ಬ್ರೇಕಿಂಗ್ ನ್ಯೂಸ್
26-08-21 08:53 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 26: ಕಾಬೂಲ್ ಏರ್‌ಪೋರ್ಟ್ ಬಳಿ ಭಾರಿ ಸ್ಫೋಟ ಸಂಭವಿಸಿದ್ದು, 13 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಏರ್‌ಪೋರ್ಟ್‌ನಲ್ಲೇ ಮೂರು ಕಡೆ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ.
ಸಾವಿರಾರು ಜನರು ವಿದೇಶಕ್ಕೆ ತೆರಳಲು ಕಾಬೂಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಿರುವ ಹಿನ್ನೆಲೆಯಲ್ಲಿ ಭಯ ಹುಟ್ಟಿಸಲು ಉಗ್ರರು ಈ ಬಾಂಬ್ ದಾಳಿ ನಡೆಸಿದ್ದಾರೆ.
ಪೆಂಟಗನ್ ವಕ್ತಾರ ಜಾನ್ ಕರ್ಬಿ ಸಹ ಸ್ಫೋಟವನ್ನು ದೃಢಪಡಿಸಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾದ ತಕ್ಷಣ ಹಂಚಿಕೊಳ್ಳುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಈ ಕುರಿತು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರಿಗೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಾಲಿಬಾನ್ ಉಗ್ರರ ಅಟ್ಟಹಾಸ ಹೆಚ್ಚಾಗಿರುವ ಸಮಯದಿಂದಲೂ ಸುಮಾರು 9 ಸಾವಿರಕ್ಕೂ ಅಧಿಕ ಅಫ್ಘಾನಿಸ್ತಾನದ ನಾಗರಿಕರು ವಿವಿಧ ದೇಶಗಳಿಗೆ ತೆರಳಿದ್ದಾರೆ. ಕೆಳೆದ ಕೆಲ ದಿನಗಳಿಂದ ಕಾಬೂಲ್ ಏರ್‌ಪೋರ್ಟ್ ಮೇಲೆ ತಾಲಿಬಾನಿಗಳು ಹಿಡಿತ ಸಾಧಿಸಿದ್ದಾರೆ. ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಬಳಿ ಸ್ಫೋಟ ಸಂಭವಿಸಿದೆ. ಮೇಲ್ನೋಟಕ್ಕೆ ಇದು ಆತ್ಮಾಹುತಿ ಬಾಂಬ್ ಎನಿಸುತ್ತದೆ. ಅಫ್ಘಾನ್ ನಾಗರಿಕರು ವಿಮಾನ ನಿಲ್ದಾಣ ಪ್ರವೇಶಿಸಲು ಮುಗಿಬಿದ್ದು, ನೂಕುನುಗ್ಗಲು ಉಂಟಾದ ವೇಳೆಯಲ್ಲಿಯೆ ಬಾಂಬ್ ಸ್ಫೋಟಿಸಿದೆ. ಬಾಂಬ್ ಸ್ಫೋಟಿಸಿದ ಸಂದರ್ಭದಲ್ಲಿ ವಿಮಾನ ನಿಲ್ದಾಣ ಪ್ರವೇಶ ದ್ವಾರದ ಬಳಿ ಅಫ್ಘಾನಿಗಳು ದೊಡ್ಡಸಂಖ್ಯೆಯಲ್ಲಿದ್ದರು ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.
ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲಿದೆ ಎಂದು ಅಮೆರಿಕ ಅಧಿಕಾರಿಗಳು ಈ ಮೊದಲು ಎಚ್ಚರಿಸಿದ್ದರು. ಆತ್ಮಾಹುತಿ ಬಾಂಬ್ ದಾಳಿಯೇ ನಡೆಯಬಹುದು ಎಂದು ಖಚಿತವಾಗಿ ನುಡಿದಿದ್ದರು. 'ಬಾಂಬ್ ಸ್ಫೋಟಿಸಲಿದೆ, ಅದನ್ನು ತಡೆಯುವ ಸ್ಥಿತಿಯಲ್ಲಿ ನಾವಿಲ್ಲ ಎಂಬುದು ನಮಗೆ ಗೊತ್ತಿತ್ತು' ಎಂದು ಅಮೆರಿಕ ದೂತಾವಾಸದ ಅಧಿಕಾರಿ ರೋಸ್ ವಿಲ್ಸನ್ ಹೇಳಿದ್ದಾರೆ.
ಕಾಬೂಲ್ ವಿಮಾನ ನಿಲ್ದಾಣಕ್ಕೆ ಉಗ್ರ ದಾಳಿ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿರುವ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯಾರೂ ಪ್ರಯಾಣಿಸಬಾರದು ಎಂದು ಬ್ರಿಟನ್ ತನ್ನ ನಾಗರಿಕರಿಗೆ ಹೇಳಿದೆ. ಈ ಬೆಳವಣಿಗೆಯು ಇಸ್ಲಾಮಿಕ್ ಸ್ಟೇಟ್(ISIS) ಅಫ್ಘಾನಿಸ್ತಾನದ ಅಂಗಸಂಸ್ಥೆಯ ಬೆದರಿಕೆಗಳಿಗೆ ಸಂಬಂಧಿಸಿದೆ, ಇದನ್ನು ಇಸ್ಲಾಮಿಕ್ ಸ್ಟೇಟ್ ಖೋರಾಸನ್ ಅಥವಾ ISIS-K ಎಂದು ಕರೆಯುತ್ತಾರೆ, ಇದು ಆತ್ಮಹತ್ಯಾ ಬಾಂಬ್ ದಾಳಿ ಮತ್ತು ಕಾರ್ ಬಾಂಬ್ ದಾಳಿ ನಡೆಸುವುದಕ್ಕೆ ಹೆಸರುವಾಸಿಯಾಗಿದೆ ಎಂದು ತಿಳಿಸಿದೆ.
ವಿಮಾನ ನಿಲ್ದಾಣ ಸೇರಿದಂತೆ ಕಾಬೂಲ್‌ನ ಪರಿಸ್ಥಿತಿ ತ್ವರಿತವಾಗಿ ಬದಲಾಗುತ್ತಲೇ ಇದೆ. ನೀವು ಕಾಬೂಲ್ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬೇಡಿ. ಒಂದು ವೇಳೆ ಈಗಾಗಲೇ ವಿಮಾನ ನಿಲ್ದಾಣದ ಪ್ರದೇಶದಲ್ಲಿದ್ದರೆ ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳಿ ಮತ್ತು ಹೆಚ್ಚಿನ ಸಲಹೆಗಾಗಿ ನಿರೀಕ್ಷಿಸಿ ಎಂದು ಎಫ್‌ಸಿಡಿಒ ಹೇಳಿದೆ.
ಅಫ್ಘಾನಿಸ್ತಾನದಿಂದ ಪಲಾಯನ ಮಾಡಲು ಕಾಬೂಲ್ ವಿಮಾನ ನಿಲ್ದಾಣದತ್ತ ಬರುತ್ತಿರುವವರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಲು ಯೋಜಿಸುತ್ತಿರುವುದಾಗಿ ಬ್ರಿಟನ್ ರಕ್ಷಣಾ ಸಚಿವ ಜೇಮ್ಸ್ ಹೆಪ್ಪಿ ಆತಂಕ ವ್ಯಕ್ತಪಡಿಸಿದ್ದರು. ಇದೀಗ ಮೂರು ಕಡೆ ಸ್ಫೋಟ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
There were at least two explosions near Kabul's airport amid a huge evacuation effort from Afghanistan, the Pentagon said on Thursday, with civilians and U.S. service members among the casualties. Pentagon spokesman John Kirby said one blast occurred near the airport's Abbey Gate and the other close to the nearby Baron Hotel. Two U.S. officials said at least one of the explosions appeared to be from a suicide bombing.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm