ಬ್ರೇಕಿಂಗ್ ನ್ಯೂಸ್
27-06-21 08:52 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 27: ಮೋದಿ ಸರಕಾರದಲ್ಲಿ ಸಚಿವ ಸಂಪುಟ ಪುನರ್ ರಚನೆ ಆಗುವುದು ಪಕ್ಕಾ ಆಗಿದೆ. ಜುಲೈ ಮೊದಲ ವಾರದಲ್ಲಿ ಬಹುತೇಕ ಸರ್ಜರಿ ಆಗಲಿದೆ ಎನ್ನಲಾಗುತ್ತಿದ್ದು, ಕೆಲ ಸಚಿವರನ್ನು ಕೈಬಿಟ್ಟು ಒಂದಷ್ಟು ಮಂದಿ ಹೊಸಮುಖಗಳನ್ನು ಕ್ಯಾಬಿನೆಟ್ ಗೆ ಸೇರಿಸಿಕೊಳ್ಳಲಿದ್ದಾರೆ. ದೇಶದ ವಿವಿಧ ರಾಜ್ಯಗಳಿಗೆ ಪ್ರಾತಿನಿಧ್ಯ ಕೊಟ್ಟು 27 ಹೊಸ ಮುಖಗಳಿಗೆ ಮಂತ್ರಿ ಸ್ಥಾನ ನೀಡಲು ಮೋದಿ ಮುಂದಾಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ಉತ್ತರ ಪ್ರದೇಶದ ನಾಯಕರಿಗೆ ಸಂಪುಟದಲ್ಲಿ ಹೆಚ್ಚು ಅವಕಾಶ ಸಿಗುವ ಸಾಧ್ಯತೆಯಿದೆ. ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್, ಮಹಾರಾಜ್ ಗಂಜ್ ಸಂಸದ ಪಂಕಜ್ ಚೌಧರಿ, ವರುಣ್ ಗಾಂಧಿ ಹಾಗೂ ಓಂ ಮೈತ್ರಿ ಪಕ್ಷದ ಅನುಪ್ರಿಯಾ ಪಟೇಲ್ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ.
ಒಡಿಶಾ ಸಂಸದ ಅಶ್ವಿನ್ ವೈಷ್ಣವ್, ಬಂಗಾಳದ ಮಾಜಿ ರೈಲ್ವೇ ಸಚಿವ ದಿನೇಶ್ ತ್ರಿವೇದಿ, ರಾಜ್ಯಸಭಾ ಸದಸ್ಯ ಅನಿಲ್ ಜೈನ್, ರಾಜಸ್ಥಾನದಿಂದ ಕಿರಿಯ ಸಂಸದ ಚೌಧರಿ, ರಾಹುಲ್ ಕಸ್ವಾನ್ ಮತ್ತು ಸಿಕಾರ್ ಸಂಸದ ಸುಮೇಧಾನಂದ ಸರಸ್ವತಿ ಕೂಡ ಕೇಂದ್ರ ಸಂಪುಟ ಸೇರಿಕೊಳ್ಳುವ ಬಗ್ಗೆ ಹೆಸರು ಕೇಳಿಬರುತ್ತಿದೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧ್ಯಾ, ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶದ ಬಿಜೆಪಿ ಜನರಲ್ ಸೆಕ್ರೆಟರಿಗಳಾದ ಭೂಪೇಂದ್ರ ಯಾದವ್ ಹಾಗೂ ಕೈಲಾಶ್ ವಿಜಯವರ್ಗಿಯಾ, ಬಿಜೆಪಿ ವಕ್ತಾರ ಹಾಗೂ ಅಲ್ಪಸಂಖ್ಯಾತ ಮುಖಂಡ ಝಫರ್ ಇಸ್ಲಾಂ ಮೋದಿ ಸಂಪುಟ ಸೇರಿಕೊಳ್ಳುವ ಸಂಭಾವ್ಯ ಪಟ್ಟಿಯಲ್ಲಿದ್ದಾರೆ.
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ, ಅಸ್ಸಾಂ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನವಾಲ, ದೆಹಲಿಯಿಂದ ಮಾಜಿ ಸಚಿವೆ ಮೀನಾಕ್ಷಿ ಲೇಖಿ ಅವರಿಗೂ ಮಂತ್ರಿ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಿದೆ.
ಯಾರೆಲ್ಲ ಮಂತ್ರಿಯಾಗಬೇಕು ಮತ್ತು ಯಾರನ್ನು ಕಿತ್ತು ಹಾಕಬೇಕು ಎಂಬ ನಿಟ್ಟಿನಲ್ಲಿ ಕಳೆದ ಒಂದು ತಿಂಗಳಿನಿಂದ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ನಿರಂತರ ಸಭೆ ನಡೆಸುತ್ತಿದ್ದಾರೆ. ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ರಾಜ್ಯಗಳು ಮತ್ತು ರಾಷ್ಟ್ರೀಯ ಮಟ್ಟದಲ್ಲಿ ವರ್ಚಸ್ಸು ವೃದ್ಧಿಸಿಕೊಳ್ಳಲು ಬಿಜೆಪಿ ಸರಕಾರ ಭಾರೀ ಚಿಂತನೆಯಲ್ಲಿ ತೊಡಗಿತ್ತು.
Though there has been no official word on cabinet expansion or reshuffle, but speculation has once again gathered pace as Prime Minister Narendra Modi met political leaders from Jammu & Kashmir (J&K). As many as 27 probable, including heavyweights Jyotiraditya Scindia, Sushil Modi, Sarbananda Sonowal, Narayan Rane and Bhupender Yadav could be part of the massive reshuffle of the Union Cabinet reportedly imminent.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm