ಬ್ರೇಕಿಂಗ್ ನ್ಯೂಸ್
02-09-21 12:39 pm Headline Karnataka News Network ದೇಶ - ವಿದೇಶ
Photo credits : Representational
ಲಕ್ನೋ, ಸಪ್ಟೆಂಬರ್ 2: ಕಳೆದ ಒಂದೇ ವಾರದಲ್ಲಿ ಉತ್ತರ ಪ್ರದೇಶದ ಆಗ್ರಾ, ಫಿರೋಜಬಾದ್, ಮಥುರಾ, ಮಣಿಪುರಿ ಮತ್ತು ಇಟಾ ಹಾಗೂ ಕಾಸಗಂಜ್ ಜಿಲ್ಲೆಗಳಲ್ಲಿ 50ಕ್ಕೂ ಹೆಚ್ಚು ಮಕ್ಕಳು ತೀವ್ರ ಜ್ವರ, ನಿರ್ಜಲೀಕರಣ ಮತ್ತು ಪ್ಲೆಟ್ಲೆಟ್ ಪ್ರಮಾಣದ ಹಠಾತ್ ಕುಸಿತದಿಂದ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾವಿನ ಪ್ರಮಾಣ ಹೆಚ್ಚಾದ ಹಿನ್ನೆಲೆ ನಿರ್ಲಕ್ಷ್ಯ ಧೋರಣೆ ಆರೋಪದಡಿ ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ತೆಗೆದು ಹಾಕಲಾಗಿದ್ದು, ರೋಗ ನಿಯಂತ್ರಣಕ್ಕೆ ಶಿಸ್ತುಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಫಿರೋಜಬಾದ್ ಜಿಲ್ಲೆಯಲ್ಲಿನ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುವಂತೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ. ಅದರ ಜೊತೆ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಸೂಚಿಸಲಾಗಿದೆ. ಕಳೆದ ಸೋಮವಾರ ನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಿಗೆ ಭೇಟಿ ನೀಡಿದ ಯೋಗಿ ಆದಿತ್ಯನಾಥ್, ಡೆಂಗ್ಯೂ ರೋಗದ ನಿಯಂತ್ರಣ ಮತ್ತು ನಿರ್ವಹಣೆ ಬಗ್ಗೆ ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲನೆ ನಡೆಸಿದರು.
ಉತ್ತರ ಪ್ರದೇಶದ ಫಿರೋಜಬಾದ್ ಜಿಲ್ಲೆಯಲ್ಲಿ ಕಳೆದ ಒಂದೇ ವಾರದಲ್ಲಿ 40 ಮಕ್ಕಳು ಪ್ರಾಣ ಬಿಟ್ಟಿದ್ದಾರೆ. ಪ್ರಾಥಮಿಕ ಕಾರಣ ಡೆಂಗ್ಯೂ ಎಂದು ತೋರುತ್ತದೆ, ಆದರೂ ಇತರ ಕಾರಣಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ಆಗ್ರಾ ವಿಭಾಗೀಯ ಆಯುಕ್ತ ಅಮಿತ್ ಗುಪ್ತಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. "ನಾವು ಸಂಬಂಧಪಟ್ಟ ಆಸ್ಪತ್ರೆಗಳಿಗೆ ಪ್ಲೇಟ್‌ಲೆಟ್‌ಗಳನ್ನು ಒದಗಿಸಲು ಕ್ರಮಗಳನ್ನು ಹೆಚ್ಚಿಸಿದ್ದೇವೆ ಮತ್ತು ಅವುಗಳನ್ನು ಆಗ್ರಾದಿಂದಲೂ ತರಲಾಗುತ್ತಿದೆ. ಅಧಿಕೃತ ತಂಡಗಳಿಂದ ತಪಾಸಣೆ ನಡೆಸಲಾಗುತ್ತಿದೆ," ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸಾವಿನ ಪ್ರಕರಣಗಳ ಸಂಖ್ಯೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 7 ರಿಂದ 16ರವರೆಗೆ ಜಾಗೃತಿ ಕಾರ್ಯಕ್ರಮವನ್ನು ನಡೆಸಲು ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಈ ವೇಳೆ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜ್ವರ ಹಾಗೂ ಕೊವಿಡ್-19 ಲಕ್ಷಣಗಳಿರುವ ಜನರ ಆರೋಗ್ಯ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
Chief Minister Yogi Adityanath visited the government hospital in the town on Monday to review the progress of treatment, and measures taken to prevent dengue.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm