ಬ್ರೇಕಿಂಗ್ ನ್ಯೂಸ್
03-07-21 05:12 pm Headline Karnataka News Network ದೇಶ - ವಿದೇಶ
ಮುಂಬೈ, ಜುಲೈ 3 : ನಿರಾಶ್ರಿತರು, ಭಿಕ್ಷುಕರೂ ದುಡಿಯಬೇಕು. ಅವರಿಗೆ ಆಹಾರ, ನೀರು ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಪುಕ್ಕಟೆಯಾಗಿ ಪೂರೈಸಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ನಿರಾಶ್ರಿತರು, ಭಿಕ್ಷುಕರ ಸಮಸ್ಯೆಗಳಿಗೆ ಸಂಬಂಧಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ, ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಜಿ.ಎಸ್.ಕುಲಕರ್ಣಿ ಅವರ ವಿಭಾಗೀಯ ಪೀಠ ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದೆ.


ನಿರಾಶ್ರಿತರು ಮತ್ತು ಭಿಕ್ಷುಕರಿಗೆ ಪ್ರತಿ ದಿನ ಮೂರು ಹೊತ್ತು ಪೌಷ್ಟಿಕಾಂಶಯುಕ್ತ ಆಹಾರ, ಕುಡಿಯುವ ನೀರು, ವಸತಿ ನೀಡಬೇಕು. ಜತೆಗೆ, ಸಾರ್ವಜನಿಕ ಶೌಚಾಲಯಗಳ ಉಚಿತ ಬಳಕೆಗೆ ಅನುಮತಿ ನೀಡುವಂತೆ ಬೃಹನ್ ಮುಂಬೈ ಮಹಾನಗರ ಪಾಲಿಕೆಗೆ (ಬಿಎಂಸಿ) ನಿರ್ದೇಶಿಸುವಂತೆ ಕೋರಿ ಬ್ರಿಜೇಶ್ ಆರ್ಯ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಬಗ್ಗೆ ಬಿಎಂಸಿ ಕೋರ್ಟಿಗೆ ಹೇಳಿಕೆ ನೀಡಿ, ಸ್ವಯಂಸೇವಾ ಸಂಸ್ಥೆಗಳ ನೆರವಿನಿಂದ ಮುಂಬೈ ಮಹಾನಗರದಲ್ಲಿರುವ ಈ ವರ್ಗದ ಜನರಿಗೆ ಆಹಾರ ಪೊಟ್ಟಣಗಳನ್ನು ವಿತರಿಸಿದ್ದೇವೆ. ಜೊತೆಗೆ ಈ ವರ್ಗದ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನೂ ವಿತರಿಸಲಾಗಿದೆ ಎಂದು ತಿಳಿಸಿತ್ತು.


ಈ ವಿಚಾರದಲ್ಲಿ ತೀರ್ಪು ಪ್ರಕಟಿಸಿದ ನ್ಯಾಯಪೀಠ, ಇಂಥ ವರ್ಗದವರಿಗೆ ಆಹಾರ ಪೂರೈಕೆ ಹೆಚ್ಚಿಸುವುದು ಸೇರಿದಂತೆ ಯಾವುದೇ ವಿಷಯದಲ್ಲೂ ನಿರ್ದೇಶನ ನೀಡುವ ಅಗತ್ಯವಿಲ್ಲ. ಎಲ್ಲರೂ ಕೆಲಸ ಮಾಡುತ್ತಿದ್ದಾರೆ. ಹಾಗೆಯೇ ನಿರಾಶ್ರಿತರು (ಮನೆ ಇಲ್ಲದವರು) ಕೂಡ ದೇಶಕ್ಕಾಗಿ ಕೆಲಸ ಮಾಡಬೇಕು. ಎಲ್ಲವನ್ನೂ ರಾಜ್ಯ ಸರ್ಕಾರ ಪೂರೈಸಬೇಕು ಎಂದು ಬಯಸುವುದು ಸರಿಯಲ್ಲ. ಇಂಥ ಮನವಿ ಸಲ್ಲಿಸುವ ಮೂಲಕ, ನೀವು (ಅರ್ಜಿದಾರರು) ಸಮಾಜದಲ್ಲಿ ಇಂಥ ವರ್ಗದ ಜನರ ಸಂಖ್ಯೆಯನ್ನು ಹೆಚ್ಚಿಸುತ್ತಿದ್ದೀರಿ ಎಂದು ಹೇಳಿದೆ.
ಇದೇ ವೇಳೆ 'ಅರ್ಜಿಯಲ್ಲಿರುವ ಎಲ್ಲ ಬೇಡಿಕೆಗಳಿಗೂ ಒಪ್ಪಿಗೆ ನೀಡಿದರೆ, ಜನರಿಗೆ ಕೆಲಸ ಮಾಡಬೇಡಿ ಎಂದು ಹೇಳಿದಂತಾಗುವುದಿಲ್ಲವೇ‘ ಎಂದು ನ್ಯಾಯಪೀಠ ಅರ್ಜಿದಾರರನ್ನೇ ಪ್ರಶ್ನಿಸಿತು.
The Bombay High Court on Saturday said that homeless persons and beggars should also work for the country as everything cannot be provided to them by the State.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm