ಬ್ರೇಕಿಂಗ್ ನ್ಯೂಸ್
20-08-21 11:44 am Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 20: "ತಾಲಿಬಾನ್ ಸಂಘಟನೆಯ ಕ್ರೌರ್ಯದ ನಡುವೆ ಅಫ್ಘಾನಿಸ್ತಾನದಲ್ಲಿ ನಾವು ಅನುಭವಿಸುವ ನರಕಯಾತನೆ ನಮಗಷ್ಟೇ ಸೀಮಿತವಾಗಿರಲಿ. ಭವಿಷ್ಯದಲ್ಲಿ ನಮ್ಮ ಮಕ್ಕಳಾದರೂ ಚೆನ್ನಾಗಿ ಬಾಳಿ ಬದುಕಲಿ," ಇಂಥದೊಂದು ಸಣ್ಣ ಆಲೋಚನೆ ಅಫ್ಘಾನಿಸ್ತಾನದ ಗಡಿಯಲ್ಲಿ ಘೋರ ವರ್ತನೆಗೆ ಕಾರಣವಾಗಿ ಬಿಟ್ಟಿದೆ.
ಒಂದು ದಿಕ್ಕಿನಲ್ಲಿ ಅಫ್ಘಾನಿಸ್ತಾನದಿಂದ ಸಾವಿರಾರು ಮಂದಿ ದೇಶ ತೊರೆದು ಹೋಗುತ್ತಿದ್ದಾರೆ. ಇನ್ನೊಂದು ದಿಕ್ಕಿನಲ್ಲಿ ದಾಖಲೆಗಳು ಮತ್ತು ಅನುಮತಿ ಕೊರತೆ ಎದುರಿಸುತ್ತಿರುವ ಜನರು ತಮ್ಮ ಮಕ್ಕಳನ್ನು ದೇಶದಿಂದ ಹೊರಗಟ್ಟಲು ಮನಸ್ಸು ಗಟ್ಟಿ ಮಾಡಿಕೊಂಡಿದ್ದಾರೆ. ನೀವೇ ನಮ್ಮ ಮಕ್ಕಳನ್ನು ಕರೆದುಕೊಂಡು ಹೋಗಿ ಎನ್ನುತ್ತಾ ಮುಳ್ಳಿನ ತಂತಿಗಳ ಮೇಲೆ ತಮ್ಮ ಮಕ್ಕಳನ್ನು ಎಸೆಯುತ್ತಿದ್ದಾರೆ.
ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಇಂಥ ಘಟನೆ ನಡೆಯುತ್ತಿದ್ದು, ಪೋಷಕರೇ ತಮ್ಮ ಮಕ್ಕಳನ್ನು ಎಸೆದು ಹೋಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಪೋಷಕರಿಲ್ಲದೇ ಮಕ್ಕಳನ್ನು ಕರೆದುಕೊಂಡು ಹೋಗಬೇಕೇ ಬೇಡವೇ ಎಂಬುದು ಅಮೆರಿಕಾ ಮತ್ತು ಇಂಗ್ಲೆಂಡ್ ಸೇನಾ ಯೋಧರಿಗೆ ತಲೆನೋವು ತಂದಿದೆ.
ಅಫ್ಘಾನಿಸ್ತಾನದ ಮೇಲೆ ಹಿಡಿತ ಸಾಧಿಸಿರುವ ತಾಲಿಬಾನ್ ಉಗ್ರರು ದೇಶದಲ್ಲಿ ಯಾವುದೇ ಕಾರಣಕ್ಕೂ ಪ್ರಜಾಪ್ರಭುತ್ವ ಜಾರಿಗೊಳಿಸುವುದಕ್ಕೆ ಬಿಡುವುದಿಲ್ಲ. ಪ್ರಜಾಪ್ರಭುತ್ವದ ಬದಲಿಗೆ ಮೊದಲಿನಂತೆ ಷರಿಯಾ ಕಾನೂನುಗಳನ್ನು ಜಾರಿಗೊಳಿಸಲಾಗುವುದು ಎಂದು ಈಗಾಗಲೇ ಸ್ಪಷ್ಟಪಡಿಸಿದೆ. ಷರಿಯಾ ಕಾನೂನುಗಳ ಭಯದಲ್ಲಿರುವ ಸಾವಿರಾರು ಮಹಿಳೆಯರು ದೇಶವನ್ನೇ ತೊರೆದು ಹೋಗುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ವಿದೇಶಗಳಿಗೆ ತೆರಳಲು ದಾಖಲೆಗಳ ಕೊರತೆ ಮತ್ತು ಸಮಸ್ಯೆ ಎದುರಾದ ಹಿನ್ನೆಲೆ ತಮ್ಮ ಮಕ್ಕಳಾದರೂ ವಿದೇಶಗಳಲ್ಲಿ ಸುರಕ್ಷಿತವಾಗಿರಲಿ ಎಂದು ವಿದೇಶಿ ಸೇನಾ ಯೋಧರ ಕೈಗೆ ತಮ್ಮ ಮಕ್ಕಳನ್ನು ನೀಡುತ್ತಿರುವ ಘಟನೆ ಮನ ಕಲಕುವಂತಿದೆ.
ಗಡಿಯಲ್ಲಿನ ಮುಳ್ಳಿನ ತಂತಿ ಮೇಲೆ ಮಕ್ಕಳನ್ನು ಎಸೆದರು
ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅಮೆರಿಕಾ ಮತ್ತು ಇಂಗ್ಲೆಂಡ್ ಸೇನಾ ಪಡೆಯು ಸ್ಥಳಾಂತರ ಕಾರ್ಯಾಚರಣೆಯಲ್ಲಿ ತೊಡಗಿದ್ದವು. ಅಫ್ಘಾನ್ ಪ್ರಜೆಗಳನ್ನು ಕರೆದುಕೊಂಡು ಹೋಗುವುದಕ್ಕೆ ವಿದೇಶಿ ಸೇನಾ ಪಡೆಗಳು ನಿರಾಕರಿಸುತ್ತಿದ್ದಂತೆ ತಾಯಂದಿರು ತಮ್ಮ ಮಕ್ಕಳನ್ನು ಮುಳ್ಳಿನ ತಂತಿ ಬೇಲಿಗಳ ಮೇಲೆ ಎಸೆದರು. ನಮ್ಮ ಮಕ್ಕಳನ್ನು ಕರೆದುಕೊಂಡು ಹೋಗಿ ಎಂದು ಸೇನಾ ಯೋಧರಿಗೆ ಪರಿಪರಿಯಾಗಿ ಅಂಗಲಾಚಿ ಬೇಡಿಕೊಳ್ಳುತ್ತಿದ್ದರು.
'ರಾತ್ರಿಯ ವೇಳೆ ಮಹಿಳೆಯರು ತಮ್ಮ ಮಕ್ಕಳನ್ನು ಮುಳ್ಳುತಂತಿಗಳ ಮೇಲೆ ಎಸೆಯುವುದನ್ನು ನೋಡಿ, ಸೈನಿಕರನ್ನು ಇನ್ನೊಂದು ಬದಿಯಲ್ಲಿ ಹಿಡಿಯುವಂತೆ ಕೇಳಿದರು. ಇದು ಭಯಾನಕವಾಗಿದೆ, ಮಹಿಳೆಯರು ತಮ್ಮ ಶಿಶುಗಳನ್ನು ರೇಜರ್ ತಂತಿಯ ಮೇಲೆ ಎಸೆಯುತ್ತಿದ್ದರು, ಸೈನಿಕರನ್ನು ಕರೆದುಕೊಂಡು ಹೋಗುವಂತೆ ಕೇಳಿದರು, ಕೆಲವರು ತಂತಿಯಲ್ಲಿ ಸಿಲುಕಿಕೊಂಡರು', ಎಂದು ಹಿರಿಯ ಬ್ರಿಟಿಷ್ ಸೇನಾ ಅಧಿಕಾರಿಯೊಬ್ಬರು ಹೇಳಿದ್ದಾರೆ.
ತಾಲಿಬಾನಿಗಳ ಬಗ್ಗೆ ಅಫ್ಘಾನ್ ಪ್ರಜೆಗಳಲ್ಲಿ ನಡುಕ
ಅಫ್ಘಾನಿಸ್ತಾನವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಳ್ಳುತ್ತಿದ್ದಂತೆ ದೇಶದ ಲಕ್ಷಾಂತರ ಜನರ ಎದೆಯಲ್ಲಿ ಢವಢವ ಜೋರಾಗಿದೆ. ಭವಿಷ್ಯದ ಭೀತಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ದೇಶವನ್ನೇ ತೊರೆದು ಹೋಗುವುದಕ್ಕೆ ಶುರು ಮಾಡಿದ್ದಾರೆ. 1996 ರಿಂದ 2001ರ ಅವಧಿಯಲ್ಲಿ ಆಡಳಿತ ನಡೆಸಿದ ಇದೇ ತಾಲಿಬಾನ್ ಉಗ್ರರು ಕ್ರೂರಾತೀಕ್ರೂರ ಶಿಕ್ಷೆಗಳನ್ನು ನೀಡುವ ಮೂಲಕ ಜನರ ಎದೆಯಲ್ಲಿ ನಡುಕ ಹುಟ್ಟಿಸಿದ್ದರು. 1990ರ ದಶಕದ ತಾಲಿಬಾನ್ ಉಗ್ರರ ಆಳ್ವಿಕೆಯಲ್ಲಿ ಜಾರಿಗೊಳಿಸಿದ ಷರಿಯಾ ಕಾನೂನಿನ ಕ್ರೌರ್ಯತೆ ಬಗ್ಗೆ ಅರಿತಿರುವ ಜನರು ಉಗ್ರರ ಮುಷ್ಠಿಯಿಂದ ತಪ್ಪಿಸಿಕೊಳ್ಳುವುದಕ್ಕೆ ಹಾತೊರೆಯುತ್ತಿದ್ದಾರೆ.
ಅಫ್ಘಾನ್ ಚಿತ್ರಣ ಬದಲಿಸಿದ ತಾಲಿಬಾನ್ ಉಗ್ರರು
ಎರಡು ದಶಕಗಳ ಕಾಲ ಯುನೈಟೆಡ್ ಸ್ಟೇಟ್ಸ್ ಸೇನೆ ಭದ್ರತೆ ನಡುವೆ ಸುಭದ್ರವಾಗಿದ್ದ ಅಫ್ಘಾನಿಸ್ತಾನವನ್ನು ತಾಲಿಬಾನ್ ಕೇವಲ 10 ದಿನಗಳಲ್ಲೇ ಸಂಪೂರ್ಣ ಕೈವಶ ಮಾಡಿಕೊಂಡಿದೆ. ಯುಎಸ್ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳುವುದಾಗಿ ಘೋಷಿಸುತ್ತಿದ್ದಂತೆ ತಾಲಿಬಾನ್ ಉಗ್ರ ಸಂಘಟನೆ ಅಲರ್ಟ್ ಆಗಿದೆ. ಮೊದಲಿಗೆ ದೇಶದ ಒಂದೊಂದೇ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಂಡ ತಾಲಿಬಾನ್ ಉಗ್ರರು ಕಳೆದ ಆಗಸ್ಟ್ 15ರಂದು ರಾಜಧಾನಿ ಕಾಬೂಲ್‌ಗೆ ಲಗ್ಗೆ ಇಡುವ ಮೂಲಕ ಇಡೀ ದೇಶವನ್ನು ಹಿಡಿತಕ್ಕೆ ತೆಗೆದುಕೊಂಡಿದೆ.
ಅಫ್ಘಾನ್ ಮೇಲೆ ಅಮೆರಿಕಾ ಹಿಡಿತ ಸಾಧಿಸಿದ ಕಾಲ:
ಕಳೆದ 1996 ರಿಂದ 2001ರವರೆಗೂ ಅಫ್ಘಾನಿಸ್ತಾನದಲ್ಲಿ ಇದೇ ತಾಲಿಬಾನ್ ಉಗ್ರ ಸಂಘಟನೆಯ ಹಿಡಿತದಲ್ಲಿತ್ತು. 2001ರ ಸಪ್ಟೆಂಬರ್ 11ರಂದು ಯುನೈಟೆಡ್ ಸ್ಟೇಟ್ಸ್ ಮೇಲೆ ಅಲ್ ಖೈದಾ ಉಗ್ರರು ದಾಳಿ ನಡೆಸಿದ್ದರು. ಅಲ್ ಖೈದಾ ಜೊತೆ ಆತ್ಮೀಯವಾಗಿ ಗುರುತಿಸಿಕೊಂಡಿದ್ದ ಕಾರಣಕ್ಕಾಗಿ ತಾಲಿಬಾನ್ ಮೇಲೂ ಯುಎಸ್ ಸೇನಾಪಡೆಗಳು ಕಾರ್ಯಾಚರಣೆಗೆ ಇಳಿದವು. ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಅಫ್ಘಾನ್ ಮೇಲೆ ದಾಳಿ ನಡೆಸಿದ ಯುಎಸ್ ಸೇನೆಯು ಅಫ್ಘಾನಿಸ್ತಾನವನ್ನು 2001ರಲ್ಲಿ ತಾಲಿಬಾನ್ ಹಿಡಿತದಿಂದ ಬಿಡುಗಡೆಗೊಳಿಸಿತು. ಅದರ ಪರಿಣಾಮವಾಗಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ಕಳೆದುಕೊಂಡಿತು. ಯುಎಸ್ ಬೆಂಬಲಿತ ಸರ್ಕಾರವು ಅಸ್ತಿತ್ವಕ್ಕೆ ಬಂದಿತ್ತು.
Kabul airport has become a picture of chaos and desperation after the fall of Afghanistan into the hands of the Taliban. As per the reports of Sky News, in a heartbreaking incident, desperate Afghan women were se
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm