ಬ್ರೇಕಿಂಗ್ ನ್ಯೂಸ್
27-06-21 01:36 pm Headline Karnataka News Network ದೇಶ - ವಿದೇಶ
ಶ್ರೀನಗರ್, ಜೂನ್ 27: ಜಮ್ಮು ವಿಮಾನ ನಿಲ್ದಾಣದಲ್ಲಿ ಕೇವಲ ಐದು ನಿಮಿಷಗಳ ಅಂತರದಲ್ಲಿ ಸಂಭವಿಸಿದ ಎರಡು ಸ್ಫೋಟಗಳ ಬೆನ್ನಲ್ಲೇ ಡ್ರೋನ್ ದಾಳಿ ಬಗ್ಗೆ ಭಾರತೀಯ ವಾಯು ಪಡೆ ಸಿಬ್ಬಂದಿ ತನಿಖೆ ಶುರು ಮಾಡಿದ್ದಾರೆ. ಎರಡು ಕಡಿಮೆ ತೀವ್ರತೆಯ ಸ್ಫೋಟ ಭಯೋತ್ಪಾದಕ ದಾಳಿಯೇ ಎಂಬ ಆಯಾಮದಲ್ಲಿ ರಕ್ಷಣಾ ಮತ್ತು ಭದ್ರತಾ ಕೇಂದ್ರದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ರಾಷ್ಟ್ರೀಯ ಬಾಂಬ್ ದತ್ತಾಂಶ ಕೇಂದ್ರ ತಜ್ಞರು, ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ದೌಡಾಯಿಸಿದ್ದು, ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಭಾನುವಾರ ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿದೆ. ಬೆಳಗಿನ ಜಾವ 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆದಿರುವ ಎರಡು ಸ್ಫೋಟಗಳ ಗಂಭೀರತೆಯನ್ನು ಅರಿತುಕೊಂಡು ಕೇಂದ್ರ ತನಿಖಾ ತಂಡವೇ ಪ್ರಕರಣದ ತನಿಖೆಗೆ ಮುಂದಾಗಿದೆ. 'ವಾಯು ಪಡೆ ಮುಖ್ಯಸ್ಥ ಏರ್ ಮಾರ್ಷಲ್ ಹೆಚ್.ಎಸ್ ಅರೋರಾ ಮತ್ತು ಏರ್ ಮಾರ್ಷಲ್ ವಿಕ್ರಮ್ ಸಿಂಗ್ ಜೊತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಚರ್ಚೆ ನಡೆಸಿದ್ದು, ಇಬ್ಬರು ಅಧಿಕಾರಿಗಳು ಘಟನೆ ನಡೆದ ಸ್ಥಳಕ್ಕೆ ತೆರಳಿದ್ದಾರೆ,' ಎಂದು ಸಚಿವಾಲಯವು ಸ್ಪಷ್ಟಪಡಿಸಿದೆ.
ಸತ್ವಾರಿ ಪ್ರದೇಶದ ಜಮ್ಮು ವಿಮಾನ ನಿಲ್ದಾಣದ ರನ್ ವೇ ಮತ್ತು ವಾಯು ಸಂಚಾರವನ್ನು ಭಾರತೀಯ ವಾಯು ಪಡೆ ನಿಯಂತ್ರಿಸುತ್ತಿದೆ. ಪ್ರಯಾಣಿಕರನ್ನು ಹೊಂದಿರುವ ವಿಮಾನಗಳ ಹಾರಾಟವನ್ನು ಸಹ ನಿರ್ವಹಿಸಲಾಗುತ್ತದೆ.
Two low intensity explosions were reported early Sunday morning in the technical area of Jammu Air Force Station. One caused minor damage to the roof of a building while the other exploded in an open area.
— Indian Air Force (@IAF_MCC) June 27, 2021
Two low intensity explosions were reported early Sunday morning in the technical area of Jammu Air Force Station. One caused minor damage to the roof of a building while the other exploded in an open area.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am