ಬ್ರೇಕಿಂಗ್ ನ್ಯೂಸ್
16-08-21 12:40 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 16: ತಾಲಿಬಾನ್ ಉಗ್ರರು ಅಫ್ಘಾನಿಸ್ತಾನದಲ್ಲಿ ಆಡಳಿತವನ್ನು ತಮ್ಮ ತೆಕ್ಕೆಗೆ ಪಡೆದುಕೊಂಡಿದ್ದು ಕಮಾಂಡರ್ ಮುಲ್ಲಾ ಅಬ್ದುಲ್ ಘನಿ ಅಫ್ಘಾನಿಸ್ತಾನದ ನೂತನ ಅಧ್ಯಕ್ಷರಾಗಲಿದ್ದಾರೆ ಎನ್ನಲಾಗುತ್ತಿದೆ. ಅಫ್ಘಾನಿಸ್ತಾನದ ಅಧ್ಯಕ್ಷರಾಗಿದ್ದ ಅಶ್ರಫ್ ಘನಿ, ಭಾನುವಾರ ರಾಜಧಾನಿ ಕಾಬೂಲನ್ನು ನಾಲ್ಕು ಸುತ್ತಲಿಂದಲೂ ತಾಲಿಬಾನ್ ಉಗ್ರರು ಆಕ್ರಮಿಸುತ್ತಿದ್ದಂತೆ ಅಧಿಕಾರ ತ್ಯಜಿಸಿ ಪರಾರಿಯಾಗಿದ್ದರು.
ಇದೇ ವೇಳೆ ಶಸ್ತ್ರಸಜ್ಜಿತ ತಾಲಿಬಾನ್ ಬಂಡುಕೋರರು ರಾಜಧಾನಿ ಕಾಬೂಲ್ ಪೂರ್ತಿಯಾಗಿ ಆಕ್ರಮಿಸಿಕೊಂಡಿದ್ದಾರೆ. ಆದರೆ ತಾಲಿಬಾನಿ ವಕ್ತಾರರು, ಬಂಡುಕೋರರು ಕಾಬೂಲ್ ನಗರವನ್ನು ಶಾಂತಿಯುತವಾಗಿ ಪ್ರವೇಶ ಮಾಡಿದ್ದಾರೆ. ನಾಗರಿಕರ ಮೇಲಾಗಲೀ, ಸೈನಿಕರ ಮೇಲಾಗಲೀ ದಾಳಿ ನಡೆಸಿಲ್ಲ ಎಂದು ತಿಳಿಸಿದ್ದಾರೆ.



ಅಫ್ಘಾನಿಸ್ತಾನದ ಗೃಹಸಚಿವ ಅಬ್ದುಲ್ ಸತ್ತಾರ್ ಅವರು ತಾಲಿಬಾನ್ ಗೆ ಶಾಂತಿಯುತವಾಗಿ ಅಧಿಕಾರ ಹಸ್ತಾಂತರ ಮಾಡುವುದಾಗಿ ತಿಳಿಸಿದ್ದಾರೆ. ತಾಲಿಬಾನ್ ಬಂಡುಕೋರರು ಅಫ್ಘಾನಿಸ್ತಾನ ರಾಜಧಾನಿ ಕಾಬೂಲಿಗೆ ನುಗ್ಗಿ ದಾಳಿ ನಡೆಸುವರೆಂಬ ಭೀತಿ ಎದುರಾಗಿತ್ತು. ಆ ಹಿನ್ನೆಲೆಯಲ್ಲಿ ಅಲ್ಲಿನ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಅದನ್ನು ಮನಗಂಡು ಅಬ್ದುಲ್ ಸತ್ತಾರ್ ಅವರು ತಾಲಿಬಾನ್ ಕಾಬೂಲ್ ಪ್ರವೇಶಿಸಿದಲ್ಲಿ ಆಫ್ಘನ್ ಭದ್ರತಾ ಪಡೆಗಳು ಕಾದಾಟ ನಡೆಸುವುದಿಲ್ಲ ಎನ್ನುವ ಸುಳಿವನ್ನು ನೀಡಿದ್ದರು.
ಇದೇ ವೇಳೆ, ದೇಶದ ಚುಕ್ಕಾಣಿ ಹಿಡಿಯಲು ತಾಲಿಬಾನ್ ಸಂಧಾನಕಾರರು ಮತ್ತು ಅಲ್ಲಿನ ಸರಕಾರದ ನಾಯಕರು ಅಧ್ಯಕ್ಷರ ನಿವಾಸದಲ್ಲಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಅಮೆರಿಕ ತನ್ನ ರಾಜತಾಂತ್ರಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕಾಬೂಲಿನಿಂದ ಹಿಂದಕ್ಕೆ ಕರೆಸಿಕೊಂಡಿದೆ. ಆದರೆ, ರಷ್ಯಾ ಮತ್ತು ಚೀನಾ ಕಾಬೂಲಿನಲ್ಲಿನ ತನ್ನ ರಾಜತಾಂತ್ರಿಕ ಅಧಿಕಾರಿಗಳನ್ನು ಹಿಂದಕ್ಕೆ ಕರೆಸಿಕೊಳ್ಳುವುದಿಲ್ಲ ಎಂದು ತಿಳಿಸಿದೆ.
With Taliban seizing control of Kabul and all top provincial capitals of Afghanistan, its top leader Mullah Abdul Ghani Baradar is most likely to become the next President of the war-ravaged nation.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm