ಬ್ರೇಕಿಂಗ್ ನ್ಯೂಸ್
02-06-21 12:20 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 02: ಭಾರತದ ಮಟ್ಟಿಗೆ ಮೇ ತಿಂಗಳಿನಲ್ಲಿ ಅಟ್ಟಹಾಸ ತೋರಿದ ಕೊರೊನಾವೈರಸ್ ಪ್ರಭಾವ ಜೂನ್ ಆರಂಭದಲ್ಲಿ ತಗ್ಗಿದೆ. ದಿನದಿಂದ ದಿನಕ್ಕೆ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಪ್ರತಿನಿತ್ಯ ಏರಿಕೆಯಾಗುತ್ತಿದೆ.
ದೇಶದಲ್ಲಿ ಒಂದೇ ದಿನ 1,32,788 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2,31,456 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 3,207 ಮಂದಿ ಪ್ರಾಣ ಬಿಟ್ಟಿದ್ದಾರೆ.

ಭಾರತದಲ್ಲಿ ಒಟ್ಟು 2,83,07,832 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,61,79,085 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,35,102 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 17,93,645 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ 35 ಕೋಟಿ ಜನರಿಗೆ ಕೊರೊನಾವೈರಸ್ ತಪಾಸಣೆ;
ಭಾರತದಲ್ಲಿ ಭಾನುವಾರಕ್ಕೆ ಹೋಲಿಸಿದರೆ ಸೋಮವಾರ ಕೊರೊನಾವೈರಸ್ ಸೋಂಕು ಪತ್ತೆ ಪರೀಕ್ಷೆ ವೇಗವನ್ನು ಹೆಚ್ಚಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 20,19,773 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 35,00,57,330 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶದಲ್ಲಿ 137 ದಿನಗಳಲ್ಲಿ ಲಸಿಕೆ ಪಡೆದವ ಸಂಖ್ಯೆ ಎಷ್ಟಿದೆ?
ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 137 ದಿನಗಳಲ್ಲಿ 21,85,46,667 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 22,08,941 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 19,45,581 ಜನರಿಗೆ ಮೊದಲ ಡೋಸ್ ಹಾಗೂ 2,63,360 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
Daily recoveries continued to outnumber the daily new cases for 20 consecutive days, as 2,31,456 patients recuperated during the past 24 hours, pushing the number of recoveries to 2,61,79,085. With these new recoveries, the recovery rate jumped to 92.48 percent.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 07:54 pm
Udupi Staffer
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm