ಬ್ರೇಕಿಂಗ್ ನ್ಯೂಸ್
12-09-21 10:18 pm Headline Karnataka News Network ದೇಶ - ವಿದೇಶ
ಅಹ್ಮದಾಬಾದ್, ಸೆ.12 : ಗುಜರಾತ್ ನೂತನ ಸಿಎಂ ಸ್ಥಾನಕ್ಕೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.
ಭಾನುವಾರ ಗುಜರಾತ್ ಸಿಎಂ ವಿಜಯ್ ರೂಪಾನಿ ಅವರು ದಿಢೀರ್ ಆಗಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅವರ ಸ್ಥಾನಕ್ಕೆ ಯಾರ ಬರಲಿದ್ದಾರೆ ಎಂಬ ಬಗ್ಗೆ ಭಾರೀ ಕುತೂಹಲ ಎದ್ದಿತ್ತು. ಉಪ ಮುಖ್ಯಮಂತ್ರಿ ನಿತಿನ್ ಪಟೇಲ್, ಮಾಜಿ ಸಚಿವ ಗೋರ್ಧಾನ್ ಝದಾಫಿಯಾ, ಲಕ್ಷದ್ವೀಪ, ದಾದರ್, ನಗರ ಹವೇಲಿಯ ಆಡಳಿತಾಧಿಕಾರಿ ಆಗಿರುವ ಪ್ರಫುಲ್ ಪಟೇಲ್ ಹೆಸರು ಭಾರೀ ರೇಸಿನಲ್ಲಿತ್ತು. ಇದಲ್ಲದೆ, ಗುಜರಾತ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್.ಪಾಟೀಲ್, ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ ಹೆಸರು ಕೂಡ ಚಾಲ್ತಿಯಲ್ಲಿತ್ತು.
ಆದರೆ, ಸಿಎಂ ಗಾದಿಯ ರೇಸಿನಲ್ಲಿದ್ದ ಎಲ್ಲರ ಹೆಸರನ್ನೂ ಹಿಂದಿಕ್ಕಿ ಭೂಪೇಂದ್ರ ಪಟೇಲ್ ಇಂದು ನಡೆದ ಸಭೆಯಲ್ಲಿ ಶಾಸಕಾಂಗ ಸಭೆಯಲ್ಲಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಭೂಪೇಂದ್ರ ಪಟೇಲ್ ಘಾಟ್ಲೋಡಿಯಾ ವಿಧಾನಸಭೆ ಕ್ಷೇತ್ರದಲ್ಲಿ ಮೊದಲ ಬಾರಿಗೆ 2017ರಲ್ಲಿ ಶಾಸಕರಾಗಿದ್ದರು. ಅದಕ್ಕೂ ಮುನ್ನ ಅಹ್ಮದಾಬಾದ್ ಮಹಾನಗರ ಪಾಲಿಕೆಯಲ್ಲಿ ಸದಸ್ಯರಾಗಿದ್ದಲ್ಲದೆ, ಅಹ್ಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದರು. ಶಾಸಕಾಂಗ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ ಹಾಗೂ ನರೇಂದ್ರ ಸಿಂಗ್ ತೋಮರ್ ಗಾಂಧಿನಗರಕ್ಕೆ ಬಂದಿದ್ದರು.
ಇಂಜಿನಿಯರಿಂಗ್ ಪದವೀಧರನಾಗಿರುವ ಪಟೇಲ್, ಗುಜರಾತಿನಲ್ಲಿ ಪ್ರಬಲವಾಗಿರುವ ಪಾಟೀದಾರ್ ಸಮುದಾಯಕ್ಕೆ ಸೇರಿದವರು. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಆಪ್ತರು ಎನ್ನಲಾಗುತ್ತಿದ್ದು, ಇದೇ ಕಾರಣದಿಂದ ಮೊದಲ ಬಾರಿಗೆ ಶಾಸಕರಾಗಿರುವ ಭೂಪೇಂದ್ರ ಪಟೇಲ್ ಚುನಾವಣೆ ಕಾಲದಲ್ಲಿ ಸಿಎಂ ಸ್ಥಾನಕ್ಕೆ ಏರಿದ್ದಾರೆ. ಸೋಮವಾರ ಮಧ್ಯಾಹ್ನ 2.30ಕ್ಕೆ ಪಟೇಲ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
The BJP on Sunday named first-time MLA Bhupendra Patel as the next chief minister of Gujarat, a day after Vijay Rupani stepped down from the post.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm