ಬ್ರೇಕಿಂಗ್ ನ್ಯೂಸ್
05-09-21 01:29 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಸೆಪ್ಟೆಂಬರ್ 5 : ಕೇರಳದಲ್ಲಿ ನಿಪಾ ವೈರಸ್ ಸೋಂಕಿಗೆ 12 ವರ್ಷ ವಯಸ್ಸಿನ ಬಾಲಕ ಮೃತಪಟ್ಟಿರುವುದನ್ನು ಆರೋಗ್ಯ ಸಚಿವೆ ವೀಣಾ ಜಾರ್ಜ್ ದೃಢಪಡಿಸಿದ್ದಾರೆ. ಇದಾದ ಬಳಿಕ ಕೇಂದ್ರದಿಂದ ತಂಡವೊಂದು ಕೋಯಿಕ್ಕಾಡ್ ಕಡೆಗೆ ಧಾವಿಸಿದೆ.
ಬಾಲಕನ ಸ್ಯಾಂಪಲ್‌ಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಇನ್ಸ್ಟಿಟ್ಯೂಟ್ ಗೆ ಕಳಿಸಲಾಗಿತ್ತು. ಕೇಂದ್ರದ ರೋಗ ನಿಯಂತ್ರಕ ತಂಡವೊಂದು ಭಾನುವಾರ ತಲುಪಲಿದ್ದು, ತಾಂತ್ರಿಕ ಸಲಹೆ ನೀಡಲಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಸಚಿವೆ ವೀಣಾ, ''ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾನೆ, ಶನಿವಾರ ರಾತ್ರಿ ವಿಷಮ ಪರಿಸ್ಥಿತಿಯಲ್ಲಿದ್ದ ಬಾಲಕನಿಗೆ ಉತ್ತಮ ಚಿಕಿತ್ಸೆ ನೀಡಲಾಗಿತ್ತು, ಆದರೆ, ದುರದೃಷ್ಟವಶಾತ್ ಉಳಿಸಿಕೊಳ್ಳಲಾಗಲಿಲ್ಲ, ವೈರಸ್ ಸೋಂಕು ಹರಡದಂತೆ ಬೇಕಾದ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಲಾಗಿದ್ದು, ತಜ್ಞ ವೈದ್ಯರ ವಿಶೇಷ ತಂಡವನ್ನು ರಚಿಸಲಾಗಿದೆ. ಬಾಲಕನ ಜೊತೆ ಸಂಪರ್ಕದಲ್ಲಿದ್ದವರನ್ನು ಪ್ರತ್ಯೇಕಿಸಲಾಗಿದ್ದು, ತೀವ್ರ ನಿಗಾವಹಿಸಲಾಗಿದೆ, ಕೇಂದ್ರದ ತಂಡ ನೀಡುವ ಸಲಹೆಯನ್ನು ಮುಂದಿನ ಕ್ರಮ ಜರುಗಿಸಲಾಗುವುದು,'' ಎಂದಿದ್ದಾರೆ.
ಬಾಲಕನಿಗೆ ತಗುಲಿರುವ ಸೋಂಕು ದೃಢಪಡಿಸಿಕೊಳ್ಳಲು ಪ್ಲಾಸ್ಮಾ, ಸಿಎಸ್ ಎಫ್ ಹಾಗೂ ಸೆರಂ ಸ್ಯಾಂಪಲ್ ಗಳನ್ನು ಪುಣೆ ಎನ್ಐವಿಗೆ ಕಳಿಸಲಾಗಿತ್ತು. ಶನಿವಾರ ರಾತ್ರಿ ನಿಫಾ ವೈರಸ್ ಪಾಸಿಟಿವ್ ಎಂದು ಬಂದಿತ್ತು. ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕನನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ಕೊಡಿಸಲಾಯಿತು, ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ.
ನಿಪಾಹ್/ನಿಫಾ ವೈರಸ್ ಎಂದರೇನು?
ನಿಪಾಹ್ ಝೂನೋಸಿಸ್ ಮಾದರಿಯ ವೈರಾಣಾಗಿದ್ದು, ಇದು ಮನುಷ್ಯ ಮತ್ತು ಪ್ರಾಣಿಗಳಲ್ಲಿ ಹಲವು ಬಗೆಯ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ.
ಎನ್‌ಸಿಫಾಲಿಟಿಸ್-ಇನ್‌ಡ್ಯೂಸಡ್ ಮಯೋಕಾರ್ಡಿಟಿಸ್ (ಎನ್‌ಇಎಂ) ಮಾದರಿಯ ವೈರಸ್ ಆಗಿರುವ ನಿಪಾಹ್, ಹೆಂಡ್ರಾ ವೈರಾಣುವನ್ನೇ ಹೋಲುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದರು. ಅಂದೇ ವೈದ್ಯರು ಈ ವೈರಾಣು, ಹಂದಿ, ಕೋಳಿಯಂತಹ ಮಾಂಸಾಹಾರದಿಂದ ಈ ವೈರಾಣು ಹರಡಲ್ಪಡುತ್ತದೆ ಎಂದು ಶಂಕಿಸಿದ್ದರು.
ವೈರಸ್ ಹರಡುವುದು ಹೇಗೆ?
ಸಾಮಾನ್ಯವಾಗಿ ಈ ನಿಪಾಹ್ ವೈರಾಣುಗಳು, ಒಂದು ಬಗೆಯ ಬಾವಲಿಯಿಂದ (ಫ್ರೂಟ್ ಬ್ಯಾಟ್ಸ್) ಹರಡಬಹುದಾದ ವೈರಸ್ ಆಗಿದ್ದು, ಈ ವೈರಸ್ ಸೋಂಕು ತಗುಲಿರುವ ವ್ಯಕ್ತಿಯ ಸಂಪರ್ಕಕ್ಕೆ ಬೇರೆ ವ್ಯಕ್ತಿ ಬಂದರೆ ಅಂದರೆ, ಸೋಂಕಿನಿಂದ ಕೂಡಿದ ವ್ಯಕ್ತಿಯ ಜೊಲ್ಲು, ಎಂಜಲು, ಅಥವಾ ವಾಂತಿಯ ಸ್ಪರ್ಶವಾದರೆ ಈ ವೈರಾಣು ಬೇರೊಬ್ಬರಿಗೆ ಹರಡುತ್ತದೆ. ಅಂತೆಯೇ ಪ್ರಾಣಿ ಇಲ್ಲವೇ ಪಕ್ಷಿಗಳಿಂದಲೂ ಇದು ಹರಡುವ ಸಾಧ್ಯತೆ ಇದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ ಈ ನಿಪಾಹ್ ವೈರಾಣು ಮೂಲಸ್ಥಾನ ಪ್ಟೆರೋಪೋಡಿಡೇ ಬಾವಲಿ ಕುಟುಂಬ ಎನ್ನಲಾಗಿದೆ. ಈ ಜಾತಿಯ ಬಾವಲಿಗಳ ಮುಖಾಂತರ ಈ ಮಾರಕ ವೈರಾಣು ಹರಡುತ್ತಿದೆ. ಈ ಜಾತಿಯ ಬಾವಲಿಗಳು ತಿಂದು ಬಿಸಾಡಿದ ಅಥವಾ ಈ ಬಾವಲಿಗಳ ಜೊಲ್ಲು, ಮೂತ್ರ ಬಿದ್ದ ವಸ್ತುಗಳ ಸ್ಪರ್ಶವಾದರೆ ಈ ಸೋಂಕು ಹರಡುವ ಸಾಧ್ಯತೆ ಇದೆ.
ರೋಗ ಲಕ್ಷಣಗಳೇನು?
ನಿಪಾಹ್ ಸೋಂಕು ನಮ್ಮನ್ನು ಆವರಿಸಿದರೆ, ಮೊದಲಿಗೆ ಅದು ಮೆದುಳಿನ ಮೇಲೆ ತನ್ನ ದುಷ್ಪರಿಣಾಮ ಬೀರುತ್ತದೆ. ಆರಂಭಲ್ಲಿ ಮೆದುಳಿನ ನರಮಂಡಲದ ಮೇಲೆ ದಾಳಿ ಮಾಡುವ ವೈರಾಣು ಪತ್ತೆಯಾಗಲು 5 ರಿಂದ 14 ದಿನಗಳೇ ಬೇಕಾಗುತ್ತದೆ.
ಸಾಮಾನ್ಯ ಜ್ವರ, ವಿಪರೀತ ತಲೆನೋವು, ಅತಿಯಾದ ಆಯಾಸ, ಅತಿಯಾದ ನಿದ್ರಾಹೀನತೆ, ದಿಗ್ಭ್ರಮೆ ಮತ್ತು ಮಾನಸಿಕ ಗೊಂದಲ ಈ ಸೋಂಕಿನ ಲಕ್ಷಣಗಳಾಗಿವೆ. ಕೆಲ ಪ್ರಕರಣಗಳಲ್ಲಿ ಉಸಿರಾಟದ ತೊಂದರೆ ಕೂಡ ಕಾಣಿಸಿಕೊಂಡಿದೆ. ಈ ಸೋಂಕು ಎಷ್ಟು ಮಾರಕ ಎಂದರೆ, ಕೇವಲ 24 ರಿಂದ 48 ಗಂಟೆಗಳಲ್ಲೇ ಸೋಂಕು ಪೀಡಿತ ವ್ಯಕ್ತಿ ಕೋಮಾಗೆ ಜಾರುವ ಅಪಾಯವಿದೆ. ಅಲ್ಲದೆ ಸಾವು ಕೂಡ ಸಂಭವಿಸಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಕೋಯಿಕ್ಕಾಡ್ ಜಿಲ್ಲೆಯ ಬಾಲಕಿಗೆ ಈ ವೈರಸ್ ತಗುಲಿರುವುದು ಪತ್ತೆಯಾಗುತ್ತಿದ್ದಂತೆ ಕಣ್ಣೂರು ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲೂ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಬಾಲಕನ ಸಂಬಂಧಿಕರು, ಸ್ನೇಹಿತರು ಹಾಗೂ ಇನ್ನಿತರರನ್ನು ತಕ್ಷಣವೇ ಪರೀಕ್ಷೆಗೊಳಪಟ್ಟು, ಪ್ರತ್ಯೇಕವಾಗಿರಲು ಸೂಚಿಸಲಾಗಿದೆ. ಆರೋಗ್ಯ ಇಲಾಖೆಯ ವಿಶೇಷ ತಂಡ ಈ ಬಗ್ಗೆ ನಿಗಾವಹಿಸಿದ್ದು, ರೋಗ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಗುರುತಿಸಿ, ಚಿಕಿತ್ಸೆಗೊಳಪಡುವಂತೆ ನಿರ್ದೇಶನ ನೀಡಲಾಗಿದೆ. ಮೃತ ಬಾಲಕನ ಅಂತ್ಯಕ್ರಿಯೆಯನ್ನು ಮಾರ್ಗಸೂಚಿಯಂತೆ ಭಾನುವಾರವೇ ನೆರವೇರಿಸಲಾಗುತ್ತದೆ. 2018ರ ಮೇ 19ರಂದು ಕೇರಳದ ಇದೇ ಜಿಲ್ಲೆಯಲ್ಲಿ ಕಾಣಿಸಿಕೊಂಡ ನಿಫಾ ವೈರಸ್ 17 ಜನರನ್ನು ಬಲಿ ತೆಗೆದುಕೊಂಡಿತ್ತು. 2018ರ ಜೂನ್ 1ರಂತೆ 18 ಮಂದಿಗೆ ಮತ್ತೆ ಸೋಂಕು ದೃಢಪಟ್ಟಿತ್ತು.
ಕೇರಳದ ಗಡಿ ಭಾಗದಲ್ಲೂ ಎಚ್ಚರಿಕೆ;
ಈ ಹಿಂದೆ ಈ ವೈರಸ್ ಸೋಂಕು ಕಂಡು ಬಂದಾಗ ಕರ್ನಾಟಕದ ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಆರೋಗ್ಯ ಇಲಾಖೆ ತಿಳಿಸಿತ್ತು. ಸದ್ಯಕ್ಕೆ ಕೇರಳದ ಮೂರು ಜಿಲ್ಲೆಗಳಲ್ಲಿ ಮಾತ್ರ ಎಚ್ಚರಿಕೆ ಗಂಟೆ ಬಾರಿಸಲಾಗಿದೆ.
A 12-year-old boy, who was admitted to a hospital in Kerala’s Kozhikode with symptoms of the Nipah virus, passed away on Sunday morning. The boy, who hailed from Choolur in Chathamangalam panchayat, was admitted to the hospital on September 1. His samples, which were sent to the Pune National Institute of Virology, confirmed the presence of the Nipah virus. Seventeen persons on his contact list have been placed under observation and will be subjected to testing.
26-11-24 06:56 pm
Bangalore Correspondent
MLA Gaviyappa, Congress: ಗ್ಯಾರಂಟಿ ಸ್ಕೀಂನಿಂದಾಗ...
26-11-24 06:11 pm
Davanagere News, Heart Attack: ಗಂಡ ಹೃದಯಾಘಾತಕ್...
26-11-24 11:52 am
ಜೆಡಿಎಸ್ ನಲ್ಲಿ ಭವಿಷ್ಯ ಇಲ್ಲ, ದೇವೇಗೌಡರಿಗೆ ಜನ ಗೌರ...
25-11-24 05:51 pm
ಮನೆಯೊಂದು ಮೂರು ಬಾಗಿಲು, ಗೆಲುವು ಕಸಿದ ಬಿಜೆಪಿ ಒಳಜಗ...
25-11-24 03:28 pm
26-11-24 09:43 pm
HK News Desk
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
ಬಿಜೆಪಿ ‘ಗ್ಯಾರಂಟಿ’ಗೆ ಕೈಹಿಡಿಯದ ಜಾರ್ಖಂಡ್ ಮತದಾರ,...
23-11-24 05:34 pm
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
26-11-24 08:23 pm
Udupi Correspondent
Mangalore, Police Anupam Agarwal IPS, DYFI; ಸ...
26-11-24 05:37 pm
Mangalore Astra Group, lucky draw: ಕಾರು, ಫ್ಲಾ...
25-11-24 11:14 pm
Vithoba Rukumai temple case, Mangalore: ವಿಠೋಬ...
25-11-24 10:39 pm
Ullal Dargah, Mangalore: ಎಪ್ರಿಲ್ 24 ರಿಂದ ಮೇ...
25-11-24 02:44 pm
26-11-24 03:10 pm
Mangalore Correspondent
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm
Rowdy sheeter Dawood, Mangalore Crime, Police...
23-11-24 10:49 am
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm