ಬ್ರೇಕಿಂಗ್ ನ್ಯೂಸ್
30-07-21 06:13 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 30: ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನ ನಿರ್ಬಂಧ ಆಗಸ್ಟ್ 31ರವರೆಗೂ ವಿಸ್ತರಿಸಲಾಗಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ.
ಕಳೆದ ವರ್ಷ ಮಾರ್ಚ್ 25ರಂದು ಕೊರೊನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.
ಮೇ 2020 ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈನಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ 'ಏರ್ ಬಬಲ್' ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಅಂತಾರಾಷ್ಟ್ರೀಯ ವಿಮಾನಯಾನವನ್ನು ಅನುಮತಿಸಲಾಗಿದೆ. ಭಾರತವು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ರೂಪಿಸಿದೆ. ಎರಡು ದೇಶಗಳ ನಡುವಿನ ಏರ್ ಬಬಲ್ ಒಪ್ಪಂದದಡಿಯಲ್ಲಿ, ವಿಶೇಷ ಅಂತಾರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದು. ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಆಗಸ್ಟ್ 31ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಆದಾಗ್ಯೂ ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ ಮತ್ತು ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಭಾರತದಿಂದ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ಗೆ ಸಂಚರಿಸುವ ವಿಮಾನಗಳನ್ನು ಆಗಸ್ಟ್ 2 ರವರೆಗೆ ನಿರ್ಬಂಧಿಸಲಾಗುವುದು ಎಂದು ರಾಷ್ಟ್ರೀಯ ವಾಹಕ ಎತಿಹಾಡ್ ಏರ್ವೇಸ್ ತಿಳಿಸಿದೆ. ಯುಎಇ ಅಧಿಕಾರಿಗಳ ನಿರ್ದೇಶನಗಳಿಗೆ ಅನುಗುಣವಾಗಿ ದಿನಾಂಕವನ್ನು ಮತ್ತೆ ವಿಸ್ತರಿಸಬಹುದು ಎಂದು ಖಲೀಜ್ ಟೈಮ್ಸ್ ಎತಿಹಾಡ್ ಏರ್ವೇಸ್ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿದೆ.
"ಆಗಸ್ಟ್ 2 ರವರೆಗೆ ಭಾರತದಿಂದ ಆಗಮಿಸುವ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಎಂಬ ದೃಢಿಕರಣವನ್ನು ನಾವು ಸ್ವೀಕರಿಸಿದ್ದೇವೆ ಮತ್ತು ಇದು ಅಧಿಕಾರಿಗಳನ್ನು ಅವಲಂಬಿಸಿರುವುದರಿಂದ ಇದನ್ನು ವಿಸ್ತರಿಸಲಾಗುತ್ತದೆಯೇ ಎಂದು ನಮಗೆ ಸಂಪೂರ್ಣವಾಗಿ ತಿಳಿದಿಲ್ಲ" ಎಂದು ಎತಿಹಾಡ್ ಏರ್ವೇಸ್ ಟ್ವೀಟರ್ ನಲ್ಲಿ ತಿಳಿಸಿದೆ. ಕೋವಿಡ್-19 ಡೆಲ್ಟಾ ರೂಪಾಂತರದಿಂದಾಗಿ ಭಾರತದಿಂದ ಬರುವ ಪ್ರಯಾಣಿಕ ವಿಮಾನಗಳ ನಿಷೇಧವನ್ನು ಇನ್ನೂ ಒಂದು ತಿಂಗಳು ವಿಸ್ತರಿಸುವುದಾಗಿ ಕೆನಡಾ ಸರ್ಕಾರ ಕಳೆದ ತಿಂಗಳು ಪ್ರಕಟಿಸಿತ್ತು. ಕಳೆದ 24 ಗಂಟೆಗಳಲ್ಲಿ 44,230 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 42,360 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದ ಅವಧಿಯಲ್ಲಿ ಸೋಂಕಿನಿಂದ 555 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಶುಕ್ರವಾರದ ಅಂಕಿಸಂಖ್ಯೆ ಪ್ರಕಾರ, ಇದುವರೆಗೂ ದೇಶದಲ್ಲಿ ಒಟ್ಟು 3,15,72,344 ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ ನಾಲ್ಕು ಲಕ್ಷ ದಾಟಿದ್ದು, ಸದ್ಯ 4,05,155 ಪ್ರಕರಣಗಳಿವೆ. ಇಲ್ಲಿಯವರೆಗೆ ದೇಶದಲ್ಲಿ ಸೋಂಕಿನಿಂದ 4,23,217 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 195 ದಿನಗಳೇ ಕಳೆದಿದ್ದು, ಈವರೆಗೂ 45 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ.
ಗುರುವಾರ ರಾತ್ರಿ 7 ಗಂಟೆ ವೇಳೆಗೆ 46,52,914 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 45,60,33,754 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
International Flights Update: Owing to the growing concerns over possible threat of third wave of Covid-19, India has decided to extend the Covid-related travel ban on international passenger flights till August 31. However, the cargo operations have been exempted.
26-11-24 11:52 am
HK News Desk
ಜೆಡಿಎಸ್ ನಲ್ಲಿ ಭವಿಷ್ಯ ಇಲ್ಲ, ದೇವೇಗೌಡರಿಗೆ ಜನ ಗೌರ...
25-11-24 05:51 pm
ಮನೆಯೊಂದು ಮೂರು ಬಾಗಿಲು, ಗೆಲುವು ಕಸಿದ ಬಿಜೆಪಿ ಒಳಜಗ...
25-11-24 03:28 pm
Bjp, D K Shivakumar : ಚನ್ನಪಟ್ಟಣ ಗೆಲ್ಲಲು ಬಿಜೆಪ...
24-11-24 08:39 pm
CM Siddaramaiah, BJP, Congress ಆರ್. ಅಶೋಕ್ ಕಾ...
23-11-24 07:43 pm
23-11-24 11:07 pm
HK News Desk
ಬಿಜೆಪಿ ‘ಗ್ಯಾರಂಟಿ’ಗೆ ಕೈಹಿಡಿಯದ ಜಾರ್ಖಂಡ್ ಮತದಾರ,...
23-11-24 05:34 pm
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
25-11-24 11:14 pm
Mangalore Correspondent
Vithoba Rukumai temple case, Mangalore: ವಿಠೋಬ...
25-11-24 10:39 pm
Ullal Dargah, Mangalore: ಎಪ್ರಿಲ್ 24 ರಿಂದ ಮೇ...
25-11-24 02:44 pm
Kukke Subrahmanya Temple, Mangalore: ನ.27ರಿಂದ...
24-11-24 09:13 pm
Hariprasad, Mangalore, Congress: ಮಹಾರಾಷ್ಟ್ರದಲ...
24-11-24 05:16 pm
26-11-24 03:10 pm
Mangalore Correspondent
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm
Rowdy sheeter Dawood, Mangalore Crime, Police...
23-11-24 10:49 am
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm