯೋಧ ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಇತ್ತೀಚೆಗೆ ಆಲ್ ಬದ್ರ್ ಉಗ್ರವಾದಿ ಸಂಘಟನೆಯ ಕಮಾಂಡರ್ ಶಕೂರ್ ಪರ್ರೆ ಮತ್ತು ಆತನ ಸಹಚರ ಸುಹೈಲ್ ಬಟ್ ಅವರನ್ನು ಸೇನಾ ಪಡೆ ಎನ್ ಕೌಂಟರ್ ಮೂಲಕ ಕೊಂದು ಹಾಕಿತ್ತು. ಆನಂತರ ಸೇನಾಪಡೆ ಮತ್ತು ಪೊಲೀಸರು ಪುಲ್ವಾಮಾ, ಶೋಪಿಯಾನ್ ಮತ್ತು ಕಿಲ್ಲೋರಾ ಪ್ರದೇಶಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದು ಹಲವು ಉಗ್ರರು ಮತ್ತು ಅವರಿಗೆ ಬೆಂಬಲ ನೀಡುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ನಾಲ್ವರು ಉಗ್ರರನ್ನು ಕೊಲ್ಲಲಾಗಿದ್ದು ಈ ಪೈಕಿ ಇಬ್ಬರನ್ನು ಜುಬೇರ್ ನೆಂಗ್ರು ಮತ್ತು ಶಕೀ ಉಲ್ ಜಬ್ಬಾ ಎಂದು ಗುರುತಿಸಲಾಗಿದೆ ಎಂಬುದಾಗಿ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇದೇ ವೇಳೆ, ಸೇನಾಪಡೆ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಪುಲ್ವಾಮಾ ಜಿಲ್ಲೆಯ ಝದೂರ ಎಂಬಲ್ಲಿ ಮೂವರು ಉಗ್ರರನ್ನು ಕೊಂದಿರುವ ಬಗ್ಗೆ ಖಚಿತಪಡಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬರು ಯೋಧ ತೀವ್ರ ಗಾಯಗೊಂದು ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಜೇಶ್ ಕಾಲಿಯಾ ತಿಳಿಸಿದ್ದಾರೆ. ಪೊಲೀಸ್ ಮತ್ತು ಸೇನಾಪಡೆಯ ಮೂಲಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಒಟ್ಟು ಏಳು ಉಗ್ರರನ್ನು ಹೊಡೆದುರುಳಿಸಲಾಗಿದೆ. ಅವಂತಿಪುರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶೋಯಿಬ್ ಅಹ್ಮದ್ ಭಟ್ ಎಂಬ ಉಗ್ರ ಸೇನಾಪಡೆಗೆ ಶರಣಾಗಿದ್ದಾನೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm