ಇರಾಕ್‌ನಲ್ಲಿ ಇಸ್ಲಾಮಿಕ್‌ ಸ್ಟೇಟ್‌ ಜಿಹಾದಿಗಳ ದಾಳಿ: 13 ಪೊಲೀಸ್‌ ಅಧಿಕಾರಿಗಳ ಬಲಿ

05-09-21 04:52 pm       Headline Karnataka News Network   ದೇಶ - ವಿದೇಶ

ಇರಾಕ್‌ನ ಕಿರ್‌ಕುಕ್‌ನ ಬಳಿಯಿರುವ ಚೆಕ್‌ಪಾಯಿಂಟ್‌ನಲ್ಲಿ ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಸಂಘಟನೆ ಭಾನುವಾರ ಮುಂಜಾನೆ ದಾಳಿ ನಡೆಸಿದ್ದು, ಇದರಲ್ಲಿ 13 ಮಂದಿ ಪೊಲೀಸ್‌ ಅಧಿಕಾರಿಗಳು ಮೃತಪಟ್ಟಿದ್ದಾರೆ.

ಇರಾಕ್‌ ಸೆ. 5: ಇರಾಕ್‌ನ ಕಿರ್‌ಕುಕ್‌ನ ಬಳಿಯಿರುವ ಚೆಕ್‌ಪಾಯಿಂಟ್‌ನಲ್ಲಿ ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಸಂಘಟನೆ ಭಾನುವಾರ ಮುಂಜಾನೆ ದಾಳಿ ನಡೆಸಿದ್ದು, ಇದರಲ್ಲಿ 13 ಮಂದಿ ಪೊಲೀಸ್‌ ಅಧಿಕಾರಿಗಳು ಮೃತಪಟ್ಟಿದ್ದಾರೆ.

ಫೆಡರಲ್‌ ಪೊಲೀಸ್‌ ಚೆಕ್‌ ಪಾಯಿಂಟ್‌ ಅನ್ನು ಗುರಿಯಾಗಿಸಿಕೊಂಡು ಇಸ್ಲಾಮಿಕ್‌ ಸ್ಟೇಟ್‌ನ ಉಗ್ರರು ದಾಳಿ ನಡೆಸಿದ್ದಾರೆ. ಆದರೆ, ಈ ದಾಳಿಯ ಹೊಣೆಯನ್ನು ಯಾವ ಸಂಘಟನೆಯೂ ಹೊತ್ತಿಲ್ಲ ಎಂದು ಪೊಲೀಸ್ ಉನ್ನತಾಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

ಈ ಪ್ರದೇಶದಲ್ಲಿ ಇರಾಕ್‌ ಸೇನೆ ಮತ್ತು ‍ಪೊಲೀಸರನ್ನು ಗುರಿಯಾಗಿಸಿಕೊಂಡು ಹಲವು ಬಾರಿ ಇಸ್ಲಾಮಿಕ್‌ ಸ್ಟೇಟ್‌ನ ಉಗ್ರರು ದಾಳಿ ನಡೆಸಿದ್ದಾರೆ. ಇದು ಈ ವರ್ಷದ ಅತ್ಯಂತ ಮಾರಣಾಂತಿಕ ದಾಳಿಯಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಎಎಫ್‌ಪಿಗೆ ಮಾಹಿತಿ ನೀಡಿದರು.

A terrorist attack attributed to the Daesh terrorist group left 13 federal police officers dead in the countryside of the northern Iraqi province of Kirkuk, security officals said Sunday.