ದೇಶದಲ್ಲಿ 36,24,197 ಮಂದಿ ಕೊರೊನಾ ಸೋಂಕಿನಿಂದ ಗುಣಮುಖ ; 24 ಗಂಟೆಯಲ್ಲಿ 1,201 ಮಂದಿ ಬಲಿ

12-09-20 12:34 pm       Headline Karnataka News Network   ದೇಶ - ವಿದೇಶ

ದೇಶದಲ್ಲಿ ಒಂದೆಡೆ ಕೊರೊನಾ ಸೋಂಕು ನಾಗಾಲೋಟದಲ್ಲಿದರೆ ಅಷ್ಟೇ ವೇಗದಲ್ಲಿ ಸೋಂಕಿತರು ಚೇತರಿಕೆ ಕಾಣುತ್ತಿದ್ದಾರೆ. ದೇಶದಲ್ಲಿ 36,24,197 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ನವದೆಹಲಿ, ಸೆಪ್ಟೆಂಬರ್ 12: ದೇಶದಲ್ಲಿ ಕೊರೊನಾ ಸೋಂಕು ಸೆಪ್ಟೆಂಬರ್ ತಿಂಗಳಲ್ಲಿ ದಿನದಿನವೂ ಹೊಸ ದಾಖಲೆ ಬರುತ್ತಿದೆ. ಕಳೆದ 24 ಗಂಟೆಯಲ್ಲಿ 97,570 ಮಂದಿಗೆ ಹೊಸದಾಗಿ ಸೋಂಕು ದೃಢವಾಗಿದೆ.

ಒಂದೇ ದಿನ ದೇಶದಲ್ಲಿ 97,570 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 46,59,985ಕ್ಕೆ ಏರಿಕೆ ಆಗಿದೆ. ಇನ್ನೂ 24 ಗಂಟೆಯಲ್ಲಿ 1,201 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

46,59,985 ಪೈಕಿ 9,58,316 ಸಕ್ರಿಯ ಪ್ರಕರಣಗಳಿದ್ದು, 36,24,197 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,201 ಮಂದಿ ಕೊರೊನಾಗೆ ಬಲಿಯಾಗಿದ್ದು, ಇಲ್ಲಿವರೆಗೆ 77,470 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಶುಕ್ರವಾರ 10,91,251 ಮಂದಿಯನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿತ್ತು. ಈ ಮೂಲಕ ಇದುವರೆಗೂ 5,51,89,226 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ. ಪ್ರಪಂಚದಲ್ಲಿ ಸೋಂಕಿತರ ಸಂಖ್ಯೆ 2.83 ಕೋಟಿಗೆ ಏರಿದ್ದು, ಭಾರತ 2ನೇ ಸ್ಥಾನದಲ್ಲಿದೆ.

ರಾಜ್ಯದಲ್ಲಿ ಶುಕ್ರವಾರ 9,464 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 4,40,41ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 4,40,411 ಸೋಂಕಿತರ ಪೈಕಿ 98,326 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 12,545 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 770 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Join our WhatsApp group for latest news updates