ಬ್ರೇಕಿಂಗ್ ನ್ಯೂಸ್
21-10-21 02:58 pm Headline Karnataka News Network ದೇಶ - ವಿದೇಶ
ಮುಂಬೈ, ಅ 21: ಆರ್ಯನ್ ಖಾನ್ ಮಾದಕ ದ್ರವ್ಯ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ)ನ ತನಿಖಾ ಅಧಿಕಾರಿಗಳ ತಂಡ ಮುಂಬೈನಲ್ಲಿ ಬಾಲಿವುಡ್ ನಟ, ನಟಿಯರ ಮನೆಗಳ ಮೇಲೆ ಎನ್‌ಸಿಬಿ ದಿಢೀರ್ ದಾಳಿ ನಡೆಸಿದೆ. ಬಾಲಿವುಡ್ ನಟ ಶಾರುಖ್ ಖಾನ್ ಮನೆ ಮನ್ನತ್ ಮೇಲೆ ದಾಳಿ ನಡೆಸಿದೆ.

ಮುಂಬೈನ ಬಾಂದ್ರಾದಲ್ಲಿರುವ ನಟ ಶಾರುಖ್ ಖಾನ್ ನಿವಾಸ 'ಮನ್ನತ್'ಗೆ ತೆರಳಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಆರ್ಯನ್ ಖಾನ್‌ರನ್ನು ಬಂಧಿಸಲಾಗಿರುವ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಅಥವಾ ಸಂಬಂಧಪಟ್ಟಂತೆ ಎನ್‌ಸಿಬಿ ಅಧಿಕಾರಿಗಳು ತನಿಖೆಗಾಗಿ ಶೋಧ ನಡೆಸಲು ಶಾರುಖ್ ನಿವಾಸಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎನ್ಸಿಬಿಯ ಮತ್ತೊಂದು ತಂಡ ಬಾಲಿವುಡ್ ನಟಿ ಅನನ್ಯಾ ಪಾಂಡೆ ಮನೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಇದೇ ವೇಳೆ ಎನ್‌ಸಿಬಿ ಅನನ್ಯಾ ಪಾಂಡೆಗೆ ಸಮನ್ಸ್ ಜಾರಿ ಮಾಡಿದೆ.

ಇಂದು ಮುಂಜಾನೆ ನಟ ಶಾರುಖ್ ಖಾನ್ ಆರ್ಥರ್ ರೋಡ್ ಜೈಲಿಗೆ ತೆರಳಿ ಪುತ್ರ ಆರ್ಯನ್ರನ್ನು ಭೇಟಿಯಾಗಿದ್ದರು. ಇದಾದ ಕೆಲವು ಸಮಯದ ನಂತರ ಎನ್‌ಸಿಬಿ ಶೋಧಕ್ಕಾಗಿ ದಾಳಿ ನಡೆಸಿದೆ. ಪ್ರಸ್ತುತ ಆರ್ಯನ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದು, ಹೈಕೋರ್ಟ್ನಲ್ಲಿ ಅಕ್ಟೋಬರ್ 26ರಂದು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಸಹ ಆರೋಪಿ ಅರ್ಬಾಜ್ ಮರ್ಚೆಂಟ್ ಮತ್ತು ಮುನ್‌ಮುನ್ ಧಮೇಚಾ ಜೊತೆಗೆ ಬಾಲಿವುಡ್ ಸ್ಟಾರ್ ಪುತ್ರನಿಗೆ ಜಾಮೀನು ನೀಡಲು ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ. ಆರ್ಯನ್ ಖಾನ್ ಇನ್ನೂ ಐದು ದಿನಗಳ ಕಾಲ ಕಸ್ಟಡಿಯಲ್ಲಿರಬೇಕಾಗಿದೆ.
Teams of Narcotics Control Bureau (NCB) are paying a 'visit' to the residences of Bollywood megastar Shah Rukh Khan in Bandra West, actress Ananya Pande in Khar west, and raided a location in Andheri on Thursday as part of the ongoing probe into the October 2 luxury cruiser rave party.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm