ಬ್ರೇಕಿಂಗ್ ನ್ಯೂಸ್
12-10-21 08:41 pm Headline Karnataka News Network ದೇಶ - ವಿದೇಶ
ಶ್ರೀನಗರ, ಅ.12: ಸಾಮಾನ್ಯ ನಾಗರಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಎನ್ಐಎ ಅಧಿಕಾರಿಗಳು ಉಗ್ರರ ಆಶ್ರಯ ನೀಡುತ್ತಿದ್ದಾರೆ ಎನ್ನಲಾದ ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಜಮ್ಮು ಕಾಶ್ಮೀರದ 16 ಕಡೆಗಳಲ್ಲಿ ಎನ್ಐಎ ಅಧಿಕಾರಿಗಳು ಭದ್ರತಾ ಪಡೆಯ ಯೋಧರ ಜೊತೆಗೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಲಷ್ಕರ್ ಇ- ತೈಬಾ, ಜೈಶ್ ಇ- ಮಹ್ಮದ್, ಹಿಜ್ಬುಲ್ ಮುಜಾಹಿದೀನ್, ಅಲ್ ಬದ್ರ್, ದಿ ರೆಸಿಸ್ಟೆಂಟ್ ಫ್ರಂಟ್, ಪೀಪಲ್ ಅಗೇನ್ಸ್ಟ್ ಫ್ಯಾಸಿಸ್ಟ್ ಫೋರ್ಸ್, ಮುಜಾಹಿದೀನ್ ಗಜ್ವಾತುಲ್ ಹಿಂದ್ ಈ ರೀತಿಯ ಉಗ್ರ ಸಂಘಟನೆಗಳಿಗೆ ಬೆಂಬಲ ನೀಡುತ್ತಿರುವ ಮಂದಿಯನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲಾಗಿದೆ. ಮಧ್ಯ ಕಾಶ್ಮೀರದಲ್ಲಿ ಉಗ್ರರು ಅಡಗುತಾಣಗಳನ್ನು ನಿರ್ಮಿಸಿಕೊಂಡು ಭೂಗತ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆದಿದೆ.
ಜಮ್ಮು ಕಾಶ್ಮೀರದ ಪ್ರಮುಖ ನಗರ ಸೇರಿದಂತೆ ಹಲವು ಕಡೆಗಳಲ್ಲಿ ಉಗ್ರರ ಪರವಾಗಿ ಯುವಕರು ಕಾರ್ಯಾಚರಿಸುತ್ತಿರುವುದನ್ನು ಪತ್ತೆ ಮಾಡಿದ್ದು, ಅದನ್ನು ಆಧರಿಸಿ ದಾಳಿ ನಡೆಸಲಾಗಿದೆ. ಸೋಮವಾರ ಇಮ್ತಿಯಾಜ್ ಅಹ್ಮದ್ ದರ್ ಎನ್ನುವ ಒಬ್ಬ ಉಗ್ರನನ್ನು ಭದ್ರತಾ ಪಡೆ ಎನ್ಕೌಂಟರ್ ಮಾಡಿ ಸಾಯಿಸಿತ್ತು. ಇಮ್ತಿಯಾಜ್ ದರ್, ಕಾಶ್ಮೀರದಲ್ಲಿ ಹೊಸತಾಗಿ ಹುಟ್ಟಿಕೊಂಡಿರುವ ದಿ ರೆಸಿಸ್ಟೆಂಟ್ ಫ್ರಂಟ್ ಸಂಘಟನೆಯ ಸದಸ್ಯನಾಗಿದ್ದ. ರೆಸಿಸ್ಟಂಟ್ ಫ್ರಂಟ್ ಸಂಘಟನೆ, ಲಷ್ಕರ್ ಇ- ತಯ್ಬಾ ಉಗ್ರ ಸಂಘಟನೆಯ ಅಂಗಸಂಸ್ಥೆಯಾಗಿದೆ. ಇಮ್ತಿಯಾಜ್ ಕಳೆದ ವಾರ ಬಂಡಿಪೋರಾ ಜಿಲ್ಲೆಯಲ್ಲಿ ಸಾಮಾನ್ಯ ನಾಗರಿಕನನ್ನು ಗುರಿಯಾಗಿಸಿ ದಾಳಿ ನಡೆಸಿ, ಸಾಯಿಸಿದ್ದ. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಇಮ್ತಿಯಾಜ್ ಪತ್ತೆಗೆ ಕಾರ್ಯಾಚರಣೆ ನಡೆಸಿತ್ತು. ಇದೇ ವೇಳೆ, ಐವರು ಭದ್ರತಾ ಪಡೆ ಯೋಧರು ಸಾವು ಕಂಡಿದ್ದರು.
The NIA (National Investigation Agency) on Tuesday conducted raids at 16 locations across Jammu and Kashmir. According to the details, the raids were conducted at locations in Shopian, Pulwama and Srinagar, in connection with a new case linked to the Over Ground Workers (OGWs) of various Tanzeems including The Resistance Front (TRF). The NIA also raided 5 locations in Delhi-NCR in Mundra drug seizure case.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 08:29 pm
Mangalore Correspondent
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am