ಚಿನ್ನದ ಕುವರ ನೀರಜ್ ಚೋಪ್ರಾ ಸೇರಿ 12 ಸಾಧಕರಿಗೆ ಖೇಲ್ ರತ್ನ ; ಕ್ರಿಕೆಟಿಗ ಶಿಖರ್ ಧವನ್, ಕನ್ನಡಿಗ ಸುಹಾಸ್ ಸೇರಿ 35 ಮಂದಿಗೆ ಅರ್ಜುನ ಪ್ರಶಸ್ತಿ 

03-11-21 11:28 am       Headline Karnataka News Network   ದೇಶ - ವಿದೇಶ

ಭಾರತಕ್ಕೆ ಮೊಟ್ಟಮೊದಲ ಬಾರಿಗೆ ಅಥ್ಲೆಟಿಕ್ಸ್ ವಿಭಾಗದಲ್ಲಿ ಚಿನ್ನ ತಂದುಕೊಟ್ಟಿದ್ದ ನೀರಜ್ ಚೋಪ್ರಾ ಮತ್ತು ಭಾರತ ಹಾಕಿ ತಂಡದ ನಾಯಕ ಮನ್‌ಪ್ರೀತ್ ಸಿಂಗ್ ಸೇರಿದಂತೆ 12 ಮಂದಿಗೆ ಕ್ರೀಡಾ ಸಾಧಕರ ಅತ್ಯುನ್ನತ ಪುರಸ್ಕಾರ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಿಸಲಾಗಿದೆ. 

ನವದೆಹಲಿ, ನ.3: ಭಾರತಕ್ಕೆ ಮೊಟ್ಟಮೊದಲ ಬಾರಿಗೆ ಅಥ್ಲೆಟಿಕ್ಸ್ ವಿಭಾಗದಲ್ಲಿ ಚಿನ್ನ ತಂದುಕೊಟ್ಟಿದ್ದ ನೀರಜ್ ಚೋಪ್ರಾ ಮತ್ತು ಭಾರತ ಹಾಕಿ ತಂಡದ ನಾಯಕ ಮನ್‌ಪ್ರೀತ್ ಸಿಂಗ್ ಸೇರಿದಂತೆ 12 ಮಂದಿಗೆ ಕ್ರೀಡಾ ಸಾಧಕರ ಅತ್ಯುನ್ನತ ಪುರಸ್ಕಾರ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಿಸಲಾಗಿದೆ. 

ಈ ಬಗ್ಗೆ ಕ್ರೀಡಾ ಸಮಿತಿಯು ಕೇಂದ್ರ ಸರಕಾರಕ್ಕೆ ಮಾಡಿದ್ದ ಶಿಫಾರಸಿನಲ್ಲಿ 11 ಮಂದಿ ಕ್ರೀಡಾ ಸಾಧಕರ ಹೆಸರುಗಳಿದ್ದವು. ಟೋಕಿಯೊದಲ್ಲಿ ಕಂಚಿನ ಪದಕ ಜಯಿಸಲು ಕಾರಣವಾಗಿದ್ದ ಭಾರತ ಹಾಕಿ ತಂಡದ ನಾಯಕ ಮನ್‌ಪ್ರೀತ್ ಅವರನ್ನು ಕೊನೆಯಲ್ಲಿ ಸೇರ್ಪಡೆ ಮಾಡಲಾಗಿದೆ. ಮಂಗಳವಾರ ಕೇಂದ್ರ ಕ್ರೀಡಾ ಸಚಿವಾಲಯ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದೆ. 

ಇದೇ ವೇಳೆ, ಕ್ರಿಕೆಟಿಗ ಶಿಖರ್ ಧವನ್, ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ, ಕನ್ನಡಿಗ ಸುಹಾಸ್ ಯತಿರಾಜ್ ಸೇರಿದಂತೆ 35 ಸಾಧಕರಿಗೆ ಅರ್ಜುನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನವೆಂಬರ್ 13ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. 

ಮೇಜರ್ ಧ್ಯಾನಚಂದ್ ಖೇಲ್‌ರತ್ನ ಪುರಸ್ಕಾರಕ್ಕೆ ನೀರಜ್ ಚೋಪ್ರಾ (ಅಥ್ಲೆಟಿಕ್ಸ್), ರವಿಕುಮಾರ್ (ಕುಸ್ತಿ), ಲವ್ಲಿನಾ ಬೊರ್ಗೊಹೈನ್ (ಬಾಕ್ಸಿಂಗ್), ಪಿ.ಆರ್. ಶ್ರೀಜೇಶ್ (ಹಾಕಿ), ಅವನಿ ಲೇಖರಾ (ಪ್ಯಾರಾಶೂಟಿಂಗ್), ಸುಮಿತ್ ಅಂಟಿಲ್ (ಪ್ಯಾರಾ ಅಥ್ಲೆಟಿಕ್ಸ್), ಪ್ರಮೋದ್ ಭಗತ್, ಕೃಷ್ಣ ನಾಗರ್ (ಇಬ್ಬರೂ ಪ್ಯಾರಾ ಬ್ಯಾಡ್ಮಿಂಟನ್), ಮನೀಷ್ ನರ್ವಾಲ್ (ಪ್ಯಾರಾ ಶೂಟಿಂಗ್), ಮಿಥಾಲಿ ರಾಜ್ (ಕ್ರಿಕೆಟ್),  ಸುನೀಲ್ ಚೆಟ್ರಿ (ಫುಟ್‌ಬಾಲ್), ಮನ್‌ಪ್ರೀತ್ ಸಿಂಗ್ (ಹಾಕಿ) ಅವರನ್ನು ಆಯ್ಕೆ ಮಾಡಲಾಗಿದೆ.‌ 

ಅರ್ಜುನ ಪ್ರಶಸ್ತಿಗೆ ದಿಲ್‌ಪ್ರೀತ್ ಸಿಂಗ್, ಹರ್ಮನ್ ಪ್ರೀತ್ ಸಿಂಗ್, ರೂಪಿಂದರ್ ಪಾಲ್ ಸಿಂಗ್, ಸುರೇಂದರ್ ಕುಮಾರ್, ಅಮಿತ್ ರೋಹಿದಾಸ್, ಬಿರೇಂದ್ರ ಲಕ್ರಾ, ಸುಮಿತ್, ನೀಲಕಂಠ ಶರ್ಮಾ, ಹಾರ್ದಿಕ್ ಸಿಂಗ್, ವಿವೇಕ್ ಸಾಗರ್, ಪ್ರಸಾದ್, ಗುರ್ಜಂತ್ ಸಿಂಗ್, ಮನದೀಪ್ ಸಿಂಗ್, ಶಂಶೇರ್ ಸಿಂಗ್, ಲಲಿತ್ ಕುಮಾರ್ ಉಪಾಧ್ಯಾಯ, ವರುಣ್ ಕುಮಾರ್, ಸಿಮ್ರನ್‌ಜೀತ್ ಸಿಂಗ್ (ಎಲ್ಲರೂ ಹಾಕಿ ಆಟಗಾರರು), ಅರ್ಪಿಂದರ್ ಸಿಂಗ್ (ಅಥ್ಲೆಟಿಕ್ಸ್), ಸಿಮ್ರನ್‌ಜೀತ್ ಕೌರ್ (ಬಾಕ್ಸಿಂಗ್), ಶಿಖರ್ ಧವನ್ (ಕ್ರಿಕೆಟ್), ಸಿ.ಎ. ಭವಾನಿದೇವಿ (ಫೆನ್ಸಿಂಗ್), ಮೋನಿಕಾ (ಹಾಕಿ), ವಂದನಾ ಕಟಾರಿಯಾ (ಹಾಕಿ), ಸಂದೀಪ್ ನರ್ವಾಲ್ (ಕಬಡ್ಡಿ), ಹಿಮಾನಿ ಉತ್ತಮ್ ಪರಬ್ (ಮಲ್ಲಕಂಬ), ಅಭಿಷೇಕ್ ವರ್ಮಾ (ಶೂಟಿಂಗ್), ಅಂಕಿತಾ ರೈನಾ (ಟೆನಿಸ್), ದೀಪಕ್ ಪೂನಿಯಾ (ಕುಸ್ತಿ), ಯೋಗೇಶ್ ಖತುನಿಯಾ, ನಿಶಾದ್ ಕುಮಾರ್, (ಪ್ಯಾರಾ ಅಥ್ಲೆಟಿಕ್ಸ್), ಸುಹಾಸ್ ಯತಿರಾಜ್ (ಪ್ಯಾರಾ ಬ್ಯಾಡ್ಮಿಂಟನ್), ಸಿಂಗರಾಜ್ ಅದಾನಾ (ಪ್ಯಾರಾ ಶೂಟಿಂಗ್), ಭಾವಿನಾ ಪಟೇಲ್ (ಪ್ಯಾರಾ ಟಿಟಿ), ಹರವಿಂದರ್ ಸಿಂಗ್ (ಪ್ಯಾರಾ ಆರ್ಚರಿ), ಶರದ್ ಕುಮಾರ್(ಪ್ಯಾರಾ ಅಥ್ಲೆಟಿಕ್ಸ್) ಅವರನ್ನು ಆಯ್ಕೆ ಮಾಡಲಾಗಿದೆ. 

ರಾಷ್ಟ್ರೀಯ ಕ್ರೀಡಾ ಪ್ರೋತ್ಸಾಹಕ ಪುರಸ್ಕಾರಕ್ಕೆ ಮಾನವ ರಚನಾ ಶಿಕ್ಷಣ ಸಂಸ್ಥೆ ಮತ್ತು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯನ್ನು ಪರಿಗಣಿಸಲಾಗಿದೆ. ಮೌಲಾನಾ ಅಬುಲ್ ಕಲಾಂ ಆಜಾದ್ ಟ್ರೋಫಿಗೆ ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯ ಆಯ್ಕೆಯಾಗಿದೆ.

Olympic gold medalist Neeraj Chopra, wrestler Ravi Kumar Dahiya, Boxer Lovlina Borgohain and Indian men’s hockey team goalkeeper PR Sreejesh, Para Shooter Avani Lekhara, Para Athlete Sumit Antil, Para-Badminton players Pramod Bhagat and Krishna Nagar, Para Shooter Manish Narwal, cricketer Mithali Raj, footballer Sunil Chhetri and Indian men’s hockey team captain Manprit Singh are the 12 sportspersons who will be honoured with the Khel Ratna the National Sports Awards 2021. Ministry of Youth Affairs & Sports announced the National Sports Awards 2021 on Tuesday. The awardees will receive their awards from the President of India at a specially organized function at the Darbar Hall of Rashtrapati Bhavan on 13th November, 2021 (Saturday) at 1630 hrs. National Sports Awards are given every year to recognize and reward excellence in sports.