ಬ್ರೇಕಿಂಗ್ ನ್ಯೂಸ್
19-10-21 10:38 pm Headline Karnataka News Network ದೇಶ - ವಿದೇಶ
ಅಮರಾವತಿ, ಅ.19: ಕೇಂದ್ರ ಸರಕಾರ ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 50 ಸಾವಿರ ಪರಿಹಾರ ನೀಡುವಂತೆ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದ್ದರೆ, ಆಂಧ್ರ ಪ್ರದೇಶ ಸರಕಾರ ಒಂದು ಹೆಜ್ಜೆ ಮುಂದಿಟ್ಟಿದೆ. ಕೋವಿಡ್ ನಿಂದ ಮೃತಪಟ್ಟ ಸರಕಾರಿ ನೌಕರರ ಕುಟುಂಬಸ್ಥರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲು ಮುಂದಾಗಿದೆ.
ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ಕೋವಿಡ್ ಸೋಂಕಿನಿಂದ ಮೃತಪಟ್ಟ ಸರಕಾರಿ ನೌಕರರಿಗೆ ಉದ್ಯೋಗ ನೀಡುವುದಕ್ಕೆ ಆದೇಶ ಮಾಡಿದ್ದಾರೆ. ಅಲ್ಲದೆ, ಈ ಬಗ್ಗೆ ಪರಿಶೀಲನೆ ನಡೆಸಿ ನವೆಂಬರ್ 30ರೊಳಗೆ ನೇಮಕಾತಿ ಪ್ರಕ್ರಿಯೆ ಮುಗಿಸುವಂತೆ ಸೂಚನೆ ನೀಡಿದ್ದಾರೆ.
ವೈದ್ಯಕೀಯ, ಕಂದಾಯ, ಪೊಲೀಸ್ ಹೀಗೆ ಕೊರೊನಾ ವಾರಿಯರ್ ಆಗಿ ಕೆಲಸ ಮಾಡಿದ್ದ ಸರಕಾರಿ ನೌಕರರ ಪೈಕಿ ಹಲವಾರು ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಇಂಥ ಕುಟುಂಬಗಳನ್ನು ಪತ್ತೆ ಮಾಡಿ, ಅಲ್ಲಿನ ಸದಸ್ಯರಿಗೆ ಅನುಕಂಪದ ನೆಲೆಯಲ್ಲಿ ಕೆಲಸ ಕೊಡುವ ಬಗ್ಗೆ ಮೃತ ನೌಕರರ ಮಾಹಿತಿಯನ್ನು ಸಂಗ್ರಹಿಸುವಂತೆ ಜಗನ್ ಸೂಚಿಸಿದ್ದಾರೆ.
ಪರಿಶೀಲನಾ ಸಭೆಯಲ್ಲಿ ರಾಜ್ಯದ ವಿವಿಧ ಸರಕಾರಿ ಆಸ್ಪತ್ರೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಆಧರಿಸಿ ಉದ್ಯೋಗ ಕ್ಯಾಲೆಂಡರ್ ತಯಾರಿಸಲಾಗಿದೆ. ಅ.20ರಂದು ಈ ಬಗ್ಗೆ ಅಧಿಕೃತ ನೇಮಕಾತಿ ಆದೇಶ ಪ್ರಕಟಿಸುವುದಾಗಿ ಸಭೆಯಲ್ಲಿ ಮುಖ್ಯಮಂತ್ರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
The family of the Andhra Pradesh government employees who died of COVID-19 will be offered government jobs, Chief Minister YS Jagan Mohan Reddy announced on Monday, October 18. He directed the officials to provide jobs to the kin of deceased employees on compassionate grounds. During a review meeting, CM Jagan directed the officials to immediately provide jobs to a family member of the employees who succumbed to COVID-19 and complete the process by November 30.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm