ಬ್ರೇಕಿಂಗ್ ನ್ಯೂಸ್
18-09-21 05:25 pm Headline Karnataka News Network ದೇಶ - ವಿದೇಶ
ಚಂಡೀಗಢ, ಸೆ.18 : ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕಡೆಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಜೊತೆಗಿನ ವೈಮನಸ್ಸು, ಗುದ್ದಾಟದ ಬಳಿಕ ಅಮರಿಂದರ್ ಸಿಂಗ್ ಇಂದು ರಾಜ್ಯಪಾಲ ಭನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನ ಅಮರಿಂದರ್ ಸಿಂಗ್ ಪುತ್ರ ರಣೀಂದರ್ ಸಿಂಗ್, ತಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವ ಬಗ್ಗೆ ಸುಳಿವು ನೀಡಿದ್ದರು. ಅದರ ಬೆನ್ನಲ್ಲೇ ಅಮರಿಂದರ್ ಸಿಂಗ್ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ಈ ರೀತಿಯ ಕಿರುಕುಳ, ಜಂಜಾಟದ ಮಧ್ಯೆ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಕಾಂಗ್ರೆಸ್ ಉತ್ತಮ ವ್ಯಕ್ತಿಯನ್ನು ಆಯ್ದುಕೊಳ್ಳಲಿ ಎನ್ನುವ ಮೂಲಕ ತಮ್ಮ ಸ್ಥಾನ ಬಿಟ್ಟು ಕೊಡುವ ಬಗ್ಗೆ ಅಮರಿಂದರ್ ಸಿಂಗ್ ಸುಳಿವು ನೀಡಿದ್ದರು. ಕಾಂಗ್ರೆಸ್ ಕೇಂದ್ರೀಯ ಘಟದ ಮನೀಶ್ ತಿವಾರಿ, ಕಮಲನಾಥ್ ಮತ್ತಿತರ ನಾಯಕರಿಗೂ ಈ ಬಗ್ಗೆ ಹೇಳಿದ್ದರು.
ಇದೇ ವೇಳೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಪಕ್ಷದ ಕೇಂದ್ರೀಯ ನಾಯಕರನ್ನು ಭೇಟಿಯಾಗಿದ್ದು, ಸಿಎಂ ಬದಲಾವಣೆಗಾಗಿ ಒತ್ತಡ ಹೇರಿದ್ದರು. ಇದೇ ವೇಳೆ, ಪಂಜಾಜ್ ಘಟಕದ ಬಿಜೆಪಿ ನಾಯಕರು ಅಮರಿಂದರ್ ಸಿಂಗ್ ಅವರನ್ನು ಸಂಪರ್ಕಿಸಿದ್ದು, ಬಿಜೆಪಿಗೆ ಬರುವಂತೆ ಆಹ್ವಾನ ನೀಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕಾಂಗ್ರೆಸ್ ಬಳಿಕ ಬಿಜೆಪಿಯಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.
Hours after he was asked to step down as the Chief Minister of Punjab, Captain Amarinder Singh on Saturday resigned from the post. He met the Governor at Raj Bhavan and handed him his resignation letter, Amarinder’s son Ravinder Singh tweeted.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm