ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನ

21-08-21 11:08 pm       Headline Karnataka News Network   ದೇಶ - ವಿದೇಶ

ಹಿರಿಯ ಬಿಜೆಪಿ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್(89) ಶನವಾರ ರಾತ್ರಿ ನಿಧನರಾಗಿದ್ದಾರೆ.

ಲಕ್ನೋ, ಆಗಸ್ಟ್ 21: ಹಿರಿಯ ಬಿಜೆಪಿ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್(89) ಶನವಾರ ರಾತ್ರಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಯಾಣ್ ಸಿಂಗ್ ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಕಳೆದ ಜುಲೈ 4ರಂದು ಇದ್ದಕ್ಕಿದ್ದಂತೆ ದೇಹ ಊದಿಕೊಂಡು, ಪ್ರಜ್ಞಾಹೀನರಾಗಿದ್ದ ಹಿನ್ನೆಲೆಯಲ್ಲಿ ಕಲ್ಯಾಣ್ ಸಿಂಗ್‌ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಂಜಯ್ ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸುವ ಮೊದಲು ಕಲ್ಯಾಣ್ ಸಿಂಗ್‌ರನ್ನು ಮೊದಲು ರಾಮ ಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಉತ್ತರಪ್ರದೇಶದ ಮಾಜಿ ಸಿಎಂ ಹಾಗೂ ರಾಜಸ್ಥಾನದ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ ಸೆಪ್ಸಿಸ್ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರಿಂದ ಶನಿವಾರ ನಿಧನರಾದರು ಎಂದು ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ;

"ಕಲ್ಯಾಣ್ ಸಿಂಗ್‌ರವರು ಸಮಾಜದ ಕಟ್ಟಕಡೆಯ ಅಂಚಿನಲ್ಲಿರುವ ವರ್ಗಗಳಿಗೆ ಸೇರಿದ ಕೋಟ್ಯಂತರ ಜನರಿಗೆ ಧ್ವನಿ ನೀಡಿದರು. ರೈತರು, ಯುವಕರು ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಅವರು ಹಲವಾರು ಪ್ರಯತ್ನಗಳನ್ನು ಮಾಡಿದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೇಳಿಕೊಳ್ಳುತ್ತೇನೆ," ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ;

"ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ದೇಶ ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ಮುಖ್ಯಮಂತ್ರಿಗಳಾಗಿ, ರಾಜ್ಯಪಾಲರಾಗಿ ಅವರ ಸೇವೆ, ಸಾಮಾಜಿಕ ನ್ಯಾಯ, ನಿರ್ಲಕ್ಷಿತ ಸಮುದಾಯಗಳ ಏಳಿಗೆಗಾಗಿ ಅವರ ಬದ್ಧತೆ ಸ್ಫೂರ್ತಿದಾಯಕವಾಗಿತ್ತು."

Former Uttar Pradesh Chief Minister Kalyan Singh (89) passed away here on Saturday due to sepsis and multi-organ failure. Singh was admitted to the ICU of Sanjay Gandhi Postgraduate Institute of Medical Sciences (SGPGI) on July 4 in a critical condition. On Saturday, his condition worsened due to kidney infection. He breathed his last at 9.15 pm.