ಬ್ರೇಕಿಂಗ್ ನ್ಯೂಸ್
18-09-21 03:31 pm Headline Karnataka News Network ದೇಶ - ವಿದೇಶ
ನವ ದೆಹಲಿ, ಸೆ 18 : ರೈತ ಹೋರಾಟದ ಒಕ್ಕೂಟವಾಗಿರುವ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 27 ಕ್ಕೆ "ಭಾರತ ಬಂದ್"ಗೆ ಕರೆ ನೀಡಿದೆ. ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೇಶದಾದ್ಯಂತ ಹೋರಾಟ ನಡೆಸುತ್ತಿದ್ದಾರೆ. ಆದರೆ, ರೈತ ಹೋರಾಟ ಆರಂಭವಾಗಿ ಒಂದು ವರ್ಷವೇ ಮುಗಿದರೂ ಸಹ ಕೇಂದ್ರ ಸರ್ಕಾರ ಮಾತ್ರ ರೈತರ ಕೋರಿಕೆಗೆ ಬಗ್ಗುವ ಹಾಗೆ ಕಾಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇದಕ್ಕಾಗಿ ಒಕ್ಕೂಟವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಬಂದ್ ಶಾಂತಿಯುತವಾಗಿರುತ್ತದೆ ಮತ್ತು ಜನರು ಯಾವುದೇ ಅನಾನುಕೂಲತೆಯನ್ನು ಅನುಭವಿಸದಂತೆ ರೈತರು ನೋಡಿಕೊಳ್ಳುತ್ತಾರೆ ಎಂದು ಹೇಳಿದೆ.
"ಎಸ್ಕೆಎಂ ಎಲ್ಲಾ ಸಂಘಟನೆಗಳಿಗೆ ರೈತರೊಂದಿಗೆ ಕೈಜೋಡಿಸುವಂತೆ ಕೇಳಿಕೊಂಡಿದೆ. ಜೊತೆಗೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಮುಂಚಿತವಾಗಿಯೆ ‘ಭಾರತ ಬಂದ್’ ಅನ್ನು ಪ್ರಚಾರ ಮಾಡುವಂತೆ ಮನವಿ ಮಾಡಿದೆ. ಬಂದ್ ಶಾಂತಿಯುತವಾಗಿರುತ್ತದೆ ಹಾಗೂ ಸ್ವಯಂಪ್ರೇರಿತವಾಗಿರುತ್ತದೆ. ತುರ್ತು ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ" ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ."ಒಕ್ಕೂಟ ಸರ್ಕಾರದ ರಾಜ್ಯ ಕಚೇರಿಗಳು, ಮಾರುಕಟ್ಟೆಗಳು, ಅಂಗಡಿಗಳು, ಕಾರ್ಖಾನೆಗಳು, ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಅಂದು ಬಂದ್ ಆಗಲಿದೆ. ಬಂದ್ ಬೆಳಿಗ್ಗೆ 6 ಗಂಟೆಯಿಂದ ಆರಂಭವಾಗಿ ಸಂಜೆ 4 ಗಂಟೆಯವರೆಗೆ ಜಾರಿಯಲ್ಲಿರುತ್ತದೆ" ಎಂದು ಎಸ್ಕೆಎಂ ಶುಕ್ರವಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಸಾರ್ವಜನಿಕ ಮತ್ತು ಖಾಸಗಿ ಸಾರಿಗೆ ಕೂಡಾ ಬಂದ್ ಆಗಲಿದೆ ಎಂದು ಎಸ್ಕೆಎಂ ಹೇಳಿದ್ದು, ಆಂಬುಲೆನ್ಸ್ ಮತ್ತು ಅಗ್ನಿಶಾಮಕ ಸೇವೆಗಳು ಸೇರಿದಂತೆ ತುರ್ತು ಸೇವೆಗಳು ಮಾತ್ರ ಬಂದ್ ಸಮಯದಲ್ಲಿ ಕಾರ್ಯನಿರ್ವಸಲಿದೆ ಎಂದು ಅದು ತಿಳಿಸಿದೆ.
ಬಂದ್ಗೆ ಸಂಬಂಧಿಸಿದಂತೆ ಮುಂದಿನ ಯೋಜನೆಗಾಗಿ ಸೆಪ್ಟೆಂಬರ್ 20 ರಂದು ಮುಂಬೈನಲ್ಲಿ "ರಾಜ್ಯ ಮಟ್ಟದ ಪೂರ್ವಸಿದ್ಧತಾ ಸಭೆ" ನಡೆಯಲಿದೆ ಎಂದು ಎಸ್ಕೆಎಂ ಹೇಳಿದೆ.ಅದೇ ದಿನ ಉತ್ತರ ಪ್ರದೇಶದ ಸೀತಾಪುರದಲ್ಲಿ ‘ಕಿಸಾನ್ ಮಜ್ದೂರ್ ಮಹಾಪಂಚಾಯತ್’ ಆಯೋಜಿಸಲಾಗುವುದು ಮತ್ತು ಅದರ ನಂತರ ಸೆಪ್ಟೆಂಬರ್ 22 ರಂದು ಉತ್ತರಾಖಂಡದ ರೂರ್ಕಿಯಲ್ಲಿ ‘ಕಿಸಾನ್ ಮಹಾಪಂಚಾಯತ್’ ನಡೆಯಲಿದೆ.
ಪ್ರತಿಭಟನಾ ನಿರತ ರೈತರು ಸೆಪ್ಟೆಂಬರ್ 22 ರಿಂದ ಟಿಕ್ರಿ ಮತ್ತು ಸಿಂಘು ಗಡಿಯ ಪ್ರತಿಭಟನಾ ಸ್ಥಳಗಳಲ್ಲಿ ಐದು ದಿನಗಳ ಕಬಡ್ಡಿ ಲೀಗ್ ಅನ್ನು ಆಯೋಜಿಸಲಿದೆ. ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ. ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಕಳೆದ ಒಂದು ವರ್ಷದಿಂದ ದೆಹಲಿಯ ಗಡಿಗಲು ಸೇರಿದಂತೆ ದೇಶದ ಇತರ ಭಾಗಗಳಲ್ಲೂ ಹೋರಾಟ ಮಾಡುತ್ತಿದ್ದಾರೆ.ರೈತರ ಒಕ್ಕೂಟ ಸರ್ಕಾರದೊಂದಿಗೆ 10 ಕ್ಕೂ ಹೆಚ್ಚು ಬಾರಿ ಮಾತುಕತೆ ನಡೆಸಿದ್ದು, ಯಾವುದು ಸಫಲವಾಗಿಲ್ಲ. ಕೃಷಿ ಕಾನೂನನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ ವಾಪಾಸು ಪಡೆಯುವುದಿಲ್ಲ ಎಂದು ರೈತ ಸಂಘಟನೆಗಳು ಹೇಳಿವೆ.
The Samyukt Kisan Morcha (SKM) has issued guidelines for the September 27 Bharat Bandh against the Centre's three farm laws and said it would be peaceful and farmers will ensure that people do not face any inconvenience. "The SKM has asked constituent organisations to appeal to all sections of society to join hands with farmers and publicise the bandh beforehand so that inconvenience to the public may be reduced. The bandh will be peaceful as well as voluntary and would exempt emergency services,” it said in the statement, according to news agency PTI.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm