ಬ್ರೇಕಿಂಗ್ ನ್ಯೂಸ್
10-09-20 03:37 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 10: ಇತ್ತೀಚೆಗೆ ಫ್ರಾನ್ಸ್ ನಿಂದ ಆಮದು ಮಾಡಿಕೊಂಡ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಫೈಟರ್ ಜೆಟ್ ರಫೇಲ್ ಗುರುವಾರ ಅಧಿಕೃತವಾಗಿ ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಿದೆ.
ಹರಿಯಾಣದ ಅಂಬಾಲಾ ವಾಯುನೆಲೆಯಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಫ್ರಾನ್ಸ್ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲಿ ಹಾಗೂ ಸೇನೆಯ ಹಿರಿಯ ಅಧಿಕಾರಿಗಳು ಸಾಕ್ಷಿಯಾದರು. ರಫೇಲ್ ಸೇರ್ಪಡೆಗೂ ಮುನ್ನ ಯುದ್ಧ ವಿಮಾನಗಳಿಗೆ ಸಾಂಪ್ರದಾಯಿಕ ಸರ್ವಧರ್ಮ ಪೂಜೆಯನ್ನು ನೆರವೇರಿಸಲಾಯಿತು. ಬಳಿಕ ರಫೇಲ್ ಯುದ್ಧ ವಿಮಾನಗಳ ವೈಮಾನಿಕ ಪ್ರದರ್ಶನವನ್ನು ಸಮಾರಂಭದಲ್ಲಿ ಭಾಗಿಯಾಗಿದ್ದ ಗಣ್ಯರು ಕಣ್ತುಂಬಿಕೊಂಡರು.
ರಫೇಲ್ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಯ 17 ಸ್ಕ್ವಾಡ್ರನ್ ಗೋಲ್ಡನ್ ಆ್ಯರೋಸ್ಗೆ ಸಚಿವ ರಾಜನಾಥ್ ಸಿಂಗ್ ಔಪಚಾರಿಕವಾಗಿ ಸೇರ್ಪಡೆಗೊಳಿಸಿದರು.
59 ಸಾವಿರ ಕೋಟಿ ವೆಚ್ಚದಲ್ಲಿ 36 ರಫೇಲ್ ಸಮರ ವಿಮಾನಗಳನ್ನು ಫ್ರಾನ್ಸ್ನಿಂದ ಭಾರತ ಖರೀದಿಸುತ್ತಿದೆ. ಈ ಪೈಕಿ ಈ ಐದು ರಫೇಲ್ ವಿಮಾನಗಳನ್ನು ಜುಲೈ 29ರಂದು ಭಾರತಕ್ಕೆ ತರಲಾಗಿತ್ತು. ಫ್ರಾನ್ಸ್ನ ಡಸ್ಸಾಲ್ಟ್ ಏವಿಯೇಷನ್ ರಫೇಲ್ ವಿಮಾನಗಳನ್ನು ನಿರ್ವಿುಸುತ್ತಿದ್ದು 2021ರ ಒಳಗೆ 36 ವಿಮಾನಗಳೂ ಭಾರತಕ್ಕೆ ಹಸ್ತಾಂತರವಾಗಲಿದೆ. ರಫೇಲ್ ಯುದ್ಧ ವಿಮಾನಗಳು ವಾಯುಪಡೆ ಸೇರಿದರೆ ಭಾರತದ ಸೇನಾಶಕ್ತಿಗೆ ಆನೆಬಲ ಸಿಗಲಿದೆ ಎನ್ನಲಾಗುತ್ತಿದೆ.
Join our WhatsApp group for latest news updates
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm