ಜಮ್ಮು ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ; ಲಷ್ಕರ್-ಇ-ತೋಯ್ಬಾ, ಟಿಆರ್ ಎಫ್ ಸಂಘಟನೆಗಳ ಮಾಸ್ಟರ್ ಪ್ಲಾನ್

06-07-21 12:37 pm       Headline Karnataka News Network   ದೇಶ - ವಿದೇಶ

ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆಸಿದ ದಾಳಿ ವೇಳೆ ಡ್ರೋನ್ ನಲ್ಲಿ 1.5 ಕೆಜಿ ಆರ್ ಡಿಎಕ್ಸ್ ಸ್ಫೋಟಕವನ್ನು ಇರಿಸಲಾಗಿತ್ತು ಎಂದು ಮೂಲಗಳಿಂದ ತಿಳಿದು ಬಂದಿದೆ.

ಶ್ರೀನಗರ್, ಜುಲೈ 06: ಭಾರತೀಯ ವಾಯುಸೇನೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆಸಿದ ದಾಳಿ ವೇಳೆ ಡ್ರೋನ್ ನಲ್ಲಿ 1.5 ಕೆಜಿ ಆರ್ ಡಿಎಕ್ಸ್ ಸ್ಫೋಟಕವನ್ನು ಇರಿಸಲಾಗಿತ್ತು ಎಂದು ಮೂಲಗಳಿಂದ ತಿಳಿದು ಬಂದಿದೆ.

ಕಳೆದ ಜೂನ್ 27ರ ಭಾನುವಾರ ನಡೆದ ಡ್ರೋನ್ ದಾಳಿ ಹಿಂದೆ ಲಷ್ಕರ್-ಇ-ತೋಯ್ಬಾ(Let) ಹಾಗೂ ದಿ ರೆಸಿಸ್ಟೆಂಟ್ ಫ್ರೆಂಟ್(TRF) ಸಂಘಟನೆ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಜಿಪಿಎಸ್ ಮೂಲಕ ಡ್ರೋನ್ ಅನ್ನು ನಿಯಂತ್ರಿಸಲಾಗಿತ್ತು ಎಂದು ತನಿಖೆ ವೇಳೆ ಮೂಲಗಳಿಂದ ತಿಳಿದು ಬಂದಿದೆ.

ಜಮ್ಮು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ಕ್ಕೆ ವಹಿಸಿದೆ. ಎನ್ಐಎ ಅಧಿಕಾರಿಗಳು ಈ ಪ್ರಕರಣದ ಸುತ್ತ ತನಿಖೆ ಚುರುಕುಗೊಳಿಸಿದ್ದಾರೆ. ಸ್ಫೋಟದ ಗುಣಸ್ವಭಾವದ ಬಗ್ಗೆ ರಾಷ್ಟ್ರೀಯ ಭದ್ರತಾ ಪಡೆಯ ವಿಶೇಷ ಬಾಂಬ್ ಪಡೆಯ ಸಿಬ್ಬಂದಿ ತನಿಖೆ ನಡೆಸುತ್ತಿದೆ.

ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಫೋಟ:

ಜೂನ್ 27ರ ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದರು. ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿದೆ. ಬೆಳಗಿನ ಜಾವ 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿತ್ತು.

"ಭಾರತೀಯ ವಾಯು ನೆಲೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಎರಡು ಲಘುಸ್ಫೋಟವು ಉಗ್ರರ ದಾಳಿಯಾಗಿದೆ," ಎಂದು ಜಮ್ಮು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಸ್ಪಷ್ಟಪಡಸಿದ್ದರು. ಮೊದಲ ಬಾರಿಗೆ ಉಗ್ರರ ದಾಳಿಗೆ ಡ್ರೋನ್ ಬಳಕೆ ಆಗಿರುವುದು ಗೊತ್ತಾಗಿದ್ದು, ಈ ಡ್ರೋನ್ ದಾಳಿ ಹಿಂದೆ ಪಾಕಿಸ್ತಾನ ಉಗ್ರ ಸಂಘಟನೆ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು.

Days after drones dropped bombs at the Indian Air Force (IAF) station in Jammu, forensic experts have reportedly said a cocktail of explosive material, including RDX and Nitrate, was used in the two IEDs.