ಬ್ರೇಕಿಂಗ್ ನ್ಯೂಸ್
01-09-21 11:07 am Source: One India kannada ದೇಶ - ವಿದೇಶ
ನವದೆಹಲಿ, ಸೆ.1: ಕೊರೊನಾ ಸಾಂಕ್ರಾಮಿಕದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಕಹಿಸುದ್ದಿ ಸಿಕ್ಕಿದೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್ 01ರಿಂದ ಅಡುಗೆ ಅನಿಲ ಪ್ರತಿ ಸಿಲಿಂಡರ್ ಮೇಲೆ ಹೆಚ್ಚುವರಿ 25 ರು ತೆರಬೇಕಾಗುತ್ತದೆ.
ಪರಿಷ್ಕೃತ ದರ ಪಟ್ಟಿ ಬುಧವಾರದಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳು ಹೇಳಿವೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು 25 ರೂ. ಏರಿಕೆ ಮಾಡಿದ್ದಲ್ಲದೆ, ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 75 ರೂ. ನಷ್ಟು ಏರಿಸಲಾಗಿದೆ.
ಬೆಲೆ ಹೆಚ್ಚಳದ ಬಳಿಕ ರಾಜಧಾನಿ ದೆಹಲಿಯಲ್ಲಿ ಗೃಹ ಬಳಕೆ ಎಲ್ ಪಿ ಜಿ ಸಿಲಿಂಡರ್ ಬೆಲೆ 884.50 ರು ಪ್ರತಿ ಸಿಲಿಂಡರ್ ಆಗಿದೆ. ಜುಲೈ 1ರಂದು ಸಿಲಿಂಡರ್ ಬೆಲೆ 25.50 ರು ಹೆಚ್ಚಿಸಲಾಗಿತ್ತು. ಆಗಸ್ಟ್ 17ರಂದು ಮತ್ತೊಮ್ಮೆ 25 ರು ಹೆಚ್ಚಳವಾಗಿತ್ತು.
ಬೆಂಗಳೂರು ನಗರದಲ್ಲಿ ಆಗಸ್ಟ್ ತಿಂಗಳಲ್ಲಿ ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆ 837.50 ರೂ.ಗಳಿಂದ 863 ರೂ.ಗಳಿಗೆ ಏರಿಕೆಯಾಗಿತ್ತು. ಸೆ.1ರಿಂದ 887.5 ರು ನೀಡಬೇಕಾಗುತ್ತದೆ.

ಬೆಲೆ ಏರಿಕೆ ನಿರಂತರ
ಮೇ 1, 2014ರಲ್ಲಿ 410.50 ರು ಇದ್ದ ಸಿಲಿಂಡರ್ ಬೆಲೆ ದ್ವಿಗುಣವಾಗಿ ಈಗ ಸರಾಸರಿ 859.50 ರು ನಷ್ಟಾಗಿದೆ. 2021ರ ಫೆಬ್ರವರಿ ತಿಂಗಳಲ್ಲಿ 100 ರು ಏರಿಕೆ ಮಾಡಲಾಗಿತ್ತು. ಫೆಬ್ರವರಿ 4, ಫೆ.14 ಹಾಗೂ ಫೆ.25ರಂದು ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಮೂರು ಬಾರಿ ಬೆಲೆ ಹೆಚ್ಚಳ ಮಾಡಿ ದಾಖಲೆ ಬರೆಯಲಾಗಿತ್ತು. ಒಟ್ಟಾರೆ ಕಳೆದ 2020ರ ಡಿಸೆಂಬರ್ ತಿಂಗಳಿನಿಂದ 200 ರು ಪ್ರತಿ ಸಿಲಿಂಡರ್ ನಂತೆ ಏರಿಕೆ ಕಂಡಿತ್ತು. ಕಳೆದ ನವೆಂಬರ್ ತಿಂಗಳಿನಿಂದಲೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿತ್ತು. ಹೀಗಾಗಿ ಭಾರತದಲ್ಲಿಯೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಕಂಡಿತ್ತು. ಪೆಟ್ರೋಲ್, ಡೀಸೆಲ್ ದರ ಸೇರಿದಂತೆ ಎಲ್‌ಪಿಜಿ ಸಿಲಿಂಡರ್ ದರದಲ್ಲಿಯೂ ಏರಿಕೆ ಮಾಡಲಾಗಿತ್ತು. ಒಟ್ಟಾರೆ ಜನವರಿ 1, 2021ರಿಂದ ಸೆಪ್ಟೆಂಬರ್ 1, 2021 ಅವಧಿಯಲ್ಲಿ 190 ರು ನಷ್ಟು ಬೆಲೆ ಏರಿಕೆಯಾಗಿದೆ.

ಪ್ರಮುಖ ನಗರಗಳಲ್ಲಿ ಸಿಲಿಂಡರ್ ಬೆಲೆ
ಸೆಪ್ಟೆಂಬರ್ 1ರಂದು ಗೃಹಬಳಕೆ ಎಲ್ ಪಿ ಜಿ ಸಿಲಿಂಡರ್ ಬೆಲೆ :
ದೆಹಲಿ: 884.50 ರು (ಆಗಸ್ಟ್ ದರ 859.50)
ಬೆಂಗಳೂರು: 887.5 ರು (862.50 ರು)
ಮುಂಬೈ: 884.50 ರು (859.50 ರು)
ಕೋಲ್ಕತಾ: 911 ರು (886.00 ರು)
ಚೆನ್ನೈ: 900.50 ರು (875.50 ರು)
ತಿರುವನಂತಪುರಂ: 894 ರು (869.00)
ಹೈದರಾಬಾದ್: 937 ರು (912.00)

ಎಲ್ ಪಿ ಜಿ ಸಿಲಿಂಡರ್ ಬೆಲೆ
19 ಕೆ.ಜಿ ಸಿಲಿಂಡರ್ ದರ
ದೆಹಲಿ: 1698 ರು (ಆಗಸ್ಟ್ ದರ: 1623.00)
ಮುಂಬೈ: 1654.5 ರು (1579.50)
ಕೋಲ್ಕತಾ: 1776.5 ರು (1701.50)
ಚೆನ್ನೈ: 1836 ರು (1761.00)
ಪೆಟ್ರೋಲಿಯಂ ಕಂಪನಿಗಳು ಪ್ರತಿ ತಿಂಗಳ 1 ಮತ್ತು 15ನೇ ತಾರೀಕಿನ ಬಳಿಕ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆಯಾಗುತ್ತಲೇ ಹೋಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
ನೈಸರ್ಗಿಕ ಅನಿಲದ ಸರಾಸರಿ ದರ ನಿಗದಿ ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ. ಇದಲ್ಲದೆ ಆರು ತಿಂಗಳಿಗೊಮ್ಮೆ ನೈಸರ್ಗಿಕ ಅನಿಲದ ಸರಾಸರಿ ದರ ನಿಗದಿಪಡಿಸಲಾಗುತ್ತದೆ. ಈ ಹೊಸ ದರಗಳು ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಕಂಪನಿ ಹೇಳಿದೆ. ಏಕೆಂದರೆ ಅವುಗಳು ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಗೆ ಒಳಪಟ್ಟಿವೆ
25-12-25 06:26 pm
HK News Desk
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm