ಬ್ರೇಕಿಂಗ್ ನ್ಯೂಸ್
17-06-21 04:47 pm Headline Karnataka News Network ದೇಶ - ವಿದೇಶ
Photo credits : Timesofindia
ಬಹ್ರೇನ್, ಜೂನ್ 17: ಬಹ್ರೇನ್ ದೇಶದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಬಿಹಾರ ಮೂಲದ ವ್ಯಕ್ತಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ಒಂಬತ್ತು ಲಕ್ಷ ದಂಡ ವಿಧಿಸಲಾಗಿದೆ. ಈ ಬಗ್ಗೆ ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ವಿದೇಶಾಂಗ ಸಚಿವಾಲಯವನ್ನು ಸಂಪರ್ಕಿಸಿದ್ದಾರೆ.
ಬಿಹಾರ ಮೂಲದ ಮೊಹಮ್ಮದ್ ಖಾಲಿದ್ ಎಂಬಾತನಿಗೆ ಬಹ್ರೇನ್‌ನಲ್ಲಿ ಕೋವಿಡ್ -19 ರೂಲ್ಸ್ ಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೈಲು ಶಿಕ್ಷೆ ಮತ್ತು 9 ಲಕ್ಷ ರೂ. ದಂಡವನ್ನು ಅಲ್ಲಿನ ಸರಕಾರ ವಿಧಿಸಿದೆ.

ಆದರೆ, ಖಲೀದ್‌ಗೆ ಕ್ಷುಲ್ಲಕ ವಿಚಾರಕ್ಕೆ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಆರೋಪಿಸಿ ಮೊಹಮ್ಮದ್ ಖಾಲಿದ್ ಕುಟುಂಬ ಈಗ ನೆರವು ಕೇಳಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಸಂಪರ್ಕಿಸಿದೆ. ಮೊಹಮ್ಮದ್ ಖಾಲಿದ್ ಎಂಟು ವರ್ಷಗಳಿಂದ ಬಹ್ರೇನ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಮೇ 18 ರಂದು ಕೋವಿಡ್ ಪಾಸಿಟಿವ್ ಆದ ನಂತರ 15 ದಿನಗಳ ಕಾಲ ಅವರನ್ನು ಮನೆಯಲ್ಲಿ ಕ್ವಾರಂಟೈನ್ ಇರಲು ಸೂಚಿಸಲಾಗಿತ್ತು. ಕಂಪನಿಯಿಂದ ಒದಗಿಸಿದ ವಸತಿ ಸೌಕರ್ಯದಲ್ಲಿ 17 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ ಬಳಿಕ ಖಾಲಿದ್, ಆಹಾರ ಸಾಮಗ್ರಿ ಖರೀದಿಸಲು ಹೊರಗೆ ತೆರಳಿದ್ದರು. ಈ ವೇಳೆ ಸ್ಥಳೀಯರೊಬ್ಬರು ಗುರುತಿಸಿ ಖಾಲಿದ್ ವಿರುದ್ಧ ದೂರು ನೀಡಿದ್ದರು. ಅಲ್ಲದೆ, ಹೊರಗಡೆ ತಿರುಗಾಡಿದ ಬಗ್ಗೆ ಜಾಲತಾಣದಲ್ಲಿ ವಿಡಿಯೋ ಪ್ರಸಾರ ಮಾಡಲಾಗಿತ್ತು. ಬಳಿಕ ಅಲ್ಲಿನ ಪೊಲೀಸರು ಖಾಲಿದ್‌ನನ್ನು ಬಂಧಿಸಿದ್ದರು ಎಂದು ಹೈದರಾಬಾದ್ ಮೂಲದ ಖಾಲಿದ್ ಸೋದರ ಹುಸೇನ್ ಅಹ್ಮದ್ ಹೇಳಿದ್ದಾರೆ.
ಸ್ಥಳೀಯ ಪೊಲೀಸರು ಬಳಿಕ ಆತನನ್ನು ಮತ್ತೆ ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ನೆಗೆಟಿವ್ ಬಂದಿತ್ತು. ಆದರೂ, ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ 5,000 ಬಹ್ರೇನ್ ದಿನಾರ್ ದಂಡದೊಂದಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಹುಸೇನ್ ಅಹ್ಮದ್ ವಿದೇಶಾಂಗ ಇಲಾಖೆಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
A youth from Bihar, working in Bahrain has been sentenced to three years in jail for not following the COVID-19 rules. Along with this, a fine of about ten lakh rupees has also been imposed on him.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm