ಬ್ರೇಕಿಂಗ್ ನ್ಯೂಸ್
15-10-21 05:53 pm Headline Karnataka News Network ದೇಶ - ವಿದೇಶ
ಮುಂಬೈ, ಅ.15: ಬಾಲಿವುಡ್ ಡ್ರಗ್ಸ್ ನಂಟಿನ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಸಿಬಿ ಝೋನಲ್ ಡೈರೆಕ್ಟರ್ ಸಮೀರ್ ವಾಂಖೇಡೆಗೆ ಹೆಚ್ಚುವರಿ ಭದ್ರತೆ ನೀಡಲಾಗಿದೆ. ಇತ್ತೀಚೆಗೆ, ಮುಂಬೈ ಹಡಗಿನಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಹಲವರ ಬಂಧನದ ಬಳಿಕ ಸಮೀರ್ ವಾಂಖೇಡೆ ತನ್ನನ್ನು ಯಾರೋ ಫಾಲೋ ಮಾಡುತ್ತಿದ್ದಾರೆ. ಕೆಲವು ಪೊಲೀಸ್ ಅಧಿಕಾರಿಗಳೇ ನನ್ನ ಹಿಂದೆ ಇದ್ದಾರೆ. ನನಗೆ ಹೆಚ್ಚುವರಿ ಭದ್ರತೆ ನೀಡಬೇಕೆಂದು ಮುಂಬೈ ಪೊಲೀಸ್ ಕಮಿಷನರ್ ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದರು.
ಈ ಬಗ್ಗೆ ಲಿಖಿತ ದೂರು ಆಧರಿಸಿ, ಮುಂಬೈ ಪೊಲೀಸ್ ಕಮಿಷನರ್ ಹೇಮಂತ್ ನಗ್ರಾಲೆ ತನಿಖೆಗೆ ಆದೇಶ ಮಾಡಿದ್ದಾರೆ. ಇದಲ್ಲದೆ, ಸಮೀರ್ ವಾಂಖೇಡೆಗೆ ಹೆಚ್ಚುವರಿ ಭದ್ರತೆಯನ್ನೂ ಒದಗಿಸಿದ್ದಾರೆ. ಅವರಿಗೆ ನೀಡಲಾಗಿದ್ದ ಕಚೇರಿ ವಾಹನವನ್ನೂ ಬದಲಿಸಲಾಗಿದೆ. ತನ್ನ ತಾಯಿಯನ್ನು ಸಮಾಧಿ ಮಾಡಿದ್ದ ಜಾಗಕ್ಕೆ ಇತ್ತೀಚೆಗೆ ಸಮೀರ್ ವಾಂಖೇಡೆ ತೆರಳಿದ್ದಾಗಲೂ ಯಾರೋ ಹಿಂದಿನಿಂದ ಬಂದಿದ್ದಾರೆ ಎಂದು ವಾಂಖೇಡೆ ಆರೋಪಿಸಿದ್ದರು. ಈ ಬಗ್ಗೆ ಅಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದಿದ್ದರು.
ಅದಕ್ಕೂ ಮುನ್ನ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಸಂದರ್ಭ ದಾಳಿ ನಡೆಸಿದ್ದ ವೇಳೆ ಬೇರೆ ಕೆಲವು ಪೊಲೀಸರು ಅಲ್ಲಿಗೆ ಬಂದಿದ್ದರು ಎಂದು ಸಮೀರ್ ಹೇಳಿಕೆ ನೀಡಿದ್ದರು. ನನ್ನ ರಹಸ್ಯ ಕಾರ್ಯಾಚರಣೆ ಬಗ್ಗೆ ಯಾರೋ ಗಮನಿಸುತ್ತಿದ್ದಾರೆ. ಕೆಲವರು ನನ್ನ ಹಿಂದೆ ಬಿದ್ದು ಯಾರಿಗೋ ಮಾಹಿತಿ ನೀಡುತ್ತಿದ್ದಾರೆಂದು ಅನುಮಾನ ಪಟ್ಟಿದ್ದರು. ಈ ಬಗ್ಗೆ ಡಿಜಿಪಿ ಮತ್ತು ಮುಂಬೈ ಪೊಲೀಸ್ ಕಮಿಷನರ್ ಗೆ ಪತ್ರ ಬರೆದಿದ್ದರು.
ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಈಗಾಗ್ಲೇ 20ಕ್ಕೂ ಹೆಚ್ಚು ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೆ, ಪ್ರಕರಣದಲ್ಲಿ ಹಲವು ಪಕ್ಷಗಳ ರಾಜಕೀಯ ನಾಯಕರು ಸಂಬಂಧ ಹೊಂದಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು.
The security cover of Narcotics Control Bureau (NCB) Zonal Director Sameer Wankhede, who is currently supervising the investigations in the high-profile Mumbai cruise drug bust case, has been increased after he alleged that two cops were monitoring his movements. As per Wankhede's new security arrangement, a number of armed bodyguards, from Mumbai Police and NCB, have been added to his security fleet. His official vehicle has also been changed due to security reasons.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm