ಬ್ರೇಕಿಂಗ್ ನ್ಯೂಸ್
08-07-21 10:15 pm Mangaluru Correspondent ದೇಶ - ವಿದೇಶ
ಚೆನ್ನೈ, ಜುಲೈ 8: ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಎಲ್.ಮುರುಗನ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಆ ಜಾಗಕ್ಕೆ ಅಣ್ಣಾಮಲೈ ಅವರನ್ನು ಆಯ್ಕೆ ಮಾಡಲಾಗಿದೆ.
ಬುಧವಾರ ಮುರುಗನ್ ಸಚಿವ ಸ್ಥಾನಕ್ಕೇರುವುದು ಖಚಿತವಾಗುತ್ತಲೇ ತಮಿಳುನಾಡಿನಲ್ಲಿ ಅಣ್ಣಾಮಲೈ ಹೆಸರು ಕೂಡ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಅಣ್ಣಾಮಲೈಗೂ ಸಚಿವ ಸ್ಥಾನ ಸಿಗಲಿ ಎಂದು ಕೆಲವರು ಹಾರೈಸಿದ್ದರೆ, ಇನ್ನು ಕೆಲವರು ಬಿಜೆಪಿ ಘಟಕದ ರಾಜ್ಯಾಧ್ಯಕ್ಷರಾಗಲಿ ಎಂದು ಹಾರೈಸಿದ್ದರು. ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಣ್ಣಾಮಲೈ ಅವರನ್ನು ಆಯ್ಕೆ ಮಾಡಿ ಆದೇಶ ಮಾಡಿದ್ದಾರೆ.
ಅಣ್ಣಾಮಲೈ ಅಥವಾ ಕೆ.ಟಿ. ರಾಘವನ್ ರಾಜ್ಯ ಘಟಕದ ಅಧ್ಯಕ್ಷರಾಗುತ್ತಾರೆ ಎಂಬ ವದಂತಿ ಹರಡಿತ್ತು. ಅಭಿಮಾನಿಗಳ ಆಶಯದಂತೆ ಅಣ್ಣಾಮಲೈ ಅವರನ್ನೇ ಆಯ್ಕೆ ಮಾಡಲಾಗಿದೆ.
ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಅಣ್ಣಾಮಲೈಗೆ ಅರವಕುರುಚಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿತ್ತು. ರಾಜ್ಯದ ಬಿಜೆಪಿ ಉಸ್ತುವಾರಿ ಸಿ. ಟಿ. ರವಿ ಸೇರಿದಂತೆ ಹಲವು ನಾಯಕರು ಅಣ್ಣಾಮಲೈ ಪರವಾಗಿ ಪ್ರಚಾರ ನಡೆಸಿದ್ದರು. ಅಣ್ಣಾಮಲೈ 68 ಸಾವಿರ ಮತಗಳನ್ನು ಪಡೆದು ಸೋಲು ಕಂಡಿದ್ದರು.
"ಅರವಕುರುಚಿ ಕ್ಷೇತ್ರದಲ್ಲಿ 68,000 ಮತಗಳನ್ನು ನೀಡಿದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಬಿಜೆಪಿ ಜೊತೆಗೆ ಎಂದಿಗೂ ಇರುತ್ತೇನೆ" ಎಂದು ಸೋಲಿನ ಬಳಿಕ ಟ್ವೀಟ್‌ನಲ್ಲಿ ಅಣ್ಣಾಮಲೈ ತಿಳಿಸಿದ್ದರು.
ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ ಅವರು 2019ರ ಮೇ 28ರಂದು ಐಜಿ- ಡಿಜಿಪಿ ಹಿರಿಯ ಅಧಿಕಾರಿಗಳಿಗೆ ರಾಜೀನಾಮೆ ಪತ್ರ ಕಳಿಸಿ ಐಪಿಎಸ್ ಹುದ್ದೆ ತೊರೆದಿದ್ದರು. 2011ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ ಅವರು ಕಾರ್ಕಳ, ಚಿಕ್ಕಮಗಳೂರು ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು.ann
The BJP on Thursday appointed K Annamalai as its Tamil Nadu state unit president in place of L Murugan, who took charge as the Minister of State for Fisheries, Animal Husbandry and Dairying.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am