ಬ್ರೇಕಿಂಗ್ ನ್ಯೂಸ್
27-09-21 12:33 pm Headline Karnataka News Network ದೇಶ - ವಿದೇಶ
ಜೈಪುರ್, ಸೆ.27: ಶಿಕ್ಷಕರ ಅರ್ಹತಾ ಪರೀಕ್ಷೆ ನೆಪದಲ್ಲಿ ರಾಜ್ಯಾದ್ಯಂತ ಸೆ.26ರಂದು ಒಂದು ದಿನ ಇಂಟರ್ನೆಟ್ ಸ್ಥಗಿತಗೊಳಿಸಿದ ಪ್ರಸಂಗ ರಾಜಸ್ಥಾನದಲ್ಲಿ ನಡೆದಿದ್ದು ವ್ಯಾಪಾರ, ವಹಿವಾಟು ಸೇರಿದಂತೆ ಬಹುತೇಕ ಸಂವಹನ ವ್ಯವಸ್ಥೆಗೆ ಧಕ್ಕೆಯಾಗಿದೆ. ರಾಜ್ಯದಲ್ಲಿ ವ್ಯಾಪಾರ ವಹಿವಾಟಿನ ಮೇಲೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ.
ರಾಜಸ್ಥಾನದಲ್ಲಿ ರೀಟ್ ಅರ್ಹತಾ ಪರೀಕ್ಷೆ ನಡೆಸಲಾಗಿದ್ದು, 16 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಇದರ ಸಲುವಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ, ಫೇಕ್ ಸುದ್ದಿ ಹರಡುತ್ತದೆ ಮತ್ತು ಪೇಪರ್ ಲೀಕ್ ಬಗ್ಗೆ ವದಂತಿ ಹರಡುತ್ತದೆ ಎನ್ನುವ ನೆಪವೊಡ್ಡಿ ರಾಜ್ಯ ಸರಕಾರ ರಾಜ್ಯಾದ್ಯಂತ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿತ್ತು. ರಾಜ್ಯದ 4019 ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳಿದ್ದವು. ಇದರಿಂದಾಗಿ ಅಭ್ಯರ್ಥಿಗಳು ಎಲ್ಲ ಕಡೆ ತೆರಳಬೇಕಾಗುತ್ತದೆ, ಇದರಿಂದ ಸಮಸ್ಯೆ ಸೃಷ್ಟಿಯಾಗುತ್ತದೆ ಎನ್ನುವ ನೆಪದಲ್ಲಿ ಮೊಬೈಲ್ ಸೇರಿದಂತೆ ಬ್ರಾಡ್ ಬ್ಯಾಂಡ್ ಸೇವೆಯನ್ನೂ ರದ್ದುಗೊಳಿಸಲಾಗಿತ್ತು.

ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ತುರ್ತು ಕ್ರಮ ಎಂಬ 2017ರ ಕೇಂದ್ರ ಸರಕಾರದ ಮಾರ್ಗಸೂಚಿ ಅನುಸರಿಸಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯವರು ಆಯಾ ಜಿಲ್ಲಾಧಿಕಾರಿಗಳಿಗೆ ಇಂಟರ್ನೆಟ್ ಸ್ಥಗಿತಗೊಳಿಸಲು ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದರು. ಹೀಗಾಗಿ ಪರೀಕ್ಷಾ ಕೇಂದ್ರಗಳಿದ್ದ ಬಹುತೇಕ ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂಟರ್ನೆಟ್ ಸೇವೆ ರದ್ದುಗೊಳಿಸಲಾಗಿತ್ತು. ಇದರಿಂದಾಗಿ ಸರಕಾರಿ ಸೇವೆಯಲ್ಲಿದ್ದವರು ಸೇರಿದಂತೆ ಅಧಿಕಾರಿ ವರ್ಗ, ಖಾಸಗಿ ಸಂಸ್ಥೆಗಳ ಉದ್ಯೋಗಿಗಳು, ವ್ಯಾಪಾರ, ವಹಿವಾಟುದಾರರಿಗೂ ಭಾರೀ ಸಂಕಷ್ಟ ಎದುರಾಗಿತ್ತು.
2ಜಿ, 3ಜ, 4ಜಿ ಮೊಬೈಲ್ ಡಾಟಾ, ಇಂಟರ್ನೆಟ್ ಆಧರಿತ ಸೇವೆಗಳು, ಬಲ್ಕ್ ಎಸ್ಎಂಎಸ್, ವಾಟ್ಸಪ್, ಫೇಸ್ಬುಕ್, ಟ್ವಿಟರ್ ಸೇರಿದಂತೆ ಎಲ್ಲ ರೀತಿಯ ಸಾಮಾಜಿಕ ಜಾಲತಾಣಗಳಿಗೆ ಬ್ರೇಕ್ ಹಾಕಲಾಗಿತ್ತು. ಬೆಳಗ್ಗಿನಿಂದ ಸಂಜೆಯ ವರೆಗೆ ಕೆಲವೆಡೆ 10 ಗಂಟೆ, ಇನ್ನು ಕೆಲವೆಡೆ 12 ಗಂಟೆಗಳ ಕಾಲ ಇಂಟರ್ನೆಟ್ ಸೇವೆ ರದ್ದಾಗಿತ್ತು. ಜೈಪುರ ನಗರ ಒಂದರಲ್ಲೇ 80ರಿಂದ 90 ಸಾವಿರ ವ್ಯಾಪಾರ ಸಂಸ್ಥೆಗಳು ಬಂದ್ ಆಗಿದ್ದವು. ಇದರಿಂದಾಗಿ ಅಂದಾಜು ನೂರು ಕೋಟಿ ನಷ್ಟ ಆಗಬಹುದು ಎಂದು ಅಲ್ಲಿನ ವ್ಯಾಪಾರಿ ಸಂಘದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರದ ಈ ಕ್ರಮದ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು.
A teachers’ entrance examination held on Sunday saw an unprecedented shutdown of internet services and businesses across Rajasthan on the orders of the administration.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm