ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ

11-09-21 03:56 pm       Headline Karnataka News Network   ದೇಶ - ವಿದೇಶ

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಾಂಧಿನಗರಕ್ಕೆ ಬಂದಿದ್ದು, ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ ಎನ್ನಲಾಗಿದೆ.

ಅಹಮದಾಬಾದ್, ಸೆ. 11: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಾಂಧಿನಗರಕ್ಕೆ ಬಂದಿದ್ದು, ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ ಎನ್ನಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ರಾಜೀನಾಮೆ ನಂತರ ಹೇಳಿಕೆ ನೀಡಿರುವ ವಿಜಯ್ ರೂಪಾನಿ, ನಮ್ಮ ಪಕ್ಷದಲ್ಲಿ ಕಾಲಕ್ಕೆ ತಕ್ಕಂತೆ ಮುಖ್ಯಮಂತ್ರಿ ಬದಲಾವಣೆ ಮಾಡುವ ಸಂಸ್ಕೃತಿ ಇದೆ. ಹೀಗಾಗಿ ರಾಜೀನಾಮೆ ನೀಡಿದ್ದೇನೆ . ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದಿದ್ದಾರೆ.



ಐದು ವರ್ಷ ಮುಖ್ಯಮಂತ್ರಿ ಆಗಿದ್ದ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ. ಮುಂದಿನ ವರ್ಷವೇ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಜಯ್ ರೂಪಾನಿ ನಡೆ ಆಶ್ಚರ್ಯ ಮೂಡಿಸಿದೆ. ಬಿ.ಎಲ್.ಸಂತೋಷ್​ ಗುಜರಾತ್​​ನ ರಾಜಭವನದಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವಿಜಯ್ ರೂಪಾನಿ ಅವರು ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ರಾಜೀನಾಮೆ ಬಳಿಕ ಪ್ರತಿಕ್ರಿಯೆ ನೀಡಿದ್ದು, ಈವರೆಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸುವೆ. ಮುಂದೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ನಿರ್ವಹಿಸುವುದಾಗಿ ಹೇಳಿದ್ದಾರೆ.



2016ರ ಆಗಸ್ಟ್ 7 ರಂದು ಗುಜರಾತ್ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಪ್ರಮಾಣವಚನ ಸ್ವೀಕರಿಸಿದ್ದರು. ಐದು ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು, ಇದೀಗ ಅವರು ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

In an unexpected political development, Gujart chief minister Vijay Rupani on Saturday submitted his resignation to governor Acharya Devvrat at Raj Bhavan.