ಭಾರತದಲ್ಲಿ ಒಂದೇ ದಿನ 90,802 ಕೊರೋನ ಪ್ರಕರಣ - 32.50 ಲಕ್ಷ ಮಂದಿ ಕೊರೊನಾದಿಂದ ಗುಣಮುಖ

07-09-20 10:59 am       Headline Karnataka News Network   ದೇಶ - ವಿದೇಶ

32,50,429 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 24 ಗಂಟೆಯಲ್ಲಿ 1,016 ಮಂದಿ ಕೊರೊನಾಗೆ ಬಲಿಯಾಗಿದ್ದು, ಇದುವರೆಗೂ ಕೊರೊನಾ ಸೋಂಕಿನಿಂದ 71,642 ಮಂದಿ ಮೃತಪಟ್ಟಿದ್ದಾರೆ.

ನವದೆಹಲಿ, ಸೆಪ್ಟೆಂಬರ್ 7: ಭಾರತದಲ್ಲಿ ಮಹಾಮಾರಿ ಕೊರೊನಾ ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 90,802 ಪ್ರಕರಣಗಳು ವರದಿ ಆಗಿದೆ.

ಒಂದೇ ದಿನ 90,802 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 42,04,614ಕ್ಕೆ ಏರಿಕೆ ಆಗಿದೆ. ಜೊತೆಗೆ 24 ಗಂಟೆಯಲ್ಲಿ 1,016 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

42,04,614 ಕೊರೊನಾ ಸೋಂಕಿತರ ಪೈಕಿ 8,82,542 ಸಕ್ರಿಯ ಪ್ರಕರಣಗಳಿದ್ದು, 32,50,429 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 24 ಗಂಟೆಯಲ್ಲಿ 1,016 ಮಂದಿ ಕೊರೊನಾಗೆ ಬಲಿಯಾಗಿದ್ದು, ಇದುವರೆಗೂ ಕೊರೊನಾ ಸೋಂಕಿನಿಂದ 71,642 ಮಂದಿ ಮೃತಪಟ್ಟಿದ್ದಾರೆ.

ಕೊರೊನಾ ದೇಶಗಳ ಪಟ್ಟಿಯಲ್ಲಿ ಭಾರತ ಬ್ರೆಜಿಲ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದಿದೆ. ಮರಣಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಇನ್ನು ದೇಶದಲ್ಲಿ ಕೊರೊನಾದಿಂದ ಚೇತರಿಸಿಕೊಂಡವರ ಪ್ರಮಾಣವೂ ದಾಖಲೆ ಮಟ್ಟದಲ್ಲಿ ಹೆಚ್ಚಿದೆ.