ಬ್ರೇಕಿಂಗ್ ನ್ಯೂಸ್
13-07-21 02:50 pm Headline Karnataka News Network ದೇಶ - ವಿದೇಶ
ಜೈಪುರ, ಜುಲೈ 13: ಧರ್ಮವನ್ನು ಹೊರತುಪಡಿಸಿ ಭಾರತೀಯರೆಲ್ಲರ ಡಿಎನ್‌ಎ ಒಂದೇ. ಆಚರಣೆಯ ಆಧಾರದಲ್ಲಿ ಅವರನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದನ್ನು ಆಕ್ಷೇಪಿಸಿ ಪ್ರತಿಕ್ರಿಯೆ ನೀಡಿರುವ ವಿಶ್ವ ಹಿಂದು ಪರಿಷತ್ ನಾಯಕಿ ಸಾಧ್ವಿ ಪ್ರಾಚಿ, ಗೋಮಾಂಸ ತಿನ್ನುವವರ ಡಿಎನ್‌ಎ ಹಿಂದೂಗಳಲ್ಲಿ ಎಂದಿಗೂ ಕಂಡುಬರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ರಾಜಸ್ಥಾನದ ದೌಸಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಧ್ವಿ , ಎಲ್ಲ ಭಾರತೀಯರು ಒಂದೇ ಡಿಎನ್‌ಎ ಹಂಚಿಕೊಂಡಿರಬಹುದು. ಆದರೆ, ಗೋಮಾಂಸ ತಿನ್ನುವವರ ಡಿಎನ್‌ಎ ನಮ್ಮವರ ನಡುವೆ ಕಂಡುಬರಲು ಸಾಧ್ಯವಿಲ್ಲ ಎಂದಿದ್ದಾರೆ.

ಇದೇ ವೇಳೆ ಸಾಧ್ವಿ ಜನಸಂಖ್ಯೆ ನಿಯಂತ್ರಣ ಕ್ರಮಕ್ಕೂ ಒತ್ತಾಯಿಸಿದ್ದಾರೆ. 'ದೇಶದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಕಾನೂನು ಜಾರಿಯಾಗಬೇಕು. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಂದ ಮತ ಚಲಾಯಿಸುವ ಹಕ್ಕೂ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಹಿಂಪಡೆಯ ಬೇಕು' ಎಂದು ಆಗ್ರಹಿಸಿದ್ದಾರೆ.
'ನೀವು ಎಷ್ಟು ಪತ್ನಿಯರನ್ನು ಹೊಂದಿದ್ದೀರಿ ಎಂಬುದು ಮುಖ್ಯವಲ್ಲ, ಆದರೆ, ಇಬ್ಬರೇ ಮಕ್ಕಳಿರಬೇಕು ಎಂದು ಸಾಧ್ವಿ ಹೇಳಿದ್ದಾರೆ. ಲವ್ ಜಿಹಾದ್ ಬಗ್ಗೆಯೂ ಮಾತನಾಡಿದ ಅವರು, 'ರಾಜಸ್ಥಾನದಲ್ಲಿ ಪ್ರೇಮದ ಹೆಸರಿನಲ್ಲಿ ಲವ್ ಜಿಹಾದ್ ಮಾಡಲಾಗುತ್ತಿದ್ದು, ಹೆಣ್ಣು ಮಕ್ಕಳನ್ನು ಮೋಸ ಹಾಗೂ ಮತಾಂತರ ಮಾಡಲಾಗುತ್ತಿದೆ' ಎಂದು ಆರೋಪಿಸಿದ್ದಾರೆ.
'ಮತ ರಾಜಕೀಯವನ್ನು ಪಕ್ಕಕ್ಕಿಡಿ ಮತ್ತು ಹಿಂದು ಹೆಣ್ಣು ಮಕ್ಕಳ ರಕ್ಷಣೆಯತ್ತ ಗಮನಹರಿಸಿ' ಎನ್ನುವ ಮೂಲಕ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
Vishwa Hindu Parishad (VHP) leader Sadhvi Prachi is often in news for making statements. In a recent development, she has replied to Rashtriya Swayamsevak Sangh (RSS) chief Mohan Bhagwat's recent remark on DNA.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm