ಉತ್ತರ ಕನ್ನಡ ಜಿಲ್ಲೆಗೆ ಮೊದಲ ಮಹಿಳಾ ಎಸ್ಪಿಯಾಗಿ ವರ್ತಿಕಾ ಕಟಿಯಾರ್ ನೇಮಕ

15-07-21 12:33 pm       Headline Karnataka News Network   ದೇಶ - ವಿದೇಶ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜುರನ್ನು ವರ್ಗಾವಣೆ ಮಾಡಲಾಗಿದೆ. ವರ್ತಿಕಾ ಕಟಿಯಾರ್ ನೂತನ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.

ಕಾರವಾರ, ಜುಲೈ 15; ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜುರನ್ನು ವರ್ಗಾವಣೆ ಮಾಡಲಾಗಿದೆ. ವರ್ತಿಕಾ ಕಟಿಯಾರ್ ನೂತನ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.

ಬುಧವಾರ ಕರ್ನಾಟಕ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಉತ್ತರ ಕನ್ನಡದ ನೂತನ ಎಸ್ಪಿಯಾಗಿ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ನೇಮಕ ಮಾಡಲಾಗಿದೆ. ಜಿಲ್ಲೆಯ ಮೊದಲ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ಎನ್ನುವ ಹೆಗ್ಗಳಿಕೆಗೆ ವರ್ತಿಕಾ ಕಟಿಯಾರ್ ಪಾತ್ರವಾಗಲಿದ್ದಾರೆ.

ಮೂಲತಃ ಉತ್ತರ ಪ್ರದೇಶದವರಾದ ವರ್ತಿಕಾ 2010ನೇ ಬ್ಯಾಚ್‌ ಐಪಿಎಸ್ ಅಧಿಕಾರಿ. ಈ ಹಿಂದೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಎಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದರು. ಇದಾದ ನಂತರ ಕೊಡಗು ಹಾಗೂ ಧಾರವಾಡ ಎಸ್‌ಪಿಯಾಗಿ, ಅಲ್ಲದೇ ಕೆಎಸ್‌ಆರ್‌ಪಿ ಸಂಶೋಧನಾ ಕೇಂದ್ರದ ಎಸ್‌ಪಿಯಾಗಿ ಸಹ ಕಾರ್ಯನಿರ್ವಹಿಸಿದ್ದರು.

ಪ್ರಸ್ತುತ ರಾಜ್ಯ ಅಪರಾಧ ದಾಖಲೆಗಳ ವಿಭಾಗದಲ್ಲಿ (ಎಸ್‌ಸಿಬಿ) ಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡಿರುವ ಹಾಲಿ ಎಸ್‌ಪಿ ಶಿವಪ್ರಕಾಶ್ ದೇವರಾಜುಗೆ ಸ್ಥಳ ನಿಯೋಜನೆ ಮಾಡಿಲ್ಲ.

ಉತ್ತರ ಕನ್ನಡ ಜಿಲ್ಲೆಗೆ ಈವರೆಗೆ ಮಹಿಳಾ ಅಧಿಕಾರಿಗಳು ಎಸ್‌ಪಿಯಾಗಿ ನೇಮಕವಾಗಿರಲಿಲ್ಲ. ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿ ಇಂಕಾಗ್ಲೋ ಜಮೀರ್ ಕರ್ತವ್ಯ ನಿರ್ವಹಿಸಿದ್ದರೆ, ಇದೀಗ ವರ್ತಿಕಾ ಕಟಿಯಾರ್ ಮೊದಲ ಮಹಿಳಾ ಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

The state government has posted Vartika Katiyar, IPS (RR 2010), as Superintendent of Police, Uttara Kannada, Karwar, while G Sangeetha, IPS (2011), has been posted as Superintendent of Police, Chamarajanagar.