ಬ್ರೇಕಿಂಗ್ ನ್ಯೂಸ್
13-07-21 11:54 am Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜುಲೈ 13: ಕೇರಳದಲ್ಲಿ ಬಿರುಗಾಳಿ ಎಬ್ಬಿಸಿದ್ದ ಸಿಸ್ಟರ್ ಅಭಯಾ ಪ್ರಕರಣದಲ್ಲಿ 28 ವರ್ಷಗಳ ನಂತರ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಘೋಷಣೆ ಆಗಿತ್ತು. ಆದರೆ, ಶಿಕ್ಷೆ ಘೋಷಣೆಯಾಗಿ ಜೈಲು ಪಾಲಾಗಿದ್ದ ಅಪರಾಧಿಗಳಿಬ್ಬರು ನಾಲ್ಕೇ ತಿಂಗಳಲ್ಲಿ ಜೈಲಿನಿಂದ ಹೊರಬಂದಿದ್ದಾರೆ. ಜೈಲಿನಿಂದ ಪೆರೋಲ್ ಮೇಲೆ ಬಿಡುಗಡೆಯಾಗಿರುವ ಫಾದರ್ ಥಾಮಸ್ ಕೊಟ್ಟೂರು ಮತ್ತು ಸಿಸ್ಟರ್ ಸೆಫಿ ಬಗ್ಗೆ ಇದೀಗ ಕೇರಳ ಹೈಕೋರ್ಟ್ ಗರಂ ಆಗಿದ್ದು, ಪೆರೋಲ್ ನೀಡಿರುವ ಬಗ್ಗೆ ವಿವರಣೆ ನೀಡುವಂತೆ ಸೂಚನೆ ನೀಡಿದೆ.

ಸುದೀರ್ಘ ಕಾಲದ ವಿಚಾರಣೆ ಬಳಿಕ ಕಳೆದ ಡಿಸೆಂಬರ್ 23ರಂದು ಹೈಕೋರ್ಟ್ ಅಪರಾಧಿಗಳಿಬ್ಬರಿಗೆ ಶಿಕ್ಷೆ ಘೋಷಣೆ ಮಾಡಿತ್ತು. ಆದರೆ, ಕಳೆದ ಮೇ 11 ಮತ್ತು 12ರಂದು ಇಬ್ಬರನ್ನೂ ಜೈಲಿನ ಅಧಿಕಾರಿಗಳು ಕೊರೊನಾ ನೆಪದಲ್ಲಿ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ. ಕೊರೊನಾ ಹೆಚ್ಚಿದ್ದ ಸಂದರ್ಭದಲ್ಲಿ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳನ್ನು ತತ್ಕಾಲಕ್ಕೆ ಪೆರೋಲ್ ಮೇಲೆ ಬಿಡುಗಡೆ ಮಾಡಬಹುದೆಂದು ಸುಪ್ರೀಂ ಕೋರ್ಟ್ ಹೇಳಿತ್ತು. ಅದೇ ನೆಪವನ್ನು ಇಟ್ಟುಕೊಂಡ ಜೈಲಿನ ಅಧಿಕಾರಿಗಳು ಹದಿನಾಲ್ಕು ವರ್ಷಗಳ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಅಪರಾಧಿಗಳನ್ನು 90 ದಿನಗಳ ಅವಧಿಗೆ ಜಾಮೀನು ನೀಡಿ ಬಿಡುಗಡೆ ಮಾಡಿದ್ದಾರೆ.


ಪೆರೋಲ್ ನೀಡಿರುವ ವಿಚಾರ ಚರ್ಚೆಗೆ ಕಾರಣವಾಗಿದ್ದು ಇದೀಗ ಸದ್ರಿ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯೂ ಆಗಿದ್ದ ಜಾಮೋನ್ ಪುತ್ತನ್ ಪುರಕಲ್ ಎಂಬವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಜಸ್ಟಿಸ್ ವಿನೋದ್ ಚಂದ್ರನ್ ಮತ್ತು ಝಿಯಾದ್ ರಹ್ಮನ್ ಅವರಿದ್ದ ಪೀಠ ಸರಕಾರವನ್ನು ಪ್ರಶ್ನೆ ಮಾಡಿದ್ದು , ಪೆರೋಲ್ ನೀಡಿದ್ದು ಹೇಗೆ ಎಂದು ವಿವರಣೆ ನೀಡುವಂತೆ ಸೂಚನೆ ನೀಡಿದೆ.


ಜೈಲಿನ ಅಧೀಕ್ಷಕರೇ ಅಪರಾಧಿಗಳನ್ನು ಪೆರೋಲ್ ಮೇಲೆ ಮನೆಗೆ ಕಳಿಸಿದ್ದಾರೆಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ. ಆದರೆ, ಹೀಗೆ ಕೈದಿಗಳನ್ನು ಬಿಡುಗಡೆ ಮಾಡಲು ಹೈಪವರ್ ಕಮಿಟಿ ಇದ್ದು, ಸದ್ರಿ ಪ್ರಕರಣದಲ್ಲಿ ಕಮಿಟಿಯಿಂದ ಯಾವುದೇ ವರದಿ ನೀಡಿರಲಿಲ್ಲ ಎನ್ನಲಾಗುತ್ತಿದೆ. ಅಲ್ಲದೆ, ಹತ್ತು ವರ್ಷಕ್ಕಿಂತ ಹೆಚ್ಚು ಅವಧಿಗೆ ಶಿಕ್ಷೆಗೆ ಒಳಗಾದ ಅಪರಾಧಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲು ಈ ಕಮಿಟಿಗೂ ಅಧಿಕಾರ ಇಲ್ಲ. ಹೀಗಾಗಿ ಸಿಸ್ಟರ್ ಅಭಯಾ ಪ್ರಕರಣದಲ್ಲಿ ಅಪರಾಧಿಗಳೆಂದು ಘೋಷಿಸಲ್ಪಟ್ಟವರನ್ನು ಜೈಲಿನಿಂದ ಬಿಡುಗಡೆ ಮಾಡಿದ್ದು ಸಾಮಾಜಿಕ ನ್ಯಾಯದ ಉಲ್ಲಂಘನೆ ಎಂದು ಕೋರ್ಟಿನಲ್ಲಿ ಆಕ್ಷೇಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೆರೋಲ್ ಮೇಲೆ ಬಿಡುಗಡೆ ಮಾಡಿದ್ದನ್ನು ರದ್ದುಪಡಿಸುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.
21 ವರ್ಷದ ಸಿಸ್ಟರ್ ಅಭಯಾಳನ್ನು ಕೊಟ್ಟಾಯಂ ಜಿಲ್ಲೆಯ ಸೈಂಟ್ ಪಿಯೂಸ್ ಕಾನ್ವೆಂಟಿನಲ್ಲಿರುವಾಗ ಫಾದರ್ ಥಾಮಸ್ ಕೊಟ್ಟೂರು ಮತ್ತು ಸಿಸ್ಟರ್ ಸೆಫಿ ಸೇರಿ ಕೊಲೆಗೈದು ಬಾವಿಗೆ ಎಸೆದಿದ್ದರು. ಈ ಬಗ್ಗೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದರೂ, ಸಿಬಿಐ ಅಧಿಕಾರಿಗಳು ಸುದೀರ್ಘ ಕಾಲದ ವಿಚಾರಣೆ, ತನಿಖೆಯ ಬಳಿಕ ಅಪರಾಧಿಗಳಿಗೆ ಶಿಕ್ಷೆ ವಿಧಿಸುವಂತೆ ಮಾಡಿದ್ದರು.
The Kerala High Court on Monday sought the response of the state government on a plea seeking withdrawal of the parole granted to the convicts in the Sister Abhaya murder case. A bench of Justices K Vinod Chandran and Ziyad Rahman A A issued notice to the Kerala government, the Director-General (DG) of Prisons and the two convicts, seeking their stand on the petition moved by Jomon Puthenpurackal, a human rights activist and one of the witnesses in the murder case.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm