ಬ್ರೇಕಿಂಗ್ ನ್ಯೂಸ್
01-10-21 12:29 pm Headline Karnataka News Network ದೇಶ - ವಿದೇಶ
ನವದೆಹಲಿ, ಅ.1: ಪಂಜಾಬ್ ಮಾಜಿ ಮುಖ್ಯಮಂತ್ರಿ, ಪಂಜಾಬ್ ಪಾಲಿನ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೊಸ ಪಕ್ಷ ಕಟ್ಟಲು ಮುಂದಾಗಿದ್ದು, 15 ದಿನಗಳಲ್ಲಿ ಹೊಸ ಪಕ್ಷ ಘೋಷಣೆ ಮಾಡಲು ತಯಾರಿ ನಡೆಸಿದ್ದಾರೆ. ಹಲವಾರು ಕಾಂಗ್ರೆಸ್ ಶಾಸಕರು, ರೈತ ಮುಖಂಡರು ಅಮರಿಂದರ್ ಸಿಂಗ್ ಜೊತೆ ಕೈಜೋಡಿಸಲಿದ್ದಾರೆ.
ಕಾಂಗ್ರೆಸ್ ಸೇರಿದಂತೆ ಅಕಾಲಿದಳ ನಾಯಕರು ಕೂಡ ಅಮರಿಂದರ್ ಸಿಂಗ್ ಜೊತೆ ಸೇರಲಿದ್ದಾರೆ ಎನ್ನಲಾಗುತ್ತಿದೆ. ಸದ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಲಿರುವ ಅಮರಿಂದರ್ ಸಿಂಗ್, ಹೊಸ ಪಕ್ಷ ಘೋಷಣೆ ಬಗ್ಗೆ ರೂಪುರೇಷೆಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಖಚಿತ ಮೂಲಗಳನ್ನು ಉಲ್ಲೇಖಿಸಿ, ನ್ಯೂಟ್ 18 ಡಾಟ್ ಕಾಮ್ ವರದಿ ಮಾಡಿದೆ.
ಹಲವು ಅಡೆತಡೆಗಳ ನಡುವೆಯೂ ಪಂಜಾಬ್ ರಾಜ್ಯದಲ್ಲಿ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಲ್ಲಿ ಉಳಿಸಿಕೊಂಡಿದ್ದ ಅಮರಿಂದರ್ ಸಿಂಗ್, ಹೊಸ ಪಕ್ಷ ಕಟ್ಟುವ ಮೂಲಕ ಕಾಂಗ್ರೆಸ್ ಪಾಲಿಗೆ ದೊಡ್ಡ ಹೊಡೆತವನ್ನೇ ನೀಡಲಿದ್ದಾರೆ. ಕಳೆದ ಹಲವು ಚುನಾವಣೆಗಳಲ್ಲಿ ಬಿಜೆಪಿ, ಅಕಾಲಿದಳ ಮೈತ್ರಿ ಎದುರಾಳಿಯ ಮಧ್ಯೆಯೂ ಅಮರಿಂದರ್ ಸಿಂಗ್, ಕಾಂಗ್ರೆಸ್ ಪಾಲಿಗೆ ಆಪತ್ಬಾಂಧವರಾಗಿಯೇ ಇದ್ದರು. ಆದರೆ, ಬಿಜೆಪಿಯಲ್ಲಿದ್ದ ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ಸೇರುತ್ತಲೇ ಪಕ್ಷದ ಮೇಲೆ ಹಿಡಿತ ಸಾಧಿಸಿದ್ದಲ್ಲದೆ ಒಂಬತ್ತು ಬಾರಿಯ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನೇ ದಿಕ್ಕಿಲ್ಲದಂತೆ ಮಾಡಿದ್ದು ಕಾಂಗ್ರೆಸ್ ಹಿರಿಯ ನಾಯಕರಲ್ಲೇ ಅಸಮಾಧಾನ ಸೃಷ್ಟಿಸಿದೆ.
ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕರಾದ ನಟವರ್ ಸಿಂಗ್, ಕಪಿಲ್ ಸಿಬಲ್ ಪಕ್ಷದ ಹೈಕಮಾಂಡ್ ಬಗ್ಗೆ ಅಪಸ್ವರ ಎತ್ತಿದ್ದಾರೆ. ಸಿಧು ಮಾತು ಕೇಳಿ, ಅಮರಿಂದರ್ ಸಿಂಗ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದು ತಪ್ಪು ಎನ್ನುತ್ತಲೇ ಈ ಬೆಳವಣಿಗೆಗೆ ಕಾರಣ ಎನ್ನಲಾಗುವ ರಾಹುಲ್ ಗಾಂಧಿಯನ್ನು ಟೀಕಿಸತೊಡಗಿದ್ದಾರೆ. ಮಾಜಿ ವಿದೇಶಾಂಗ ಸಚಿವ ನಟವರ್ ಸಿಂಗ್ ಪ್ರತಿಕ್ರಿಯಿಸಿ, ರಾಹುಲ್ ಗಾಂಧಿ ಈಗ ಯಾವುದೇ ಅಧಿಕೃತ ಹುದ್ದೆಯನ್ನು ಹೊಂದಿಲ್ಲ. ಹಾಗಿದ್ದರೂ ಪಕ್ಷದ ಎಲ್ಲ ವಿಚಾರಗಳ ಬಗ್ಗೆ ರಾಹುಲ್ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಪಕ್ಷದಲ್ಲೀಗ ಯಾವುದೂ ಸರಿಯಾಗಿ ನಡೆಯುತ್ತಿಲ್ಲ. ಇದಕ್ಕೆ ರಾಹುಲ್ ಸೇರಿ ಮೂವರು ಕಾರಣ ಎಂದು ಬಹಿರಂಗವಾಗಿಯೇ ಅಪಸ್ವರ ಎತ್ತಿದ್ದಾರೆ.
ಇದೇ ವೇಳೆ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಲ್ಲಿ ನವಜೋತ್ ಸಿಂಗ್ ಸಿಧು ಅವರೇ ಮುಂದುವರಿಯಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸದ್ಯದಲ್ಲೇ ಕಾಂಗ್ರೆಸ್ ಘೋಷಣೆ ಮಾಡಲಿದೆ. ಹೊಸ ಸರಕಾರದಲ್ಲಿ ತೆಗೆದುಕೊಂಡ ಕೆಲವು ನಿರ್ಧಾರಗಳು ಮತ್ತು ಕಳಂಕಿತ ಎನ್ನಲಾದ ವ್ಯಕ್ತಿಯನ್ನು ಸಂಪುಟಕ್ಕೆ ಸೇರಿಸಿಕೊಂಡ ವಿಚಾರದಲ್ಲಿ ಸಿಧು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು
Former Punjab chief minister Captain Amarinder Singh may announce a new party in 15 days, sources told News18, adding that some Congress leaders and MLAs are likely to join. Amarinder is also said to take some farmer leaders in confidence. Sources said that not just the legislators, but some key names who are disgruntled with Akalis are also on board. The former CM will send his resignation to Congress soon, sources added.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm