ಬ್ರೇಕಿಂಗ್ ನ್ಯೂಸ್
21-06-21 04:07 pm Headline Karnataka News Network ದೇಶ - ವಿದೇಶ
Photo credits : Representational Image
ಚೆನ್ನೈ, ಜೂನ್ 21: ತಮಿಳುನಾಡಿನಲ್ಲಿ ಪಟಾಕಿ ಸ್ಪೋಟಗೊಂಡಿದ್ದು, ಘಟನೆಯಲ್ಲಿ ಐದು ವರ್ಷದ ಮಗು ಸೇರಿ 3 ಮಂದಿ ಮೃತಪಟ್ಟಿರುವ ಘಟನೆ ನಡೆಸಿದೆ.
ತಮಿಳುನಾಡಿನ ಸತ್ತೂರು ಜಿಲ್ಲೆಯ ಥಾಯಿಲ್ ಪಟ್ಟಿಯ ಕಲೈನರ್ ಕಾಲನಿಯಲ್ಲಿರುವ ಮನೆಯಲ್ಲಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಪರಿಣಾಮ ಮನೆಯಲ್ಲಿದ್ದ 5 ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಇದೊಂದು ಅಕ್ರಮ ಪಟಾಕಿ ತಯಾರಿಕಾ ಘಟಕವಾಗಿದ್ದು, ಮನೆಯಲ್ಲೇ ಪಟಾಕಿ ತಯಾರಿಸಲಾಗುತ್ತಿತ್ತು. ಈ ವೇಳೆ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ಮೃತರನ್ನು 35 ವರ್ಷದ ಸೆಲ್ವಂಮಣಿ, ಅವರ 5 ವರ್ಷದ ಪುತ್ರ ಹಾಗೂ 35 ವರ್ಷದ ಕರ್ಪಾಗಂ ಎಂದು ಗುರುತಿಸಲಾಗಿದೆ. ಅಂತೆಯೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರ್ಯ ಮತ್ತು ಪ್ರಭಾಕರ್ ಅವರನ್ನು ಸಮೀಪದ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿವೆ. ಸ್ಫೋಟದ ತೀವ್ರತೆಯಿಂದಾಗಿ ಇಡೀ ಮನೆ ಜಖಂಗೊಂಡಿದೆ. 2020ರಲ್ಲಿ ಪಟಾಕಿ ಸ್ಫೋಟ ಸಂಭವಿಸಿ 8 ಮಂದಿ ಮೃತಪಟ್ಟಿದ್ದರು. ತಮಿಳುನಾಡಿನ ಪಟಾಕಿ ತಯಾರಿಕಾ ಘಟಕ ಹೊತ್ತಿ ಉರಿದಿದ್ದು 8 ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದರು.
ಚಿಪ್ಪಿಪ್ಪಾರೈ ನಲ್ಲಿ ಘಟನೆ ನಡೆದಿದೆ. ಇದು ಈ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಸಂಭವಿಸಿದ ಎರಡನೇ ಸ್ಫೋಟ ಪ್ರಕರಣವಾಗಿದೆ. ಕಕ್ಕಿವಾದಂಪಟ್ಟಿ ಬಳಿ ಸಂಭವಿಸಿದ್ದ ಮೊದಲ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು.
In Tamil Nadu two women and a child, were killed in a firecracker factory explosion. Two people were injured in the accident at the illegal firecracker factory near Sivakasi in Tamil Nadu's Virudhunagar district.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm