ಬ್ರೇಕಿಂಗ್ ನ್ಯೂಸ್
16-08-21 12:09 pm Headline Karnataka News Network ದೇಶ - ವಿದೇಶ
ಶಿಲ್ಲಾಂಗ್, ಆಗಸ್ಟ್ 16: ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾಅವರ ನಿವಾಸದ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಘಟನೆಯ ಬೆನ್ನಲ್ಲೇ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಶಿಲ್ಲಾಂಗ್‌ನಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಮೊಬೈಲ್ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ.
ಭಾನುವಾರ ರಾತ್ರಿ 10.15 ರ ಸುಮಾರಿಗೆ ಈ ಘಟನೆ ನಡೆದಿದೆ. ವಾಹನಗಳಲ್ಲಿ ಬಂದಿದ್ದ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಆರಂಭದಲ್ಲಿ ಮುಂಭಾಗದಲ್ಲಿ ದುಷ್ಕರ್ಮಿಗಳು ಬಾಟಲಿ ಎಸೆಯುತ್ತಿದ್ದಂತೆಯೇ ಬೆಂಕಿಯನ್ನು ನಂದಿಸಲಾಗಿತ್ತು. ಆದರೆ ನಂತರದಲ್ಲಿ ಹಿಂಭಾಗದಲ್ಲಿಯೂ ಮತ್ತೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.
ಕೂಡಲೇ ಭದ್ರತಾ ಸಿಬ್ಬಂದಿಗಳು ಅಲರ್ಟ್ ಆಗಿದ್ದು, ಬೆಂಕಿಯನ್ನು ನಂದಿಸಿದ್ದಾರೆ. ಸ್ವಾತಂತ್ರ್ಯೋತ್ಸವದ ದಿನದಂದೇ ಈ ಘಟನೆ ನಡೆದಿದ್ದು, ಅಪರಿಚಿತರು ರಾಜ್ಯ ರಾಜಧಾನಿಯಲ್ಲಿ ವಿದ್ವಂಸಕ ಕೃತ್ಯವೆನ್ನೆಸಗಲು ಹೊಂಚು ಹಾಕಿದ್ದರು ಎಂದು ತಿಳಿದು ಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರವು ಶಿಲ್ಲಾಂಗ್‌ನಲ್ಲಿ ಕರ್ಫ್ಯೂ ವಿಧಿಸಿದೆ ಮತ್ತು ಕನಿಷ್ಠ ನಾಲ್ಕು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಿದೆ.
ಘಟನೆಯ ಬೆನ್ನಲ್ಲೇ ರಾಜ್ಯದ ಗೃಹ ಸಚಿವರು ರಾಜೀನಾಮೆ ನೀಡಿದ್ದು, ಶಿಲ್ಲಾಂಗ್‌ನಲ್ಲಿ ಎರಡು ದಿನಗಳ ಕಾಲ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಮುಖ್ಯಮಂತ್ರಿ ಕೊನ್ರಾಡ್ ಸಂಗ್ಮಾಗೆ ಗೃಹ ಸಚಿವರು ರಾಜೀನಾಮೆ ಪತ್ರವನ್ನು ಭಾನುವಾರ ಸಲ್ಲಿಕೆ ಮಾಡಿದ್ದಾರೆ. ಶುಕ್ರವಾರ ಹತ್ಯೆಯಾದ ಚೆಸ್ಟರ್ ಫೀಲ್ಡ್ ತಂಗ್‌ಖಿವ್ (54) ಹತ್ಯೆ ಬಗ್ಗೆ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಪತ್ರದಲ್ಲಿ ಮನವಿಯನ್ನು ಮಾಡಿದ್ದಾರೆ.
ನಿಷೇಧಿತ ಹೈನ್ನಿವ್‌ಟ್ರೆಪ್ ನ್ಯಾಷನಲ್ ಲಿಬರೇಷನ್ ಕೌನ್ಸಿಲ್ ಬಂಡುಕೋರ ಸಂಘಟನೆಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಚೆಸ್ಟರ್ ಫೀಲ್ಡ್ ತಂಗ್‌ಖಿವ್ ಅಂತ್ಯಕ್ರಿಯೆ ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಜನರು ಕಪ್ಪು ಪಟ್ಟಿ ತೊಟ್ಟು, ಕಪ್ಪು ಬಾವುಟ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡರು.
ಪೊಲೀಸರ ಎನ್‌ಕೌಂಟರ್ ವೇಳೆ ಚೆಸ್ಟರ್ ಫೀಲ್ಡ್ ತಂಗ್‌ಖಿವ್ ಗಂಭೀರವಾಗಿ ಗಾಯಗೊಂಡಿದ್ದ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ. ಚೆಸ್ಟರ್ ಫೀಲ್ಡ್ ತಂಗ್‌ಖಿವ್ ಹತ್ಯೆ ಖಂಡಿಸಿ ಶಿಲ್ಲಾಂಗ್‌ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆ ಭಾನುವಾರ ಹಿಂಸಾರೂಪಕ್ಕೆ ತಿರುಗಿದೆ.
ಶಿಲ್ಲಾಂಗ್‌ನ ಹಲವು ಪ್ರದೇಶಗಳಲ್ಲಿ ಕಲ್ಲು ತೂರಾಟ ನಡೆದಿದೆ. ಪೊಲೀಸ್ ಚೌಕಿಯನ್ನು ಧ್ವಂಸ ಮಾಡಲಾಗಿದ್ದು, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮಂಗಳವಾರ ಸಂಜೆ 5 ಗಂಟೆಯ ತನಕ ಶಿಲ್ಲಾಂಗ್‌ನಲ್ಲಿ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
Unidentified miscreants on Sunday night lobbed a petrol bomb at the residence of Meghalaya Chief Minister Conrad K Sangma, police said. The incident took place around 10.15 pm when vehicle-borne attackers lobbed two Molotov cocktail bottles at the premises of his personal residence at Third Mile in Upper Shillong, they said.
26-11-24 11:52 am
HK News Desk
ಜೆಡಿಎಸ್ ನಲ್ಲಿ ಭವಿಷ್ಯ ಇಲ್ಲ, ದೇವೇಗೌಡರಿಗೆ ಜನ ಗೌರ...
25-11-24 05:51 pm
ಮನೆಯೊಂದು ಮೂರು ಬಾಗಿಲು, ಗೆಲುವು ಕಸಿದ ಬಿಜೆಪಿ ಒಳಜಗ...
25-11-24 03:28 pm
Bjp, D K Shivakumar : ಚನ್ನಪಟ್ಟಣ ಗೆಲ್ಲಲು ಬಿಜೆಪ...
24-11-24 08:39 pm
CM Siddaramaiah, BJP, Congress ಆರ್. ಅಶೋಕ್ ಕಾ...
23-11-24 07:43 pm
23-11-24 11:07 pm
HK News Desk
ಬಿಜೆಪಿ ‘ಗ್ಯಾರಂಟಿ’ಗೆ ಕೈಹಿಡಿಯದ ಜಾರ್ಖಂಡ್ ಮತದಾರ,...
23-11-24 05:34 pm
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
25-11-24 11:14 pm
Mangalore Correspondent
Vithoba Rukumai temple case, Mangalore: ವಿಠೋಬ...
25-11-24 10:39 pm
Ullal Dargah, Mangalore: ಎಪ್ರಿಲ್ 24 ರಿಂದ ಮೇ...
25-11-24 02:44 pm
Kukke Subrahmanya Temple, Mangalore: ನ.27ರಿಂದ...
24-11-24 09:13 pm
Hariprasad, Mangalore, Congress: ಮಹಾರಾಷ್ಟ್ರದಲ...
24-11-24 05:16 pm
26-11-24 03:10 pm
Mangalore Correspondent
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm
Rowdy sheeter Dawood, Mangalore Crime, Police...
23-11-24 10:49 am
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm