ಬ್ರೇಕಿಂಗ್ ನ್ಯೂಸ್
21-09-21 05:28 pm Headline Karnataka News Network ದೇಶ - ವಿದೇಶ
ಶ್ರೀನಗರ, ಸೆ. 21: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಮಂಗಳವಾರ ಹೆಲಿಕಾಪ್ಟರ್ ಒಂದು ಪತನವಾಗಿದ್ದು, ಇಬ್ಬರು ಸೇನಾ ಪೈಲಟ್‌ಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಈ ಹಿಂದೆ ಮಾಹಿತಿ ನೀಡಿದ್ದರು. ಈ ಘಟನೆಯಲ್ಲಿ ಇಬ್ಬರು ಸೇನಾ ಪೈಲಟ್‌ಗಳು ಗಾಯಗೊಂಡಿದ್ದಾರೆ ಎಂದು ಕೂಡಾ ವರದಿಯಾಗಿತ್ತು. ಈಗ ಆ ಸೇನಾ ಪೈಲಟ್‌ಗಳು ಸಾವನ್ನಪ್ಪಿದ್ದಾರೆ ಎಂದು ವರದಿಯು ತಿಳಿಸಿದೆ.
"ಸೇನಾ ಹೆಲಿಕಾಪ್ಟರ್ ಪತನವಾದ ಸಂದರ್ಭದಲ್ಲಿ ಇಬ್ಬರು ಪೈಲಟ್‌ಗಳು ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಈ ಇಬ್ಬರು ಪೈಲಟ್‌ಗಳನ್ನು ರಕ್ಷಣೆ ಮಾಡಿದರು. ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ಸಂದರ್ಭದಲ್ಲಿ ವೈದ್ಯರು ಪೈಲಟ್‌ಗಳಿಬ್ಬರು ಸಾವನ್ನಪ್ಪಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ," ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



ಪತನವಾಗಿ ಧ್ವಂಸವಾಗಿರುವ ಹೆಲಿಕಾಪ್ಟರ್ ಕಣಿವೆ ಬದಿ ಬಿದ್ದಿರುವ ಹಾಗೂ ಸ್ಥಳೀಯರು ಪೈಲಟ್‌ಗಳನ್ನು ಹೊರಗೆ ಎಳೆಯುವ ಪ್ರಯತ್ನವನ್ನು ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದಿದೆ. ಈ ಘಟನೆಯು ಇಂದು ಬೆಳಿಗ್ಗೆ ಸುಮಾರು 10:30 ಗಂಟೆಗೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, "ಹೆಲಿಕಾಪ್ಟರ್ ಪತನದ ಸುದ್ದಿ ಕೇಳಿ ಆಘಾತ ಉಂಟಾಗಿದೆ," ಎಂದು ಹೇಳಿದ್ದಾರೆ.
ಇನ್ನು ಹೆಲಿಕಾಪ್ಟರ್ ಅನ್ನು ಗುಡ್ಡದ ಮೇಲೆ ಇಳಿಸುವಾಗ ತೊಂದರೆ ಉಂಟಾಗಿದೆ ಎಂದು ಕೂಡಾ ಹೇಳಲಾಗುತ್ತಿದೆ. ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಕತುವಾದ ರಂಜಿತ್ ಸಾಗರ್ ಡ್ಯಾಮ್ ಸಹೋವರದಲ್ಲಿ ಹೆಲಿಕಾಪ್ಟರ್ ಪತನವಾಗಿತ್ತು. ಪೈಲಟ್ ನಾಪತ್ತೆಯಾಗಿದ್ದರು. ಈ ಹಿನ್ನೆಲೆ ಪತ್ತೆ ಕಾರ್ಯಾಚರಣೆ ನಡೆಸಲಾಗಿತ್ತು.
Two pilots succumbed to their injuries after a helicopter of the Indian Army force-landed near Patnitop in Udhampur of Jammu and Kashmir on Tuesday. The pilots had been evacuated and rushed to a treatment facility, an army spokesperson said, adding further details were being ascertained.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm