ಬ್ರೇಕಿಂಗ್ ನ್ಯೂಸ್
08-09-20 01:36 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 8: ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಸತ್ತು ಹೋಗಿದೆ. ಅದಿನ್ನು ಈ ದೇಶಕ್ಕೆ ಪರ್ಯಾಯ ಆಗಲಾರದು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ , ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.
ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಅರವಿಂದ್ ಕೇಜ್ರಿವಾಲ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿದ್ದ ರಾಜ್ಯಗಳಲ್ಲಿ ಅದರ ಶಾಸಕರು ಬೇರೆ ಪಕ್ಷಕ್ಕೆ ಮಾರಾಟ ಆಗಿದ್ದಾರೆ. ಅಧಿಕಾರವನ್ನೂ ಕಳಕೊಂಡಿದ್ದಾರೆ. ಗೋವಾ, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಈಗ ರಾಜಸ್ಥಾನದಲ್ಲಿಯೂ ಅದೇ ಸ್ಥಿತಿ ಇದೆ. ಕಾಂಗ್ರೆಸ್ ಎಂಎಲ್ ಏ ಗಳು ಮಾರಾಟ ಆಗುತ್ತಿದ್ದಾರೆ. ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ಸತ್ತು ಹೋಗಿದೆ, ಭವಿಷ್ಯದಲ್ಲಿ ಬಿಜೆಪಿಗೆ ಪರ್ಯಾಯ ಆಗಿ ನಿಲ್ಲಲಾರದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ರಾಷ್ಟ್ರೀಯ ಪಕ್ಷವೊಂದು ಅಧ್ಯಕ್ಷರಿಲ್ಲದೆ ಹೆಣಗಾಟದಲ್ಲಿದ್ದರೆ, ಅದರ ನಾಯಕರು ಆಂತರಿಕ ಕಚ್ಚಾಟದಲ್ಲಿ ಇದ್ದಾರೆ. ಜನರು ಪಕ್ಷದ ಮೇಲೆ ನಂಬಿಕೆ ಕಳಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ಪಕ್ಷಕ್ಕೆ ಒಬ್ಬರನ್ನು ಅಧ್ಯಕ್ಷರ ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗದವರು ದೇಶದ ಬಗ್ಗೆ ಯಾವ ರೀತಿಯ ಕನಸು ಇಟ್ಟುಕೊಳ್ಳಲು ಸಾಧ್ಯ. 2024ರ ಲೋಕಸಭೆ ಚುನಾವಣೆಗೆ ಇನ್ನೂ ಸಮಯ ಇದೆ. ಆ ಸಂದರ್ಭದಲ್ಲಿ ದೇಶದ ಜನರು ಪರ್ಯಾಯ ಒಂದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದನಿಸುತ್ತಿದೆ ಎಂದಿದ್ದಾರೆ ಕೇಜ್ರಿವಾಲ್.
ಕಾಂಗ್ರೆಸ್ ಜಾಗವನ್ನು ಆಪ್ ತುಂಬಲಿದೆಯೇ ಎಂಬ ಪ್ರಶ್ನೆಗೆ ಆಪ್ ಬಗ್ಗೆ ದೇಶದ ಜನ ಪ್ರೀತಿ ಹೊಂದಿದ್ದಾರೆ. ಹಾಗಂತ, ಆಪ್ ಪಕ್ಷ ಕಾಂಗ್ರೆಸಿಗೆ ಪರ್ಯಾಯ ಆಗಬಹುದು ಎಂಬುದನ್ನು ಈಗಲೇ ಹೇಳುವುದಕ್ಕೆ ಬರಲ್ಲ. ನಮ್ಮ ಸಂಘಟನೆ ತುಂಬ ಚಿಕ್ಕದು. ಆದರೆ ದೇಶದ ಜನ ಆಪ್ ಪಕ್ಷವನ್ನು ಗೌರವಿಸುತ್ತಾರೆ. ಉತ್ತಮ ಆಡಳಿತದಿಂದಾಗಿ ಜನರ ಮನಗೆಲ್ಲುತ್ತೇವೆ. ಆರೋಗ್ಯ, ಶಿಕ್ಷಣ ಹೀಗೆ ಬೇರೆ ಬೇರೆ ವಿಚಾರದಲ್ಲಿ ಆಪ್ ಪಕ್ಷದ ಸಾಧನೆಯನ್ನು ಜನ ಗಮನಿಸುತ್ತಾರೆ. ಖಾಲಿ ಜಾಗವನ್ನು ಆಪ್ ತುಂಬಬಲ್ಲದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕು ಎಂದಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm